ಉಡುಪಿ | ಪ್ರಧಾನಿ ಮೋದಿ ಸಂಚರಿಸಲಿರುವ ರಸ್ತೆಗೆ ದೊರಕಿದ ದುರಸ್ತಿ ಭಾಗ್ಯ ಇತರೆ ರಸ್ತೆಗಳಿಗೂ ದೊರಕಲಿ : ಎಸ್ ಡಿಪಿಐ

Date:

ನವಂಬರ್ 28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ನಡೆಯುತ್ತಿದೆ. ಇದರ ಭಾಗವಾಗಿ ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಬೈಪಾಸ್ ನಿಂದ ಹಿಡಿದು ಮಲ್ಪೆಗೆ ಹೋಗುವ ರಸ್ತೆಯ ಎರಡೂ ಕಡೆ ಏಕಕಾಲದಲ್ಲಿ ಕಾಂಕ್ರೀಟೀಕರಣ ಮಾಡುವ ಸಲುವಾಗಿ ರಸ್ತೆಯನ್ನು ಮುಚ್ಚಲಾಗಿದೆ. ಈ ಕಾಮಗಾರಿಯಿಂದ ದಿನ ನಿತ್ಯ ಈ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗವಾಗಿ ಮಲ್ಪೆ ಮೀನುಗಾರಿಕಾ ಬಂದರಿಗೆ ಕೂಲಿ ಕಾರ್ಮಿಕರು, ವ್ಯಾಪಾರಸ್ಥರು, ಮಲ್ಪೆ ಬೀಚಿಗೆ ಭೇಟಿ ನೀಡುವ ಪ್ರವಾಸಿಗರು ಬಹಳಷ್ಟು ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ಅದಲ್ಲದೆ ಎಪಿಎಂಸಿ ತರಕಾರಿ ಮಾರುಕಟ್ಟೆ, ಕೋಳಿ ಹಾಗೂ ಮಟನ್ ಮಾರುಕಟ್ಟೆ ಮತ್ತು ಆದಿ ಉಡುಪಿ ಶಾಲೆಗೆ ಹೋಗಬೇಕಾದ. ವಿದ್ಯಾರ್ಥಿಗಳು ಈ ಅವ್ಯವಸ್ಥೆಯಿಂದಾಗಿ ಪರದಾಡುವಂತಾಗಿದೆ. ದಿನಂಪ್ರತಿ ಹಲವು ವಾಹನಗಳು ಆ ಮಾರ್ಗವಾಗಿ ಸಂಚರಿಸುತ್ತವೆ.

- Advertisement -

ಈ ಹೆದ್ದಾರಿಯ ಕಾಮಗಾರಿ ಪ್ರಾರಂಭವಾಗಿ ಹಲವು ವರ್ಷಗಳೇ ಕಳೆದು ಇಲ್ಲಿ ಹಲವು ಅಪಘಾತಗಳು ಸಂಭವಿಸಿ ಬಹಳಷ್ಟು ಜನರು ಗಾಯಗೊಂಡಿದ್ದಾರೆ. ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣ ಗೊಳಿಸಬೇಕೆಂದು ಸಾರ್ವಜನಿಕರು ಬೇಡಿಕೆ ಇಡುತ್ತಾ ಬಂದಿದ್ದರೂ ಇದಾವುದನ್ನು ಲೆಕ್ಕಿಸದೆ ಇದೀಗ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಒಮ್ಮಿಂದೊಮ್ಮೆಗೆ ಪ್ರಧಾನಿಯವರು ಸಂಚರಿಸುವ ರಸ್ತೆಯ ದುರಸ್ತಿ ಕಾಮಗಾರಿ ನಡೆಸುತ್ತಿರುವ ಇವರಿಗೆ ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲವೇ? ಕೇವಲ ನಾಯಕರುಗಳನ್ನು ಮೆಚ್ಚಿಸಲು ಮಾತ್ರ ಇವರು ಕೆಲಸಗಳನ್ನು ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಅಲ್ಲದೆ ಪ್ರಧಾನಿಯವರು ಬಂದಿಳಿಯುವ ಆದಿ ಉಡುಪಿ ಹೆಲಿಫ್ಯಾಡ್ ಬಳಿ ಇರುವ ಗೂಡಂಗಡಿಗಳನ್ನು ಭದ್ರತೆಯ ಹೆಸರಿನಲ್ಲಿ ತೆರವುಗೊಳಿಸಲಾಗಿದೆ. ದುಡಿದು ಜೀವನ ಸಾಗಿಸುತ್ತಿರುವ ಆ ಸಣ್ಣ ಅಂಗಡಿಯವರಿಗೆ ಇದರಿಂದಾಗಿ ದಿಕ್ಕು ತೋಚದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಅತಿ ಹೆಚ್ಚು ಮಳೆ ಸುರಿದಿದ್ದು ನಗರ ಹಾಗೂ ಹಲವು ಗ್ರಾಮೀಣ ಪ್ರದೇಶದ ರಸ್ತೆಗಳು ಹದಗೆಟ್ಟಿದೆ. ಜನಪ್ರತಿನಿಧಿಗಳು ಇದರ ಬಗ್ಗೆಯೂ ಗಮನಹರಿಸಬೇಕು ಹಾಗೂ ಆ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿ ಮಾಡಬೇಕು ಅಲ್ಲದೆ ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಯನ್ನು ಕಾಲಮಿತಿಯೊಳಗೆ ಮುಗಿಸುವ ಮೂಲಕ ಪ್ರಧಾನಿಯವರು ಸಂಚರಿಸುವ ರಸ್ತೆಗಳಿಗೆ ದೊರಕಿದ ದುರಸ್ತಿ ಭಾಗ್ಯದಂತೆ ಇತರ ರಸ್ತೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಜನಸಾಮಾನ್ಯರ ಹಿತವನ್ನು ಕಾಪಾಡುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅಶ್ರಫ್ ಭಾವ ರವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...