ಉಡುಪಿ | RTI ಮಾಹಿತಿ ಅರ್ಜಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಿ : ರಾಜ್ಯ ಮಾಹಿತಿ ಆಯುಕ್ತೆ ಮಮತಾ ಗೌಡ

Date:

ಸರ್ಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ನಾಗರಿಕರು ಸರಕಾರಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಾಗ ಮಾಹಿತಿಯನ್ನು ತಪ್ಪದೇ
ನೀಡಬೇಕು ಎಂದು ರಾಜ್ಯ ಮಾಹಿತಿ ಆಯುಕ್ತೆ ಮಮತಾ ಗೌಡ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

- Advertisement -

ಸರಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಉಳಿಸಿಕೊಳ್ಳುವ ದೃಷ್ಠಿಯಿಂದ 2005 ರಲ್ಲಿ ಮಾಹಿತಿ ಹಕ್ಕು ಕಾಯ್ದೆ (ಆರ್.ಟಿ.ಐ) ಅನ್ನು ಜಾರಿಗೊಳಿಸಿದ್ದು, ಭಾರತೀಯ ಪ್ರತಿಯೊಬ್ಬ ನಾಗರಿಕನೂ ಸರ್ಕಾರಿ ಅಧಿಕಾರಿಗಳಿಂದ ಸರಕಾರದ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯುವ ಹಕ್ಕನ್ನು ಹೊಂದಿರುತ್ತಾರೆ. ಅವರು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದಾಗ ನಿಗಧಿತ ಕಾಲಾವಧಿಯಲ್ಲಿ ಶುಲ್ಕವನ್ನು ಪಡೆದು ನಿಯಮಾನುಸಾರ ದಾಖಲಾತಿಗಳನ್ನು ನೀಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮಾಹಿತಿಯ ಪಾಲಕರಾಗಿದ್ದು, ಮಾಹಿತಿ ಹಕ್ಕು ಅಡಿ ಅರ್ಜಿಗಳು ಬಂದಾಗ ಕ್ಷುಲ್ಲಕ ಕಾರಣ ನೀಡದೇ, ಕಚೇರಿಗೆ ಸಂಬಂಧಿಸಿದ ಯಾವುದೇ ಸಾರ್ವಜನಿಕ ಕಡತಗಳು, ಮಾಹಿತಿಗಳು, ಫೋಟೋಗಳು, ಡಿಜಿಟಲ್ ಮಾಹಿತಿಗಳು ಸೇರಿದಂತೆ ಮತ್ತಿತರ ದಾಖಲೆಗಳನ್ನು ಯಥಾವತ್ತಾಗಿ ನೀಡಬೇಕು. ಸಂಪೂರ್ಣವಾಗಿ ಖಾಸಗಿಯಾಗಿರುವ ಸಂಸ್ಥೆಗಳ ವಿವರ, ವ್ಯಕ್ತಿಯ ಪಾನ್, ಆಧಾರ್, ಮಾರ್ಕ್ಸ್ ಕಾರ್ಡ್ಗಳು ಅಥವಾ ಇನ್ನಿತರ ಯಾವುದೇ ವೈಯಕ್ತಿಕ ಮಾಹಿತಿಗಳನ್ನು ನೀಡುವಂತಿಲ್ಲ. ಮಾಹಿತಿಯು ಅತಿ ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿದ್ದಾಗ ಸೆಕ್ಷನ್ 11 ರ ಅಡಿಯಲ್ಲಿ ವೈಯಕ್ತಿಕ ಮಾಹಿತಿಗಳ ಬಗ್ಗೆ ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ಅವರಿಂದ ಮಾಹಿತಿಯನ್ನು ಹಂಚಿಕೊಳ್ಳುವ ಬಗ್ಗೆ ಅನುಮತಿ ಪಡೆದು ಅವರು ಒಪ್ಪಿದರೆ ನೀಡಬಹುದಾಗಿದೆ ಎಂದರು.

ಸ್ವಯಂ ಪ್ರೇರಿತವಾಗಿ ನೀಡುವಂತಹ ಮಾಹಿತಿಗಳನ್ನು ಮಾಹಿತಿ ಹಕ್ಕು ಅಧಿನಿಯಮದ 4(1)ಎ, 4(1)ಬಿ ರಡಿಯಲ್ಲಿ ವೆಬ್‌ಸೈಟ್‌ನಲ್ಲಿ ಕಚೇರಿಯಲ್ಲಿ ನಿರ್ವಹಿಸುತ್ತಿರುವ ಕಡತ, ವಹಿಗಳು, ಕಚೇರಿಯ ಕಾರ್ಯ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿವರ ಸೇರಿದಂತೆ ಮತ್ತಿತರ ವಿವರಗಳನ್ನು ಕಾಲಕಾಲಕ್ಕೆ ಕ್ಷಿಪ್ರವಾಗಿ ನವೀಕರಿಸಿ, ಅಪ್‌ಲೋಡ್ ಮಾಡಿದ್ದಲ್ಲಿ ಸಾರ್ವಜನಿಕರು ಅದರ ಲಾಭ ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಇದರಿಂದ ಅರ್ಜಿ ಸಲ್ಲಿಸುವುದು ತಪ್ಪುತ್ತದೆ ಎಂದರು.

8(1) ಜೆ ನಲ್ಲಿ ಸೂಚಿಸಲಾದ ದಾಖಲೆಗಳ ಮಾಹಿತಿ ನೀಡುವ ವಿನಾಯಿತಿ ಇದ್ದಲ್ಲಿ ಹಾಗೂ ನ್ಯಾಯಾಲಯದಿಂದ ನೀಡಬಾರದು ಎಂದು ಸ್ಪಷ್ಟ ಆದೇಶವಿದ್ದ ಸಂದರ್ಭದಲ್ಲಿ ಮಾಹಿತಿ ನೀಡಲು ನಿರಾಕರಿಸಬಹುದಾಗಿದೆ ಎಂದ ಅವರು, ಸರಕಾರಿ ನೌಕರರು ಸಾರ್ವಜನಿಕರಿಗೆ ಸಹಕಾರ ನೀಡಬೇಕು ಎನ್ನುವ ಮನೋಭಾವ ಹೊಂದುವುದರೊಂದಿಗೆ ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸಿದಾಗ ನೀಡಬೇಕು ಎಂದರು.

ಅಧಿಕಾರಿಗಳು ಮೊದಲು ತಾವು ಕೂಡ ಪ್ರಜೆಗಳು ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಕೇಳುವ ಯಾವುದೇ ಮಾಹಿತಿ ತಮ್ಮಲ್ಲಿದ್ದರೆ ಅದನ್ನು ಅರ್ಜಿದಾರರಿಗೆ ಕೂಡಲೇ ನೀಡಿ ಹಿಂಬರಹ ಪಡೆದುಕೊಂಡು ಶುಲ್ಕ ಪಾವತಿಸಿಕೊಳ್ಳಬೇಕು. ಸಾರ್ವಜನಿಕರು ಮಾಹಿತಿಗಾಗಿ ಅರ್ಜಿ ಹಾಕಿದಾಗ ಅವರನ್ನು ಅನಾವಶ್ಯಕ ಅಲೆಸಿಕೊಳ್ಳದೇ ಮೂವತ್ತು ದಿನಗಳ ಒಳಗಾಗಿ ತಮ್ಮಲ್ಲಿರುವ ಮಾಹಿತಿಯನ್ನು ಅವರಿಗೆ ನೀಡಿ ಸಹಕರಿಸಬೇಕು.ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಮಾಹಿತಿ ಹಕ್ಕುಗಳ ಕಾಯ್ದೆ ಅಡಿಯಲ್ಲಿ ಬರುವ ಅರ್ಜಿಗಳ ವಿಲೇವಾರಿಗೆ ಸಂಬಂಧಪಟ್ಟಂತೆ ಅಧಿಕಾರಿಗಳಲ್ಲಿ ಗೊಂದಲಗಳು ಏರ್ಪಡುತ್ತವೆ. ಕಾಯ್ದೆಯಲ್ಲಿ ಕಾಲಕಾಲಕ್ಕೆ ತಿದ್ದುಪಡಿಗಳನ್ನು ಮಾಡಲಾಗುತ್ತದೆ. ಇವುಗಳ ಬಗ್ಗೆ ಕೆಳಹಂತದ ಪ್ರತಿಯೊಬ್ಬ ಅಧಿಕಾರಿಗಳು ತಿಳಿದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದ್ದು, ಅಧಿಕಾರಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್.ಕಾದ್ರೋಳ್ಳಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...