ಉಡುಪಿ | ಪೊಲೀಸ್ ಇಲಾಖೆಗೆ ಸಮನಾಗಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕದಳದ ಸೇವೆ ಅನನ್ಯ: ಹರಿರಾಂ ಶಂಕರ್

Date:

ಗೃಹರಕ್ಷಕದಳವು ಪೊಲೀಸ್ ಇಲಾಖೆಗೆ ಸರಿಸಮನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕೊರೋನಾ ಕಾಲದಲ್ಲಿ ಗೃಹರಕ್ಷಕದಳದ ಕಾರ್ಯವೈಖರಿಯು ಜನರಿಂದ ಮೆಚ್ಚುಗೆ ಪಡೆದಿದೆ. ಗೃಹರಕ್ಷಕದಳದ ಸಿಬ್ಬಂದಿಗಳು ಪೊಲೀಸರ ಮಾದರಿಯಲ್ಲೇ ಸೇವೆ ನೀಡಿ ದೇಶದಲ್ಲಿ ಹೆಸರುವಾಸಿಯಾಗಿದ್ದು ಗೃಹರಕ್ಷಕದಳದ ಸೇವೆ ಅನನ್ಯವಾಗಿದೆ ಎಂದು ಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಂ ಶಂಕರ್ ಹೇಳಿದರು.

- Advertisement -

ಅವರು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...
1008158565

ಅತಿ ಹೆಚ್ಚು ಜನಸಂದಣಿ ಸೇರುವ ಕಾರ್ಯಕ್ರಮಗಳಲ್ಲಿ ಗೃಹರಕ್ಷಕದಳವು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತದೆ. ವಾಹನ ಸಂಚಾರದ ನಿಭಾವಣೆಯಲ್ಲಿ ಪೊಲೀಸರಿಗಿಂತಲೂ ಒಂದು ಹೆಜ್ಜೆ ಮುಂದಿದ್ದು ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿ ಖುದ್ದು ಜನರೇ ಗೃಹರಕ್ಷಕರನ್ನು ನಿಯುಕ್ತಿಗೊಳಿಸುವಂತೆ ಕೇಳಿಕೊಳ್ಳುವ ಉದಾಹರಣೆಗಳಿವೆ. ಇದು ಗೃಹರಕ್ಷಕರ ಕರ್ತವ್ಯ ಬದ್ದತೆಗೆ ಹಿಡಿದ ಕೈಗನ್ನಡಿಯಾಗಿದೆ. ವಯಸ್ಸಿನ ಬೇಧವಿಲ್ಲದೆ ಗೃಹರಕ್ಷಕರದಳವು ಹಲವು ಜನರಿಗೆ ಬದುಕು ಕಟ್ಟಿಕೊಟ್ಟಿದೆ ಎಂದು ಅವರು ಹೇಳಿದರು.

ಪೊಲೀಸ್ ಇಲಾಖೆಯಂತೆಯೇ ಗೃಹರಕ್ಷಕರಿಗೂ ಯಾವುದೇ ರೀತಿಯ ಆರೋಗ್ಯ ಸೇವೆಗಳು ಸಿಗುವುದಿಲ್ಲ. ಅಪಘಾತಗಳ ಸಂದರ್ಭಗಳಲ್ಲಿ ಅಥವಾ ಅನಾರೋಗ್ಯ ಪೀಡಿತರಾದಾಗ ಚಿಕಿತ್ಸೆಗಾಗಿ ಹಲವಾರು ಲಕ್ಷ ಖರ್ಚಾಗುತ್ತದೆ. ವ್ಯಕ್ತಿಯೊಬ್ಬನು ತನ್ನ ಸಂಪೂರ್ಣ ಜೀವಿತಾವಧಿಯಲ್ಲಿ ದುಡಿದ ಹಣವು ವೈದ್ಯಕೀಯ ವೆಚ್ಚಗಳಿಗಾಗಿ ಖರ್ಚಾಗುತ್ತವೆ. ವ್ಯಕ್ತಿಯು ಅಕಾಲಿಕ ಮರಣ ಹೊಂದಿದಂತಹ ಸಂದರ್ಭಗಳಲ್ಲಿ ಕುಟುಂಬಿಕರಿಗೆ ಯಾವುದೇ ರೀತಿಯ ಆರ್ಥಿಕ ಭದ್ರತೆ ಇರುವುದಿಲ್ಲ. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಖಾಸಗಿ ಬ್ಯಾಂಕ್ ಗಳ ಸಹಯೋಗದೊಂದಿಗೆ ಆರೋಗ್ಯ ವಿಮಾ ಪ್ಯಾಕೇಜ್ ಅನ್ನು ದೊರಕುವಂತೆ ಮಾಡಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸಮಾಜದಲ್ಲಿ ತುರ್ತು ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಗೃಹ ರಕ್ಷಕರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಕ್ರೀಡೆಯಿಂದ ದೈಹಿಕವಾಗಿ ಸದೃಢವಾದ ಆರೋಗ್ಯ ಹೊಂದಬಹುದಾಗಿದೆ ಹಾಗೂ ಸಂಘಟಿತರಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ, ಅಥ್ಲೆಟಿಕ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಹರಿಪ್ರಸಾದ್ ರೈ, ವಿವಿಧ ಜಿಲ್ಲೆಗಳ ಸಮಾದೇಷ್ಟರು ಉಪಸ್ಥಿತರಿದ್ದರು.
ಜಿಲ್ಲಾ ಗೃಹರಕ್ಷಕದಳದ ಸೆಕೆಂಡ್ ಇನ್ ಕಮಾಂಡ್ ಕೆ.ಸಿ.ರಾಜೇಶ್ ಸ್ವಾಗತಿಸಿ, ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಎ. ವಂದಿಸಿ, ಬ್ರಹ್ಮಾವರ ಘಟಕದ ಪಿಎಲ್‌ಸಿ ಸ್ಟೀವನ್ ಪ್ರಕಾಶ್ ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...