ಉಡುಪಿ | ರಷ್ಯಾ ಮೂಲದ ವ್ಯಕ್ತಿ ಸಾವು; ಇಂದ್ರಾಳಿಯಲ್ಲಿ ಅಂತ್ಯ ಸಂಸ್ಕಾರ

Date:

Advertisements

ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಗಿದೆ.

ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್(73) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಫೆಬ್ರವರಿ 22ರಂದು ಅವರು ಮುರಡೇಶ್ವರದ ಕಡಲ ಕಿನಾರೆಯಲ್ಲಿ ವಿಹರಿಸುತ್ತಿರುವಾಗ ಹೃದಯಾಘಾತದಿಂದ ಮೃತಪಟ್ಟದ್ದರು. ಈ ಹಿನ್ನೆಲೆಯಲ್ಲಿ ಮುರುಡೇಶ್ವರ ಪೊಲೀಸರು ಶವವನ್ನು ಮಣಿಪಾಲದ ಶೀತಲೀಕೃತ ಶವರಕ್ಷಣಾ ಘಟಕದಲ್ಲಿ ರಕ್ಷಿಸಿಟ್ಟಿದ್ದರು.

ರಷ್ಯಾದಲ್ಲಿದ್ದ ಮೃತರ ಕುಟುಂಬದವರಿಗೆ ವಿಷಯ ಮುಟ್ಟಿಸಿದ್ದರು. ಆದರೆ ಮೃತರ ಕುಟುಂಬಸ್ಥರಿಗೆ ಭಾರತಕ್ಕೆ ಬರಲು ಅಸಹಾಯಕತೆ ಎದುರಾಯಿತು. ಹಾಗಾಗಿ ಮೃತರ ಮಗಳು ಪೊಲೀಸ್ ಇಲಾಖೆಯಲ್ಲಿ ದಹನರೂಪದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯಿಂದ ಮುರುಡೇಶ್ವರ ಪೋಲಿಸರು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಹಕಾರದಲ್ಲಿ ಉನ್ನತಮಟ್ಟದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಅಂತ್ಯಸಂಸ್ಕಾರ ನಡೆಸಿದ್ದಾರೆ.

Advertisements

ಪೋಲಿಸರು ವಿದೇಶಿ ಮೃತರಿಗೆ ಗೌರಯುತ ವಂದನೆ ಸಮರ್ಪಿಸಿದರು. ಮೃತರ ಮನೆ ಮಂದಿ ಅಂತ್ಯಸಂಸ್ಕಾರದ ದೃಶ್ಯಾವಳಿಗಳನ್ನು ವಿಡಿಯೋ ಕರೆಯ ಮೂಲಕ ವಿಕ್ಷಿಸಿಸಲು ವ್ಯವಸ್ಥೆ ಮಾಡಿದ್ದರು. ಗೌರಯುತವಾಗಿ ನಡೆದ ಅಂತ್ಯಸಂಸ್ಕಾರ ಪ್ರಕ್ರಿಯೆಯನ್ನು ವಿಡಿಯೋ ಕರೆಯಲ್ಲಿ ಕಂಡ ಕುಟುಂಬಸ್ಥರು ಕಂಬನಿ ಮಿಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಚ್1ಎನ್1 ವೈರಲ್ ನ್ಯುಮೋನಿಯಾ ವಿರುದ್ಧ ಮಣಿಪಾಲ್ ಆಸ್ಪತ್ರೆಯ ಹೋರಾಟ ಯಶಸ್ವಿ

ಈ ಸಂದರ್ಭ ಮುರುಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಶಿವಕುಮಾರ್ ಎಸ್ ಆರ್, ಸಿಬ್ಬಂದಿಗಳಾದ ಮುರಳಿ ಎಂ ನಾಯ್ಕ್, ವಿಜಯ ನಾಯ್ಕ್, ಮಂಜು ಮಡಿವಾಳ ಇದ್ದರು.

ವಿಕಾಸ್ ಶೆಟ್ಟಿ, ಫ್ಲವರ್ ವಿಷ್ಣು ಸಹಕರಿಸಿದರು. ಎರಡು ವರ್ಷಗಳ ಹಿಂದೆ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಶ್ರೀಲಂಕಾ ಪ್ರಜೆಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ನಡೆಸಿರುವುದನ್ನು ನೆನಪಿಸಿಕೊಂಡರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X