ಉಡುಪಿ | ನವಜಾತ ಶಿಶು ಶವ ಪತ್ತೆ ಪ್ರಕರಣ, ಸುಳ್ಳು ಸುದ್ದಿಗಳಿಗೆ ಎಸ್ ಪಿ ಡಾ ಅರುಣ್ ಕುಮಾರ್ ಸ್ಪಷ್ಟನೆ

Date:

ಉಡುಪಿಯ ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ.

- Advertisement -

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಮಗುವಿನ ಮೃತದೇಹ ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ ಶೌಚಾಲಯದಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಇದು ಮಸೀದಿಯವರ ಗಮನಕ್ಕೆ ಬಂದಾಗ ದೂರು ನೀಡಿದ್ದಾರೆ.

ಈ ಮಗುವಿನ ಶವ ಎಲ್ಲಿಂದ ಬಂತು ಎಂದು ತನಿಖೆ ನಡೆಸಲಾಗಿದೆ. ಸ್ಥಳೀಯ ಯುವತಿ ಆಫ್ರಿನಾ ಅವರ ನವಜಾತ ಮಗುವಿನ ಶವ ಎಂದು ಗೊತ್ತಾಗಿದೆ. ಆಫ್ರಿನಾಳಿಂದ ಸ್ವ ಇಚ್ಚಾ ಹೇಳಿಕೆ ಪಡೆಯಲಾಗಿದೆ ಎಂದರು.

ಆಕೆ ತನ್ನದೇ ಮಗು ಎಂದು ಒಪ್ಪಿಕೊಂಡಿದ್ದಾಳೆ. ಏಳುವರೆ ಯಿಂದ ಎಂಟು ತಿಂಗಳು ನಡುವಯಸ್ಸಿನ ಭ್ರೂಣ, ಯಾವುದೇ ಪ್ರೊಸೀಜರ್ ಇಲ್ಲದೆ ಅಬಾರ್ಷನ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ಏಕಾಏಕಿ ಹೊಟ್ಟೆ ನೋವು ಬಂದಿರುವುದರಿಂದ ಶೌಚಾಲಯಕ್ಕೆ ತೆರಳಿದ್ದಾಳೆ. ಶೌಚಾಲಯದಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾಳೆ. ಸದ್ಯ ಆಫ್ರಿನಾ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಕೆಲವೊಂದು ಅನುಮಾನಾಸ್ಪದ ಆಡಿಯೋಗಳು ವೈರಲ್ ಆಗಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...