ಉಡುಪಿ | ಸುಮನಸಾ ಕೊಡವೂರು ರಂಗಹಬ್ಬ ಉದ್ಘಾಟಿಸಿದ ಅರವಿಂದ ಮಾಲಗತ್ತಿ

Date:

Advertisements

ಭೂತಾರಾಧನೆಯ ಒಳಗೆ ಕಲೆ ಇದೆ. ಅದನ್ನು ಹೆಕ್ಕಿ ತೆಗೆದು ರಂಗಕ್ಕೆ ತರುವ ಕೆಲಸ ಆಗಬೇಕು ಎಂದು ಸೃಜನಶೀಲ ಸಾಹಿತಿ ಅರವಿಂದ ಮಾಲಗತ್ತಿ ತಿಳಿಸಿದರು.

ಅಜ್ಜರಕಾಡು ಭುಜಂಗ ಪಾರ್ಕ್ ಬಯಲು ಮಂದಿರದಲ್ಲಿ ಶನಿವಾರ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಮೃತ ಸೋಮೇಶ್ವರ ಅವರು ಭೂತಾರಾಧನೆಯ ಪಾಡ್ದನಗಳನ್ನು ಇಟ್ಟುಕೊಂಡು ರಂಗಪ್ರಯೋಗ ನಡೆಸಿದ್ದರು. ಅಂಥ ಪ್ರಯೋಗಗಳನ್ನು ಆಧುನಿಕ ರಂಗಭೂಮಿಯಲ್ಲಿ ಹೆಚ್ಚಿಗೆ ಆಗಿಲ್ಲ ಎಂದು ಹೇಳಿದರು.

Advertisements
1004512199

ಇದು ಜೇನು ಗೂಡಿಗೆ ಕೈ ಹಾಕುವ ಕೆಲಸ ಎಂದು ಗೊತ್ತು. ಏನೋ ಮಾಡಲು ಹೋಗಿ ಏನೋ ಆಗುವ ಕಾರ್ಯ. ಸಂಪ್ರದಾಯಸ್ಥರು ಕೂಡ ಇದಕ್ಕೆ ಪ್ರೋತ್ಸಾಹವನ್ನು ನೀಡಬೇಕು. ಆಗ ಭೂತಾರಾಧನೆ ನಮ್ಮ ನಾಡಿನ, ನಮ್ಮ ದೇಶದ ಗಡಿ ದಾಟಿ ಬೆಳೆಯಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಎಲ್ಲಿ ಮನುಷ್ಯತ್ವ ಇದೆಯೋ ಅಲ್ಲಿ ಕಲಾವಿದರು ಇರುತ್ತಾರೆ. ಎಲ್ಲಿ ಸೇವೆ, ತ್ಯಾಗದ ಭಾವ ಇರುವಲ್ಲಿ ಕಲಾವಿದರು ಇರುತ್ತಾರೆ. ಅದಕ್ಕೆ ಸುಮನಸಾ ಸಂಸ್ಥೆಯೇ ಸಾಕ್ಷಿ. ಒಂದು ಮನೆಗೆ ಬೆಂಕಿ ಬಿದ್ದಾಗ ಅಲ್ಲಿ ಮನೆ ನಿರ್ಮಿಸಿ ಕೊಡಲು ಸೇರಿದವರು ಕಟ್ಟಿದ ಸಂಸ್ಥೆ ಇದು ಎಂದು ವಿವರಿಸಿದರು.

ಭಾರತೀಯ ಆಧುನಿಕ ರಂಗಭೂಮಿ ಎಂದರೆ ಉತ್ತರ ಭಾರತದ ಕಡೆಗೆ ನೋಡಲಾಗುತ್ತಿತ್ತು. ಬಿ.ವಿ. ಕಾರಂತ, ಗಿರೀಶ್ ಕಾರ್ನಾಡ್ ಮುಂತಾದವರ ಪ್ರಯೋಗ, ಕುವೆಂಪು, ತೇಜಸ್ವಿ ಮುಂತಾದವರ ಬರಹಗಳು ರಂಗಭೂಮಿಗೆ ಬಂದಿರುವುದರಿಂದ ಅನೇಕ ಪ್ರಯೋಗಗಳಾಗುತ್ತಿರುವುದರಿಂದ ಈಗ ಕರ್ನಾಟಕದ ಕಡೆಗೆ ತಿರುಗಿ ನೋಡುವಂತಾಗಿದೆ. ಮೈಸೂರು ಮತ್ತು ಅವಿಭಜಿತ ದಕ್ಷಿಣ ಕನ್ನಡವು ಆಧುನಿಕ ರಂಗಭೂಮಿಯ ರಾಜಧಾನಿಯಾಗಿದೆ ಎಂದು ಹೇಳಿದರು.

1004512318

ಸರ್ಕಾರದ ಅನುದಾನದಲ್ಲಿ ನಡೆಯುವ ರಂಗಭೂಮಿಗೆ ಹವ್ಯಾಸಿ ರಂಗ ಸಂಸ್ಥೆಗಳು ಆರೋಗ್ಯಕರ ಸ್ಪರ್ಧೆಯನ್ನು ನಿರಂತರ ಒಡ್ಡುತ್ತಾ ಇರಬೇಕು. ಆಗ ಹವ್ಯಾಸಿ ರಂಗಭೂಮಿ ಅಷ್ಟೇ ಅಲ್ಲ, ಸರ್ಕಾರಿ ರಂಗಸಂಸ್ಥೆಗಳೂ ಬೆಳೆಯಲು ಸಾಧ್ಯ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ‘ಪ್ರತಿವಾರ ಕಾರ್ಯಕ್ರಮಗಳಾಗಬೇಕು ಎಂಬ ಕನಸು ಹೊತ್ತು ವಿ.ಎಸ್. ಆಚಾರ್ಯ ಅವರು ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರ ಕಟ್ಟಿದ್ದರು. ಆದರೆ, ಸುಮನಸಾ ಮಾತ್ರ ವರ್ಷಕ್ಕೊಮ್ಮೆ ಬಳಸಿಕೊಳ್ಳುತ್ತಿದ್ದಾರೆ. ಉಳಿದವರು ಬಳಸಿಕೊಳ್ಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಗೀತಂ ಗಿರೀಶ್ ಅವರಿಗೆ ರಂಗಸನ್ಮಾನ ನೀಡಿ ಗೌರವಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ, ಸ್ಮರಣಿಕಾ ಉಡುಪಿ ಪ್ರವರ್ತಕ ದಿವಾಕರ ಸಾಲ್ಯಾನ್, ಸಾಯಿಬಾಬಾ ಮಂದಿರದ ಧರ್ಮದರ್ಶಿ ತೋಟದಮನೆ ದಿವಾಕರ ಶೆಟ್ಟಿ, ಸುಮನಸಾ ಕೊಡವೂರು, ಸಂಚಾಲಕ ಭಾಸ್ಕರ ಪಾಲನ್ ಉಪಸ್ಥಿತರಿದ್ದರು.

ಬಾವುಟ ಸಿಕ್ಕಿಸಿ ದೋಣಿ ಸಾಗಿಸುವ ಮೂಲಕ ಕಾರ್ಯಕ್ರಮವನ್ನು ವಿಶಿಷ್ಠವಾಗಿ ಉದ್ಘಾಟಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರುವಂದಿಸಿದರು. ನಾಗೇಶ್ ಪ್ರಸಾದ್ ವಂದಿಸಿದರು. ಅಕ್ಷತ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪಯಣ ಬೆಂಗಳೂರು ಇವರು ‘ತಲ್ಕಿ” ನಾಟಕ ಪ್ರದರ್ಶಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X