ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ

Date:

Advertisements

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು.

ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ನಾಮಫಲಕವನ್ನು ಅನಾವರಣಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಕಾಲಕಾಲಕ್ಕೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡುವುದು ಅತೀ ಅಗತ್ಯವಾಗಿದೆ. ಅದೇ ರೀತಿ ಪ್ರಥಮ ಚಿಕಿತ್ಸೆಯ ಕುರಿತು ಕೂಡ ಪತ್ರಕರ್ತರಿಗೆ ತರಬೇತಿ ನೀಡುವುದು ಮುಖ್ಯ. ಇದಕ್ಕೆಲ್ಲ ನಮ್ಮ ಸಂಸ್ಥೆಯಿಂದ ಸಹಕಾರ ನೀಡ ಲಾಗುವುದು ಎಂದು ತಿಳಿಸಿದರು.

1005410006

ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆಯ ವತಿಯಿಂದ ಭಾರತೀಯ ಸೇನೆಗೆ ನೀಡಲಾದ 55,555ರೂ. ಮೊತ್ತದ ದೇಣಿಗೆಯ ಚೆಕ್‌ನ್ನು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಅವರ ಮೂಲಕ ಉಡುಪಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.

Advertisements

ಮುಖ್ಯ ಅತಿಥಿಗಳಾಗಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ, ಉಡುಪಿ ಕರಾವಳಿ ಐಎಂಎ ಅಧ್ಯಕ್ಷ ಡಾ.ಸುರೇಶ್ ಶೆಣೈ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಪತ್ರಕರ್ತ ಜನಾರ್ದನ ಕೊಡವೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಸೂಚನಾ ಫಲಕದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಕಚೇರಿ, ಉಡುಪಿ ಪತ್ರಿಕಾ ಭವನ(ಪ್ರೆಸ್‌ಕ್ಲಬ್), ಐಎಂಎ ಭವನ, ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಹೋಗುವ ಮಾರ್ಗಯನ್ನು ಸೂಚಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X