ಉಡುಪಿ | ಮುಂದುವರಿದ ಮಳೆ: ಹಲವು ಮನೆ ಜಲಾವೃತ; ಬಿಇಓಗಳಿಗೆ ರಜೆ ಘೋಷಣೆಯ ಜವಾಬ್ದಾರಿ

Date:

Advertisements

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಕರಂಬಳ್ಳಿ ವೆಂಕಟರಮಣ ಲೇಔಟ್ ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ.

ಭಾರೀ ಮಳೆಯಿಂದ ಇಲ್ಲಿಗೆ ಸಮೀಪದಲ್ಲಿರುವ ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ ಹತ್ತಾರು ಮನೆಗಳು ಜಲಾವೃತಗೊಂಡಿದೆ. ಮನೆ ಎದುರಿನ ಅಂಗಳದಲ್ಲಿ ನಿಲ್ಲಿಸಲಾದ ಬೈಕ್, ಕಾರುಗಳು ಕೂಡ ನೀರು ಪಾಲಾಗುತ್ತಿದೆ. ಈ ಮನೆಗಳ ಮಕ್ಕಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕೂಡ ಜಲಾವೃತಗೊಂಡಿರುವುದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ.

ಉಡುಪಿ ಮಳೆ 2

ಉಡುಪಿ ನಗರಸಭೆ ಅಧಿಕಾರಿಗಳು ತಕ್ಷಣ ಆಗಮಿಸಿ ಪರಿಹಾರ ಕಾರ್ಯ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Advertisements

ಕರಾವಳಿಯಲ್ಲಿ ಶಾಲೆಗಳಿಗೆ ರಜೆ

ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಈಗಾಗಲೇ ಉತ್ತರ ಕನ್ನಡ ಹಾಗೂ ಮಂಗಳೂರು ತಾಲೂಕಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಉಡುಪಿ ಜಿಲ್ಲೆಯಲ್ಲಿ ಕೂಡ ಸೋಮವಾರ ಮುಂಜಾನೆಯಿಂದ ಭಾರೀ ಗಾಳಿ ಮಳೆ ಸುರಿಯುತ್ತಿದ್ದು, ಕೆಲವೊಂದು ಶಾಲೆಯ ಆಡಳಿತ ಮಂಡಳಿ ರಜೆ ಘೋಷಿಸಿದೆ.

ಪೋಷಕರ ಮನವಿ

ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಶಾಲೆಯ ರಜೆ ನೀಡುವಂತೆ ಪೋಷಕರು ಜಿಲ್ಲಾಡಳಿತವನ್ನು ಒತ್ತಾಯ ಮಾಡಿದ್ದಾರೆ.

ಉಡುಪಿ ಮಳೆ 1

ಹಲವು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗಿದ್ದು, ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಶಾಲೆಗಳಿಗೆ ಹೋಗಬೇಕಾದ ಪರಿಸ್ಥಿತಿ ಇದ್ದರೂ ಜಿಲ್ಲಾಡಳಿತ ಇನ್ನೂ ರಜೆ ಘೋಷಣೆ ಮಾಡದೆ ಇರುವುದಕ್ಕೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲೆವೂರು ಶಾಂತಿನಿಕೇತನ, ಉಡುಪಿಯ ಮುಕುಂದ ಕೃಪಾ ಶಾಲೆ, ಸಾಲಿಯತ್ ಸಮೂಹ ಸಂಸ್ಥೆ, ವಾಸುದೇವ ಕೃಪಾ ಸಹಿತ ಉಡುಪಿಯಲ್ಲಿ ಕೆಲವು ಶಾಲೆಗಳ ಆಡಳಿತ ಮಂಡಳಿ ರಜೆ ಘೋಷಣೆ ಮಾಡಿದೆ.

ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡಲು ಶಿಕ್ಷಣಾಧಿಕಾರಿಗಳಿಗೆ ಸೂಚನೆ

ನದಿಗಳು ತುಂಬಿ ಹರಿಯುತ್ತಿದ್ದು ನೆರೆ ಸ್ಥಿತಿ ಏರ್ಪಟ್ಟಿದೆ. ಉಡುಪಿ ಜಿಲ್ಲಾಡಳಿತ ಶಾಲಾ-ಕಾಲೇಜಿಗೆ ರಜೆ ಘೋಷಿಸಿಲ್ಲ. ಆದರೆ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ಹಲವು ಶಾಲಾ-ಕಾಲೇಜು ರಜೆ ಘೋಷಿಸಿದೆ.

ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ. ಅದರಂತೆ ಜಿಲ್ಲೆಯ ಕೆಲವು ಶಾಲೆಗಳು ಈಗಾಗಲೇ ರಜೆ ಘೋಷಣೆ ಮಾಡಿದೆ ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲೆಯ ಎಲ್ಲಾ ಏಳೂ ತಾಲೂಕಿನಲ್ಲಿ ನಿರಂತರ ಮಳೆ ಆಗುತ್ತಿಲ್ಲ. ರಾತ್ರಿ 10 ಗಂಟೆಯ ನಂತರ ಮಳೆ ಕೆಲವೆಡೆ ಕಡಿಮೆಯಾಗಿದ್ದು, ಪರಿಸ್ಥಿತಿಯನ್ನು ನೋಡಿಕೊಂಡು ರಜೆ ಘೋಷಣೆ ಮಾಡುವ ಅಧಿಕಾರವನ್ನು ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬೈಂದೂರು ತಾಲೂಕಿನ 19 ಶಾಲೆಗಳಿಗೆ ರಜೆ ಘೋಷಣೆ

ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಬಂದುಹೋಗಲು ಕಷ್ಟವಾಗುವ ಕಡೆಗಳಲ್ಲಿ ರಜೆ ಘೋಷಣೆಗೂ ಸೂಚನೆ ನೀಡಿದ್ದೇವೆ. ಆಯಾ ಶಾಲಾ ಮಟ್ಟದಲ್ಲಿ ನಿರ್ಧಾರ ತೆಗೆದುಕೊಂಡು ಪಾಲಕ – ಪೋಷಕರಿಗೆ ಸೂಚನೆ ನೀಡುವುದು ಮತ್ತು ಮಕ್ಕಳ ಸುರಕ್ಷತೆಗೆ ಹಚ್ಚಿನ ಆದ್ಯತೆ ನೀಡಲು ನಿರ್ದೇಶನ ಕೊಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಿಡಿಪಿಐ ಕೆ.ಗಣಪತಿ ತಿಳಿಸಿದ್ದಾರೆ.

ಮುಖ್ಯ ಶಿಕ್ಷಕರಿಗೆ ಸೂಚನೆ

ಎಲ್ಲ ಮುಖ್ಯ ಶಿಕ್ಷಕರು ತಮ್ಮ ಶಾಲೆಗೆ ಸಂಬಂಧಿಸಿದಂತೆ ಮಳೆ ನೆರೆ, ಕಾಲುಸಂಕ, ಇತ್ಯಾದಿಗಳನ್ನು ಗಮನಿಸಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಅಗತ್ಯವೆಂದು ಕಂಡು ಬಂದಲ್ಲಿ ಶಾಲೆಗೆ ರಜೆ ನೀಡುವುದು. ಹಾಗೂ ಈ ಬಗ್ಗೆ ಶಿಕ್ಷಣ ಸಂಯೋಜಕರಿಗೆ ಹಾಗೂ ಸಿಆರ್‌ಪಿ ಯವರಿಗೆ ಮಾಹಿತಿ ನೀಡುವುದು. ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮುಖ್ಯ ಶಿಕ್ಷಕರಾಗಿದ್ದು, ವಿವೇಚನೆಯಿಂದ ಕರ್ತವ್ಯ ನಿರ್ವಹಿಸುವುದು. ರಜೆ ಅಗತ್ಯವಿಲ್ಲದಿದ್ದಲ್ಲಿ, ಮಳೆಯಿಂದ ಶಾಲೆಗೆ ಬರಲು ಅನಾನುಕೂಲವಾಗುವ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಪೋಷಕರಿಗೆ ತಿಳಿಸುವುದು. ಎಲ್ಲ ಅನುದಾನಿತ, ಸರಕಾರಿ ಹಾಗೂ ಅನುದಾನರಹಿತ ಶಾಲೆಗಳಿಗೆ ಅನ್ವಯಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X