ಉಡುಪಿ ಜಿಲ್ಲೆ ಸರ್ವ ಜನಾಂಗದ ಶಾಂತಿಯ ತೋಟ – ಸುಂದರ್ ಮಾಸ್ತರ್

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯ ವತಿಯಿಂದ ಇತ್ತೀಚೆಗೆ ಉಡುಪಿ ಜಿಲ್ಲೆಯ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಹರಿರಾಮ್ ಶಂಕರ್ ಅವರನ್ನು ಪುಷ್ಪ ಗುಚ್ಚ ನೀಡಿ ಸ್ವಾಗತಿಸಲಾಯಿತು.

- Advertisement -

ದ‌.ಸಂ.ಸ.ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್ ಮಾಸ್ತರ್ ರವರು ಉಡುಪಿ ಜಿಲ್ಲೆಯು ಸರ್ವ ಜನಾಂಗದ ಶಾಂತಿಯ ತೋಟ, ಇಲ್ಲಿನ ಕೆಲವೊಂದು ವಿಚ್ಛಿಧ್ರಕಾರಿ ಶಕ್ತಿಗಳು ಇಲ್ಲಿನ ಸೌಹಾರ್ದತೆಯನ್ನು ಕೆಡಿಸಲು ಹಲವಾರು ಬಾರಿ ಪ್ರಯತ್ನಿಸಿದರೂ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮತ್ತು ಪ್ರಗತಿಪರ ಸಂಘಟನೆಗಳು ಅದಕ್ಕೆ ಅವಕಾಶ ಕೊಡದೆ, ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಪ್ರತಿಪಾದಿಸುತ್ತಾ, ಚಳುವಳಿ ರೂಪಿಸಿಕೊಂಡು ಬಂದಿದೆ. ಹೊಸದಾಗಿ ಬಂದ ತಾವೂ ಕೂಡ ಇದೇ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವಂತೆ ಮನವಿಮಾಡಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಏಳು ತಾಲೂಕುಗಳಲ್ಲೂ ತಾಲೂಕು ಶಾಖೆ ಹೊಂದಿರುವ ನಮ್ಮ ‌ಸಂಘಟನೆ ಸದಾ ಶೋಷಿತರ ಪರ ನಿರಂತರ ಹೋರಾಟ ನಡೆಸುತ್ತಾ ಬರುತ್ತಿದೆ ಎಂದರು.

ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಅವರು ಹನೆಹಳ್ಳಿ ಶೂಟೌಟ್ ಪ್ರಕರಣ, ಕೊಲ್ಲೂರು ಗಂಗೆ ಕೊರಗ ಪ್ರಕರಣ, ಹೆಬ್ರಿಯ ಪ್ರೀತಿ ವಂಚನೆಯಿಂದ ದಲಿತ ಹುಡುಗಿಯ ಆತ್ಮಹತ್ಯೆ ಪ್ರಕರಣ, ಮತ್ತು ಮಾವಿನಕಟ್ಟೆಯ ದಲಿತ ಯುವತಿಯ ಮೇಲೆ ಹಲ್ಲೆ ಪ್ರಕರಣವನ್ನೂ ‌ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವ ರೀತಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪೊಲೀಸ್ ವರಿಷ್ಠಾಧಿಕಾರಿಯವರನ್ನು ಭೇಟಿಯಾದ ನಿಯೋಗದಲ್ಲಿ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮಸುಂದರ್ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಭಾಸ್ಕರ್ ಮಾಸ್ತರ್ ಕುಂಜಿಬೆಟ್ಟು , ರಾಜೇಂದ್ರ ಮಾಸ್ಟರ್ ಬೆಳ್ಳೆ , ಕುಮಾರ್ ಕೋಟಾ, ಶ್ರೀಧರ ಕುಂಜಿಬೆಟ್ಟು, ಬ್ರಹ್ಮಾವರ ತಾಲೂಕು ಸಂಚಾಲಕರಾದ ಹರೀಶ್ಚಂದ್ರ ಬಿರ್ತಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...