ಉಡುಪಿ | ಆರ್‌ಟಿಒ ಲಕ್ಷೀನಾರಾಯಣ ಮೇಲೆ ಲೋಕಾಯುಕ್ತ ದಾಳಿ: ಕಚೇರಿ, ಮನೆಯಲ್ಲಿ ಶೋಧ

Date:

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ(ಆರ್‌ಟಿಒ ) ಲಕ್ಷೀನಾರಾಯಣ ಪಿ. ನಾಯಕ್ ಅವರ ಮನೆಯಲ್ಲಿ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಶೋಧ ನಡೆಸಿದ್ದಾರೆ. ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಕಾರಣ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ಫ್ಲ್ಯಾಟ್ ನಲ್ಲಿ ಶೋಧ ಕಾರ್ಯ ನಡೆದಿದೆ. ಅಲ್ಲದೆ, ಉಡುಪಿ ತಾಲ್ಲೂಕಿನ ಪಡುಅಲೆವೂರು ಗ್ರಾಮದಲ್ಲಿರುವ ಮಧ್ಯವರ್ತಿಗಳ ಮನೆಗಳಲ್ಲೂ ಶೋಧ ನಡೆದಿದೆ ಎಂದು ಹೇಳಿವೆ.

- Advertisement -

RTO ಎಲ್.ಪಿ. ನಾಯ್ಕ ಮನೆ ಮೇಲೆ ಲೋಕಾಯುಕ್ತರ ದಾಳಿ | ಉಡುಪಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ (RTO) ಆಗಿ ಕಾರ್ಯನಿರ್ವಹಿಸುತ್ತಿರುವ ಕುಮಟಾ ಮೂಲದ ಎಲ್.ಪಿ. ನಾಯ್ಕ ಅವರ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಾರವಾರ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ (ಪಿಐ) ವಿನಾಯಕ ಬಿಲ್ಲವ ಅವರ ನೇತೃತ್ವದ ತಂಡ ಈ ದಾಳಿಯನ್ನು ನಡೆಸಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದಲ್ಲಿರುವ ಎಲ್.ಪಿ. ನಾಯ್ಕ ಅವರ ವಾಣಿಜ್ಯ ಮಳಿಗೆ ಮತ್ತು ಕುಮಟಾ ತಾಲ್ಲೂಕಿನ ಚಂದಾವರ ಗ್ರಾಮದಲ್ಲಿನ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕುಮಟಾ ಮೂಲದವರಾದ ಎಲ್.ಪಿ. ನಾಯ್ಕ ಅವರು ಆದಾಯದ ಮೂಲಕ್ಕಿಂತ ಹೆಚ್ಚು ಆಸ್ತಿ ಮತ್ತು ಹಣ ಹೊಂದಿದ್ದಾರೆಂಬ ಗಂಭೀರ ಆರೋಪದ ಮೇಲೆ ಈ ಶೋಧ ಕಾರ್ಯವನ್ನು ನಡೆಸಲಾಗಿದೆ. ಲೋಕಾಯುಕ್ತ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...