ಉಡುಪಿ | ಜನರಿಂದ ಆಯ್ಕೆಯಾದ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಕ್ಕೆ ಪ್ರಯತ್ನ: ಪ್ರೊ ಫಣಿರಾಜ್

Date:

ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ತನಿಖೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

- Advertisement -

ಈ ಸಂದರ್ಭದಲ್ಲಿ ಸಹಬಾಳ್ವೆ ಸಂಘಟನೆಯ ಸಂಚಾಲಕ ಪ್ರೊ. ಫಣಿರಾಜ್ ಮಾತನಾಡಿ, “ಈ ಪ್ರತಿಭಟನೆಯು ಆಡಳಿತ ಸರ್ಕಾರದ ಪರವಾಗಿ ಅಲ್ಲ. ಬದಲಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರವಾಗಿಸಲು ನಡೆಯುತ್ತಿರುವ ಹುನ್ನಾರದ ವಿರುದ್ಧವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“2020ರಲ್ಲಿ ನಡೆದಿದೆ ಎನ್ನಲಾದ ಮುಡಾ ಹಗರಣದ ಕುರಿತು ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯೇ ಆಗಿರಲಿಲ್ಲ. ಅಧಿಕಾರದಲ್ಲಿ ಇಲ್ಲದಾಗ ಹಗರಣ ನಡೆದಿದೆ ಎನ್ನುವುದನ್ನು ರಾಜ್ಯಪಾಲರು ನಂಬುವುದು ಹಾಸ್ಯಾಸ್ಪದ” ಎಂದು ಹೇಳಿದರು.

ಉಡುಪಿ

ವಿರೋಧ ಪಕ್ಷದಲ್ಲಿರುವ ಬಿಜೆಪಿಯ ಹಲವರು ಮಂದಿ ಅಂದು ಆಡಳಿತ ಪಕ್ಷದ ಭಾಗವಾಗಿದ್ದರು. ಜಿ.ಟಿ ದೇವೇಗೌಡ ಆ ಸಂದರ್ಭದಲ್ಲಿ ಮುಡಾದ ಮುಖ್ಯಸ್ಥರಾಗಿದ್ದರು. ಆದರೆ ಪ್ರಸ್ತುತ ಯಾವುದೇ ಆಧಾರ ಇಲ್ಲದೇ ವಿರೋಧ ಪಕ್ಷ ಇದರ ಕುರಿತು ಆರೋಪ ಮಾಡುತ್ತಿದೆ ಎಂದು ಹೇಳಿದರು.

ಅಪರೇಷನ್ ಕಮಲದಿಂದ ಅಧಿಕಾರಕ್ಕೆ ಬಂದವರು ಯಾವ ಕೃತ್ಯಕ್ಕೂ ಹೇಸುವವರಲ್ಲ..ಅದರ ಮುಂದುವರಿದ ಭಾಗವಾಗಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ನೋಡಬಹುದಾಗಿದೆ. ಇಂತಹ ನಿರ್ಣಯಗಳನ್ನು ಸಂವಿಧಾನ ಸ್ಥಾನದಲ್ಲಿ ಕುಳಿತು ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಒಳ್ಳೆಯದಲ್ಲ. ಯಾವ ಸರಕಾರ, ವ್ಯಕ್ತಿ ಇದ್ದರೂ‌ ಈ ನಡೆ ಸರಿಯಿಲ್ಲ. ಇದನ್ನು ಖಂಡಿಸಬೇಕು ಎಂದರು.

ಪ್ರತಿಭಟನೆಯನ್ನುದ್ದೇಶಿಸಿ ಫಾ.ವಿಲಿಯಂ ಮಾರ್ಟಿಸ್, ಮಂಜುನಾಥ್ ಗಿಳಿಯಾರ್ ಬಾಲಕೃಷ್ಣ ಶೆಟ್ಟಿ, ಇದ್ರಿಸ್ ಹೂಡೆ ಸೇರಿದಂತೆ ಹಲವಾರು ಮಂದಿ ಮಾತನಾಡಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...