ಉಡುಪಿ | ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಸ.ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Date:

ಉಡುಪಿ ನಗರದ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ದಾಖಲೆ ಮಾಡುವುದರೊಂದಿಗೆ ಸಮಗ್ರ ಚಾಂಪಿಯನ್‌ಗಳಾಗಿ ಹೊರಹೊಮ್ಮಿದ್ದಾರೆ.

- Advertisement -

ಪ್ರಥಮ ಪಿ.ಯು. ವಿದ್ಯಾರ್ಥಿನಿ ಪೂರ್ಣಿಮಾ ಉದ್ದ ಜಿಗಿತದಲ್ಲಿ ದ್ವಿತೀಯ, ತ್ರಿವಿಧ ಜಿಗಿತದಲ್ಲಿ ಪ್ರಥಮ ಹಾಗೂ 200 ಮೀ. ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಾನ್ಯ ಆರ್ 400 ಮೀ. ಹರ್ಡಲ್ಸ್ ನಲ್ಲಿ ಪ್ರಥಮ, 400 ಮೀ. ಓಟದಲ್ಲಿ ದ್ವಿತೀಯ ಸ್ಥಾನ, ಅನನ್ಯ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ, ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದರೆ, ನಿಖಿತಾ 800 ಮೀ. ಮತ್ತು 400 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಜಯಲಕ್ಷ್ಮಿ 3000 ಮೀ. ಓಟದಲ್ಲಿ ದ್ವಿತೀಯ, 1500 ಮೀ. ಮತ್ತು 800 ಮೀ. ಓಟದಲ್ಲಿ ತೃತೀಯ ಸ್ಥಾನ, ರಕ್ಷಿತಾ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಅಶ್ವಿನಿ 200 ಮೀ ಓಟದಲ್ಲಿ ದ್ವಿತೀಯ ಸ್ಥಾನ, ನೈಮಿಷ ಎತ್ತರ ಜಿಗಿತದಲ್ಲಿ ದ್ವಿತೀಯ, ಪೂರ್ಣಿಮಾ, ಮಾನ್ಯ ಆರ್, ನಿಖಿತಾ, ಜಯಲಕ್ಷ್ಮಿ ಮತ್ತು ಅಶ್ವಿನಿ ಅವರನ್ನೊಳಗೊಂಡ ರಿಲೇ ತಂಡ 4100 ಹಾಗೂ 4400 ಮೀ. ರಿಲೇಗಳಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿ ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವ ತಂಡವನ್ನು ಪ್ರಾಂಶುಪಾಲರು ಮತ್ತು ಶಿಕ್ಷಣ ಸೇವಾ ಸಮಿತಿಯವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...