ಉಡುಪಿ | ಎಲ್ಲಾ ಧರ್ಮಗಳ ಬಗ್ಗೆ ಅರಿತು ಬಾಳೋಣ : ಎಸ್ಪಿ ಹರಿರಾಮ್ ಶಂಕರ್

Date:

ಎಲ್ಲಾ ಧರ್ಮಗಳ ಆಚರಣೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿತುಕೊಂಡು ಸಮಾಜದಲ್ಲಿ ಶಾಂತಿಯ ಸಂದೇಶ ಸಾರಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ಅವರು ಶನಿವಾರ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಆಯೋಜಿಸಿದ್ದ ಕ್ರಿಸ್ಮಸ್ ಸ್ನೇಹ ಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

- Advertisement -

ಎಲ್ಲಾ ಸಮುದಾಯದವರೂ ಜೊತೆಯಾಗಿ ಸೇರಿಕೊಂಡು ಆಚರಿಸುವ ಹಬ್ಬದ ಕ್ರಿಸ್ಮಸ್ ಆಗಿದ್ದು, ಸಮಾಜದ ಏಕತೆಯನ್ನು ಗಟ್ಟಿಗೊಳಿಸುವುದು ವಿಶ್ವದ ಎಲ್ಲಾ ಧರ್ಮಗಳ ಮೂಲ ಉದ್ದೇಶವಾಗಿದೆ. ಸಮಾಜವನ್ನು ಒಗ್ಗೂಡಿಸುವಲ್ಲಿ ಧರ್ಮಕ್ಕೆ ಮಹತ್ವದ ಪಾತ್ರವಿದೆ. ಧರ್ಮ ಜನರನ್ನು ಧರ್ಮ, ಸಾಮಾಜಿಕ, ಆಧ್ಯಾತ್ಮಿಕವಾಗಿ ಪ್ರಭಾವಿತಗೊಳಿಸುತ್ತದೆ. ಪ್ರತಿಯೊಂದು ಧರ್ಮ ಸಮಾಜದಲ್ಲಿ ಒಗ್ಗಟ್ಟಿನ ಭಾವನೆ ಮೂಡಿಸುತ್ತದೆ ಈ ಮೂಲಕ ಬಲಿಷ್ಠ ಭಾರತ ನಿರ್ಮಾಣದಲ್ಲಿ ಪ್ರತಿಯೊಬ್ಬರು ಕೈಜೋಡಿಸೋಣ ಎಂದು ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ವಹಿಸಿ ಮಾತನಾಡಿ ಪ್ರಭು ಯೇಸು ತಮ್ಮ ಸ್ವರ್ಗದ ಸಾಮ್ರಾಜ್ಯವನ್ನು ಬಿಟ್ಟು ಗೋದಲಿಯಲ್ಲಿ ಜನಿಸಿದರು. ಮಾನವ ದೇವರಿಂದ ದೂರ ಸರಿದಾಗ, ಪಾಪಕೂಪದಿಂದ ತೊಳಲಾಡಿದಾಗ ಅವರು ಆಗಮಿಸಿ, ಮತ್ತೆ ಮಾನವರನ್ನು ದೇವರನ್ನಾಗಿಸಲು ಪ್ರಯತ್ನಿಸಿದರು. ಭೂಲೋಕದಲ್ಲಿ ಶಾಂತಿಗಾಗಿ ಶ್ರಮಿಸಿದವರು ಭಾಗ್ಯವಂತರು ಎಂದು ಯೇಸು ಸ್ವಾಮಿ ಸಾರಿದ್ದರು ಅವರ ಸಂದೇಶದಂತೆ ಬದುಕಿ ಬಾಳೋಣ ಎಂದರು.

WhatsApp Image 2025 12 13 at 3.22.24 PM 1

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಧರ್ಮಪ್ರಾಂತ್ಯದ ವತಿಯಿಂದ ಗೌರವಿಸಲಾಯಿತು. ಎಮ್ ಸಿ ಸಿ ಬ್ಯಾಂಕ್ ಇದರ ಅಧ್ಯಕ್ಷರಾದ ಅನಿಲ್ ಲೋಬೊ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಜಿ ಕುರ್ಯ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ|ಸ್ಟೀವನ್ ಡಿಸೋಜಾ ಉಪಸ್ಥಿತರಿದ್ದರು. ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಸ್ವಾಗತಿಸಿ ಮಾಧ್ಯಮ ಸಂಚಾಲಕ ಮೈಕಲ್ ರೊಡ್ರಿಗಸ್ ವಂದಿಸಿದರು. ಲೆಸ್ಲಿ ಆರೋಝಾ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...