ಉಡುಪಿ | ಸತ್ಯವನ್ನು ತೋರಿಸುವ ಏಕೈಕ ಮಾಧ್ಯಮ ರಂಗಭೂಮಿ : ಡಾ. ಜನಾರ್ದನ (ಜನ್ನಿ)

Date:

ಕನ್ನಡ ರಂಗಭೂಮಿ ಭಾರತ ದೇಶದಲ್ಲಿಯೇ ಹೊಸ ರೀತಿಯ ಆಯಾಮ ತೆರೆದುಕೊಂಡಿದೆ. ಕನ್ನಡ ರಂಗಭೂಮಿಯ ಹೊಸಹೊಸ ಪ್ರಯೋಗಗಳು ಭಾರತೀಯ ರಂಗಭೂಮಿಯ ಮುಖವಾಣಿಯಾಗಿ ಕೆಲಸ ಮಾಡಿದೆ. ಆ ಮೂಲಕ ಭಾರತೀಯ ರಂಗಭೂಮಿಯ ಮೇಲೆ ಬಳಷ್ಟು ಪರಿಣಾಮ ಬೀರಿದೆ. ಅವು ಎಲ್ಲವೂ ವಿಮರ್ಶೆ, ಚರ್ಚೆ, ಸಂವಾದ ಹಾಗೂ ಮರು ತಿದ್ದುಪಡಿಗೆ ಒಳಗಾಗಿದೆ ಎಂಬುದೇ ವಿಶೇಷ ಎಂದು ಹಿರಿಯ ರಂಗಕರ್ಮಿ ಡಾ. ಜನಾರ್ದನ (ಜನ್ನಿ) ಮೈಸೂರು ಹೇಳಿದ್ದಾರೆ.

- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ರಥಬೀದಿ ಗೆಳೆಯರು ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರವಿವಾರ ಆಯೋಜಿಸಲಾದ ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಿನೆಮಾದಲ್ಲಿ ಸಣ್ಣ ಮನುಷ್ಯರನ್ನು ದೊಡ್ಡದಾಗಿ ತೋರಿಸುತ್ತಾರೆ. ಆದರೆ ರಂಗಭೂಮಿ ಮನುಷ್ಯರನ್ನು ಇದ್ದ ಹಾಗೆ ತೋರಿಸುತ್ತದೆ. ಅಂದರೆ ಸತ್ಯವನ್ನು ತೋರಿಸುವ ಮಾಧ್ಯಮವಾಗಿದೆ. ಕಣ್ಣಿಗೆ ಕಣ್ಣು ಇಟ್ಟು ಮಾತನಾಡುವ ಏಕೈಕ ಸಾಧನ ರಂಗಭೂಮಿಯಾಗಿದೆ ಎಂದರು.

ಇಂದು ರಂಗಭೂಮಿ ತಂಡಗಳಿಗೆ ನಿಯಮಿತ ದೃಷ್ಟಿಕೋನದ ಚಳವಳಿ ಇಲ್ಲವಾಗಿದೆ. ರಂಗಬೂಮಿ ಎಂಬುದು ವಿಶ್ವಪ್ರಜ್ಞೆ ಬೆಳೆಸಲು ಹೆದ್ದಾರಿಯಾಗಿದೆ. ಅಲ್ಲಿ ನಿಂತು ನಾವು ದೊಡ್ಡ ಮಟ್ಟದಲ್ಲಿ ಸದ್ದು ಮಾಡಬೇಕಾಗಿದೆ. ರಂಗ ಕಲಾವಿದ ಸಾಮಾಜಿಕ ಚಳವಳಿ, ವಿಚಾರ ಸಂಕಿರಣ, ಸಂವಾದದ ಮೂಲಕ ತನ್ನನ್ನು ತಾನು ತಿದ್ದುಕೊಂಡು ಹೊಸ ರೂಪವಾಗಿ ದಾಟಿ ಹೋಗಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

WhatsApp Image 2025 11 23 at 8.01.08 PM 2

ಕರ್ನಾಟಕ ನಾಟಕ ಅಕಾಡೆಮಿಯ ಉಡುಪಿ ಜಿಲ್ಲಾ ಸಂಚಾಲಕ ಸಂತೋಷ್ ನಾಯಕ್ ಪಟ್ಲ ಪ್ರಾಸ್ತಾವಿಕವಾಗಿ ಮಾತನಾಡಿ, ರಂಗಭೂಮಿ ಇಂದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿಲ್ಲ. ಅದೊಂದು ಅರಿವಿನ ದಾರಿಯಾಗಿದೆ. ನಮ್ಮನ್ನು, ನಮ್ಮ ಚಿಂತನೆಗಳನ್ನು ನಾವೆ ಒರೆಹಚ್ಚಿ ನಿರ್ಧರಿಸುವ ಮತ್ತು ನಮ್ಮ ಸುತ್ತಲಿನ ಜಗತ್ತನ್ನು ಅರ್ಥೈಸಿಕೊಳ್ಳುವ ಮನರಂಜನೆಯನ್ನು ದಾಟಿದ ಅರಿವಿನ ಮಾಧ್ಯಮವಾಗಿದೆ. ಹಾಗಾಗಿ ನಾಟಕ ಇವತ್ತು ಆ ಮನರಂಜನೆಯ ಮಾಧ್ಯಮವಾಗಬೇಕಾದ ಅಗತ್ಯ ಇಲ್ಲ ಎಂದು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ರಥಬೀದಿ ಗೆಳೆಯರು ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕರ್ನಾಟಕ ನಾಟಕÀ ಅಕಾಡೆಮಿ ಸದಸ್ಯ ಸಂಚಾಲಕ ಡಾ.ಟಿ.ಎಚ್.ಲವ ಕುಮಾರ್ ಮಾತನಾಡಿದರು.

ರಥಬೀದಿ ಗೆಳೆಯರು ಕಾರ್ಯದರ್ಶಿ ಪ್ರೊ.ಸುಬ್ರಹ್ಮಣ್ಯ ಜೋಶಿ ವಂದಿಸಿದರು. ನಾಟಕ ವಿಭಾಗದ ಸಂಚಾಲಕ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...