ತಲವಾರು ಹಿಡಿದು ಮನೆಗೆ ನುಗ್ಗಿದ ಕಿಡಿಗೇಡಿಗಳು ಹೆಂಡತಿ ಮಗುವಿನ ಜೊತೆಗೆ ಮಲಗಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಡುಪಿಯ ಪುತ್ತೂರು ಬಳಿ ನಡೆದಿದೆ. ಮೃತನಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು ಗುರುತಿಸಲಾಗಿದೆ.
ಉಡುಪಿ ಪುತ್ತೂರಿನ ಮನೆಯಲ್ಲಿ ಹೆಂಡತಿ ಮಗುವಿನೊಂದಿಗೆ ರಾತ್ರಿ ಸುಮಾರು ಹನ್ನೊಂದು ಘಂಟೆ ಸುಮಾರಿಗೆ ಮಲಗಿದ್ದ ಸಂದರ್ಭ ಮನೆಗೆ ಬಂದ ದುಷ್ಕರ್ಮಿಗಳು ಮನೆ ಬಾಗಿಲು ಬಡಿದು ವಿನಯ್ ಇದ್ದಾನ ಎಂದು ಕೇಳಿದ್ದಾರೆ, ಸ್ನೇಹಿತರಿರಬಹುದು ಎಂದು ಮನೆಯವರು ಬಾಗಿಲು ತೆರದಾಗ, ಮೂವರು ದುಷ್ಕರ್ಮಿಗಳು ನೇರವಾಗಿ ವಿನಯ್ ಮಲಗಿದ್ದ ಕೋಣೆಗ ತೆರಳಿ ತಾವು ತಂದಿದ್ದ ತಲವಾರನ್ನು ಬೀಸಿ ಹತ್ಯೆ ಮಾಡಿದ್ದಾರೆ.

ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ಮನೆಯವು ಹೌಹಾರಿದ್ದಾರೆ. ತಡೆಯಲು ಹೋದ ಪತ್ನಿಗೂ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಕೊಲೆ ಆರೋಪಿಗಳಾಗಿದ್ದು ಇವರನ್ನು ಪೊಲೀಸರು ಬಂಧಿಸಿದ್ದಾರೆ.

ವಿನಯ್, ಆರೋಪಿ ಆಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿದ್ದ ಎಂಬ ಕಾರಣಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ
ರಾತ್ರಿ ಮೂವರು ಆರೋಪಿಗಳು ಮನೆಯ ಒಳಗೆ ನುಗ್ಗಿ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗ ರವರ ತಲೆಯನ್ನು ಕಡಿದು, ಕೊಲೆ ಮಾಡಿದ್ದಾರೆಂದು ದರ. ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾದರೂ ಎಂದು ತಿಳಿದುಬಂದಿದೆ ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ವ್ಯಕ್ತಿ