ಉಡುಪಿ‌ | ಮಾ.8ರಂದು ಎಸ್‌ಡಿಪಿಐನಿಂದ ʼಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶʼ

Date:

Advertisements

ಪ್ರಜಾಪಭುತ್ವದ ಮೇಲೆ ಫ್ಯಾಸಿಸ್ಟ್‌ ಶಕ್ತಿಗಳು ನಡೆಸುತ್ತಿರುವ ಪ್ರಹಾರದ ವಿರುದ್ಧ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಮಾರ್ಚ್‌ 8ರಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಉಸ್ತುವಾರಿ ರಿಯಾಝ್‌ ಕಡಂಬು ಹೇಳಿದರು.

ಉಡುಪಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತಮಾಡಿದ ರಿಯಾಝ್, “ನಗರದ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾ ಭವನ ಹೊರಾಂಗಣದಲ್ಲಿ ಸಮಾವೇಶ ನಡೆಯಲಿದೆ” ಎಂದು ತಿಳಿಸಿದರು.

“ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎನ್ನುವ ನಂಬಿಕೆಯಲ್ಲಿ ಪ್ರಜೆಗಳು ಜೀವಿಸುತ್ತಿರುತ್ತಾರೆ. ಆ ಸಂವಿಧಾನವೇ ಅಪಾಯಕ್ಕೆ ಸಿಲುಕಿದರೆ ಪ್ರಜಾಪ್ರಭುತ್ವ ಉಳಿಯುವುದಾದರೂ ಹೇಗೆ? ಅಂತಹ ವಿಷಮ ಸನ್ನಿವೇಶದಲ್ಲಿ ನಾವೆಲ್ಲ ಬದುಕುತ್ತಿದ್ದೇವೆ. ಇದರ ಬಗ್ಗೆ ಜಾಗೃತಿ ಮೂಡಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

Advertisements

“ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಬೀಗುವ ನಾವು ಎಂತಹ ಸನ್ನಿವೇಶದಲ್ಲಿದ್ದೇವೆಂದರೆ ಸುಪ್ರೀಂ ಕೋರ್ಟ್‌ ತನ್ನ ಕೆಲಸ ಪಕ್ಕಕ್ಕಿಟ್ಟು ಮತ ಎಣಿಕೆ ಕಾರ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಚಂಡೀಗಡ ಮೇಯರ್‌ ಚುನಾವಣೆಯಲ್ಲಿ ಫ್ಯಾಸಿಸ್ಟ್‌ ಬಿಜೆಪಿ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಲು ಚುನಾವಣಾ ಅಧಿಕಾರಿಯನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದ ಪರಿಣಾಮ ಇದು. ನಮ್ಮ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳಲು ಇದೊಂದೇ ಪ್ರಕರಣವಲ್ಲ, ನೂರಾರು ಉದಾಹರಣೆಗಳಿವೆ” ಎಂದು ಹೇಳಿದರು.

“ಮೋದಿ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕುತ್ತಿರುವ ಕ್ರೌರ್ಯಭರಿತ ರೀತಿ, ಸರ್ವೋಚ್ಚ ನ್ಯಾಯಾಲಯ ಅಸಂವಿಧಾನಿಕವೆಂದು ಜರಿದ ಚುನಾವಣಾ ಬಾಂಡ್‌ಗಳ ಮೂಲಕ ಸಾವಿರಾರು ಕೋಟಿ ದೇಣಿಗೆ ಪಡೆದಿರುವುದು, ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ಜೈಲಿಗೆ ಅಟ್ಟುತ್ತಿರುವುದು, ಪುಲ್ವಾಮ ದಾಳಿ ಹಾಗೂ ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಸತ್ಯ ನುಡಿದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಸಿಂಗ್‌ ಅವರ ಮೇಲೆ ತನಿಖಾ ಸಂಸ್ಥೆಗಳ ದಾಳಿ, ಅಲ್ಪಸಂಖ್ಯಾತರ ಪ್ರಾರ್ಥನಾ ಮಂದಿರಗಳ ಮೇಲೆ ಬುಲ್ಡೋಜರ್‌ ಹರಿಸುವ ಕ್ರೌರ್ಯ, ದಲಿತರು ಮತ್ತು ಆದಿವಾಸಿಗಳ ಮೇಲೆ ಹದ್ದು ಮೀರಿದ ದೌರ್ಜನ್ಯ, ವಿಪಕ್ಷಗಳ ಸರ್ಕಾರಗಳನ್ನು ಕೆಡೆವುವುದು, ಶಿಕ್ಷಣದ ಕೇಸರೀಕರಣ, ಒಂದೇ ಎರಡೇ ಪಟ್ಟಿ ಮಾಡುತ್ತಲೇ ಹೋಗಬಹುದು” ಎಂದು ರಿಯಾಝ್‌ ವಿವರಿಸಿದರು.

“ದೇಶದ ಪ್ರಜೆಗಳಾಗಿ ನಾವು ಇಂತಹ ಸಂದರ್ಭದಲ್ಲಿ ನಿಭಾಯಿಸಬೇಕಾದ ಅತಿಮುಖ್ಯ ಜವಾಬ್ದಾರಿ ಎಂದರೆ ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಮುಂದಾಗುವುದು. ಅದರ ಮೇಲೆ ನಡೆಯುತ್ತಿರುವ ಪ್ರಹಾರದ ವಿರುದ್ಧ ಸಂವಿಧಾನದ ಅಡಿಯಲ್ಲಿ ಸೆಡ್ಡುಹೊಡೆದು ನಿಂತು ಪ್ರತಿರೋಧ ಒಡ್ಡುವುದು. ಆ ಪ್ರತಿರೋಧದ ಭಾಗವಾಗಿ ಎಸ್‌ಡಿಪಿಐ ಪಕ್ಷ ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶ ಹಮ್ಮಿಕೊಂಡಿದೆ. ಬನ್ನಿ, ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಿಕೊಳ್ಳಲು ಒಗ್ಗಟ್ಟಾಗಿ ನಿಲ್ಲೋಣ. ಆ ಮೂಲಕ ನಮ್ಮ ದೇಶವನ್ನು ಉಳಿಸಿಕೊಳ್ಳೋಣ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‌ತುಮಕೂರು | ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಉಡುಪಿ‌ ಜಿಲ್ಲಾಧ್ಯಕ್ಷ ಶಾಹಿದ್ ಅಲಿ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವಾ, ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಲೂರು ಮತ್ತು ಉಡುಪಿ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ಅಝೀಝ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X