ಉಡುಪಿ | ಶಾಸಕರಿಂದ ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ, ಕಾನೂನು ಕ್ರಮ ಕೈಗೊಳ್ಳಿ – ಎಸ್ ಡಿ ಪಿ ಐ

Date:

Advertisements

ಮೈಸೂರು ಸಂಸ್ಥಾನದ ಇತಿಹಾಸದ ಗಂಧಗಾಳಿ ತಿಳಿಯದ ಮತ್ತು ಸದಾ ಹಿಂದುತ್ವದ ಅಮಲಿನಲ್ಲಿರುವ ಉಡುಪಿ ಶಾಸಕ ಯಶಪಾಲ್ ಸುವರ್ಣ ರವರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ದಸರಾ ಎಂಬುದು “ನಾಡ ಹಬ್ಬ” ನಾಡಿನ ಸರ್ವ ಜನಾಂಗದ ಜನರು ಅವರವರ ವಿಶಿಷ್ಟವಾದ ಆಚರಣೆಯ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸುದು ವಾಡಿಕೆ. ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ರವರಿಂದ ದಸರಾ ಉದ್ಘಾಟನೆಯ ಅಹ್ವಾನವನ್ನು ವಿರೋಧಿಸಿ ಹೇಳಿಕೆ ನೀಡಿರುವುದು ಅವರ ಮುಸ್ಲಿಂ ವಿರೋಧಿ ಮನಸ್ಥಿತಿಯಾಗಿದೆ ಎಂದು ಹೇಳಿದರು.

2017ರಲ್ಲಿ ನಿತ್ಯೋತ್ಸವದ ಕವಿ ನಿಸಾರ್ ಅಹ್ಮದ್ರವರು ಸಹ ದಸರಾ ಉದ್ಘಾಟನೆ ಮಾಡಿದ್ದು ಕರ್ನಾಟಕದ ಜನತೆ ಸ್ಮರಿಸುತ್ತಿರುದು ಉಡುಪಿಯ ಶಾಸಕ ಯಶಪಾಲ್ ಸುವರ್ಣರವರು ಮರೆತಂತಿದೆ. ಯಶ್ಪಾಲ್ ಸುವರ್ಣರವರು ಮತಾಂಧತೆ, ಭ್ರಷ್ಟತೆ,ಬೆತ್ತಲೆ ಪ್ರಕರಣ ಮತ್ತು ಮಹಾಲಕ್ಷ್ಮಿ ಸೊಸೈಟಿಯ ಹಗರಣದ ಆರೋಪ ಹಾಗೂ ಪ್ರತಿಯೊಂದು ವಿಷಯದಲ್ಲೂ ಧರ್ಮವನ್ನು ಹುಡುಕುವ ಚಾಳಿಯಿಂದಾಗಿ ಉಡುಪಿಯ ಮಾನ ಹರಾಜು ಮಾಡಿದ್ದಾರೆ.

Advertisements

ಮೊನ್ನೆ ಯುಟ್ಯೂಬರ್ ಸಮೀರ್ ವಿಷಯಕ್ಕೆ ಸಂಭಂದಿಸಿದಂತೆಯೂ ಗೂಂಡಾಗಳ ರೀತಿ ಹೇಳಿಕೆಯನ್ನು ನೀಡಿದ್ದರು. ತನ್ನ ಸ್ವ ಕ್ಷೇತ್ರಕ್ಕೆ ಹೆಚ್ಚಿನ ಅನುದಾನಕ್ಕೆ ಸರಕಾರವನ್ನು ಒತ್ತಾಯಿಸಬೇಕಾದ ಶಾಸಕರು ಧರ್ಮ ಧರ್ಮಗಳ ಮಧ್ಯ ಗೊಂದಲವನ್ನು ಸೃಷ್ಟಿಸುವ ಕೆಲಸವನ್ನು ಮಾಡುತ್ತಿರುದು ಉಡುಪಿ ಜನತೆಯ ತಲೆತಗ್ಗಿಸುವಂತೆ ಮಾಡಿದೆ. ಜಿಲ್ಲೆಯ ಸೌಹಾರ್ದತೆಗೆ ಧಕ್ಕೆ ತರುವಂತಹ ಹೇಳಿಕೆ ನಿರಂತರವಾಗಿ ನೀಡುತ್ತಿರುವ ಉಡುಪಿ ಶಾಸಕ ಯಶಪಾಲ್ ಸುವರ್ಣರ ಮೇಲೆ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸರ್ಕಾರ ದಲಿತರಿಗೆ ರಾಜಕೀಯದಲ್ಲೂ ಮೀಸಲಾತಿ ಕಲ್ಪಿಸಲಿ: ದಸಂಸ ಸಂಚಾಲಕ ಮಯೂರ

ಪರಿಶಿಷ್ಟ ಸಮುದಾಯಗಳಿಗೆ ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ...

ಬಳ್ಳಾರಿ | ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕತೆಗೆ ಹಿನ್ನೆಡೆ: ಎಐಡಿಎಸ್ಒ ಆಕ್ರೋಶ

ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ...

ಬಳ್ಳಾರಿ | ಬಗ‌ರ್ ಹುಕುಂ ಸಾಗುವಳಿದಾರರಿಗೆ ವಸತಿ ಹಕ್ಕು ಮಾನ್ಯ ಮಾಡಲು ಆಗ್ರಹ

ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಅರಣ್ಯ-ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು...

ವಿಜಯಪುರ | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ? ಎಂಬುದರ ಕುರಿತು ಒಂದು ದಿನದ ಕಾರ್ಯಗಾರ

ವಿದ್ಯಾರ್ಥಿಗಳು ಇಂದಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲೇಬೇಕಾಗಿದೆ. ಎಷ್ಟೇ ಕಷ್ಟ...

Download Eedina App Android / iOS

X