ಉಡುಪಿ | ಹೊಸ ವರ್ಷಾಚರಣೆಗೆ ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ

Date:

ಹೊಸ ವರ್ಷಾಚರಣೆಯನ್ನು ಶಾಂತಿಯುತ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷದ ದಿನ ಜಿಲ್ಲೆಯಲ್ಲಿ ಇರುವ ಎಲ್ಲಾ ಹೈವೇ ಪಟ್ರೋಲ್‌ ಹಾಗೂ ಹೊಯ್ಸಳ ವಾಹನಗಳನ್ನು ಕಡ್ಡಾಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಸ್ತಿಗೆ ನಿಯೋಜಿಸಲಾಗಿದೆ.

- Advertisement -

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರು, ವೀಲಿಂಗ್‌ ನಡೆಸುವವರು ಹಾಗೂ ಇತರೆ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಡಿಸೆಂಬರ್‌ 31ರ ಬೆಳಿಗ್ಗೆ ಕರಾವಳಿ ಪ್ರದೇಶಗಳ ಸಮುದ್ರ ಹಾಗೂ ಬೀಚ್‌ಗಳಲ್ಲಿ ನಡೆಯುವ ಹೊಸ ವರ್ಷದ ಆಚರಣೆಗಳ ಸುರಕ್ಷತಾ ಕ್ರಮಗಳ ಕುರಿತು ಸಿಎಸ್ಪಿ ಕಚೇರಿಯಲ್ಲಿ ಸಭೆ ನಡೆಸಲಾಗಿದ್ದು, ಸಂಬಂಧಿಸಿದ ಠಾಣಾಧಿಕಾರಿಗಳೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

ಜಿಲ್ಲೆಯ ಪ್ರತಿಯೊಂದು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಹೋಂ ಸ್ಟೇಗಳು, ಹೋಟೆಲ್‌ಗಳು, ರೆಸಾರ್ಟ್‌ಗಳು, ಪಬ್‌ಗಳು ಹಾಗೂ ಬಾರ್‌ಗಳನ್ನು ಪರಿಶೀಲಿಸಲಾಗುತ್ತಿದ್ದು, ರೇವ್ ಪಾರ್ಟಿ, ಡ್ರಗ್‌ ಪಾರ್ಟಿ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸಾಮಾಜಿಕ ಜಾಲತಾಣಗಳು, ಆನ್‌ಲೈನ್‌ ಬುಕಿಂಗ್‌ಗಳು ಹಾಗೂ ವೆಬ್‌ ಪುಟಗಳ ಮೇಲೂ ನಿಗಾವಹಿಸಲಾಗುತ್ತಿದೆ.

ಮಣಿಪಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪಬ್‌ಗಳಲ್ಲಿ ವಿಶೇಷವಾಗಿ ಸಾಕಷ್ಟು ಸಂಖ್ಯೆಯಲ್ಲಿ ಪುರುಷ ಮತ್ತು ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ನಗರ ವ್ಯಾಪ್ತಿಯಲ್ಲಿ ಉಡುಪಿ ಜಿಲ್ಲಾ “ಅಕ್ಕಪಡೆ” ತಂಡವನ್ನೂ ಕಾರ್ಯಾಚರಣೆಗೆ ಇಳಿಸಲಾಗಿದೆ.

ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ವಿಶೇಷ ಗಮನ ಹರಿಸಲಾಗುತ್ತಿದ್ದು, ವಿದೇಶಿ ನಾಗರಿಕರ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. “Celebrate Responsibly” (ಜವಾಬ್ದಾರಿಯಿಂದ ಆಚರಿಸಿ) ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡಲಾಗಿದೆ.

ದೊಡ್ಡ ಸಾರ್ವಜನಿಕ ಸಮಾವೇಶಗಳ ಮೇಲ್ವಿಚಾರಣೆ ಹಾಗೂ ಕಾನೂನು–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಡ್ರೋನ್‌ ಕ್ಯಾಮೆರಾಗಳನ್ನು ಬಳಕೆ ಮಾಡುತ್ತಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 3 ಡ್ರೋನ್‌ ಕ್ಯಾಮೆರಾ, 10 ಹೆಚ್ಚುವರಿ ಪೆಟ್ರೋಲಿಂಗ್‌ ವಾಹನಗಳು ಹಾಗೂ 24 ಪಬ್ಲಿಕ್‌ ಅಡ್ರೆಸ್‌ ಸಿಸ್ಟಮ್‌ಗಳನ್ನು ಬಳಕೆ ಮಾಡಲಾಗಿದೆ.

ಇದಲ್ಲದೆ, ಜಿಲ್ಲೆಯಲ್ಲಿ ಆಯ್ದ ಸ್ಥಳಗಳಲ್ಲಿ ಒಟ್ಟು 13 ಡಿಎಆರ್‌ ತುಕಡಿ ಹಾಗೂ 2 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಿ ಭದ್ರತೆಯನ್ನು ಮತ್ತಷ್ಟು ಬಲಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...

ಮುಂಡಗೋಡ | ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನಗಳ ದಸರಾ ಶಿಬಿರ

ಮುಂಡಗೋಡ: ಲೊಯೊಲಾ ವಿಕಾಸ ಕೇಂದ್ರದ ವಸತಿ ನಿಲಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ...

ಚಿಕ್ಕಮಗಳೂರು | ದೊಡ್ಡ ಗುಂಡಿಗಳನ್ನು ಮುಚ್ಚಿದ ಶಾಲಾ ಮಕ್ಕಳು 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ...