ಉಡುಪಿ | ಬಿಜೆಪಿ ಶಾಸಕರಿಂದ ಸುದ್ದಿಗೋಷ್ಠಿ: ಕರಾವಳಿ ನಿರ್ಲಕ್ಷ್ಯ ಮಾಡಿದರೆ ಸಿಎಂ ಮನೆ ಮುಂದೆ ಧರಣಿಯ ಎಚ್ಚರಿಕೆ

Date:

ಉಡುಪಿಯಲ್ಲಿ ಇಂದು ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

- Advertisement -

ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧದಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, “ಕಳೆದ ಜುಲೈನಿಂದ ಈತನಕ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಯಾವುದೇ ಅನುದಾನಗಳು ಬಂದಿಲ್ಲ. ಜಿಲ್ಲೆಯಲ್ಲಿ ವ್ಯಾಪಕ ಮಳೆಹಾನಿ ಸಂಭವಿಸಿದೆ. ಈ ವರ್ಷದ ಮಳೆಗಾಲದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ. ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ಸಂಬಂಧಪಟ್ಟ ಮಂತ್ರಿಗಳನ್ನು ಭೇಟಿಯಾಗಿದ್ದೇವೆ. ಆದರೆ ಹಣ ಬಿಡುಗಡೆಯಾಗಿಲ್ಲ” ಎಂದು ಆರೋಪ ಮಾಡಿದರು.

ರಾಜ್ಯ ಸರ್ಕಾರ ಇದೇ ಪ್ರವೃತ್ತಿಯನ್ನು ಮುಂದುವರಿಸಿದರೆ ಕರಾವಳಿ ಜಿಲ್ಲೆಗಳ ಶಾಸಕರು ಮುಖ್ಯಮಂತ್ರಿ ಮನೆ ಎದುರು ಧರಣಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...