ಉಡುಪಿ | ಪತ್ರಿಕಾ ಭವನದಲ್ಲಿ ಗ್ರಂಥಾಲಯ ಉದ್ಘಾಟನೆ

Date:

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು.

- Advertisement -

ಬಳಿಕ ಮಾತನಾಡಿದ ಡಾ.ವೈ.ಸುದರ್ಶನ್ ರಾವ್, “ಕಂಪ್ಯೂಟರ್, ಮೊಬೈಲ್‌ಗಳ ಪರಿಣಾಮವಾಗಿ ಮನುಷ್ಯ ತನ್ನ ಮೆದುಳಿನ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾನೆ. ಹಾಗಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಅತೀ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆಯಲ್ಲಿ ಪುಸ್ತಕಾಲಯವನ್ನು ಸ್ಥಾಪಿಸಬೇಕು. ಪುಸ್ತಕ ಓದುವುದರಿಂದ ಭಾಷೆ ಮೇಲೆ ಹಿಡಿತ ಬರುತ್ತದೆಯೇ ಹೊರತು ಮೊಬೈಲ್, ಟಿವಿಗಳಿಂದಲ್ಲ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...
ಉಡುಪಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರಿಗೆ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪುಸ್ತಕ ಹಸ್ತಾಂತರಿಸಿದರು. ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ, ಕಾರ್ಯದರ್ಶಿ ಡಾ.ಗಣನಾಥ್ ಎಕ್ಕಾರ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ ಮಾತನಾಡಿದರು.

ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಸದಸ್ಯರಾದ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್, ಕಸಾಪ ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ಪತ್ರಕರ್ತರ ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಹಾರಾಡಿ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಉಡುಪಿ | ಜಿಲ್ಲಾಡಳಿತದಿಂದ ದಲಿತರ ನಿರ್ಲಕ್ಷ್ಯ: ಉಸ್ತುವಾರಿ ಸಚಿವರಿಗೆ ದ‌ಸಂಸ ತರಾಟೆ

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಮನೆಯೇ ಗ್ರಂಥಾಲಯದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ವಿ.ಬಿ.ಜಿ.ರಾಮ್ ಜಿ ಯೋಜನೆಯ ಕೂಲಿ ಹಣ ಪಾವತಿಗೆ ಅಧಿಕಾರಿಗಳಿಂದ ವಿಳಂಬ : ಮದನಹಳ್ಳಿ ಮಹೇಶ್ ಆರೋಪ

ವಿ.ಬಿ.ಜಿ ರಾಮ್ ಜಿ ಯೋಜನೆಯಡಿ ಕೆಲಸ ನಿರ್ವಹಿಸಿದ ಕೂಲಿ ಕಾರ್ಮಿಕರಿಗೆ ಕೂಲಿ...

ಚಿಕ್ಕಮಗಳೂರು | ರೈತನನ್ನು ಅಟ್ಟಾಡಿಸಿ ಕೊಂದ ಕಾಡಾನೆ 

ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದ ವ್ಯಕ್ತಿಯನ್ನು ಕಾಡಾನೆ ತುಳಿದು ಸಾಯಿಸಿದ...

ಹಾಸನ | ಎಚ್‌.ಡಿ. ಕುಮಾರಸ್ವಾಮಿ ಭೇಟಿಗೆ ಬಂದ ಮುಸುಕುಧಾರಿ ಬಂಧನಕ್ಕೆ ಆಗ್ರಹ

ನಗರದ ಪತ್ರಿಕಾಗೋಷ್ಠಿಯಲ್ಲಿ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ರಾಜ್ಯ ಸಂಚಾಲಕ...