ಉಡುಪಿ | ವಿದ್ಯಾರ್ಥಿಗಳು ಪ್ರಶ್ನಿಸುವ ಗುಣವನ್ನು ಬೆಳೆಸಿಕೊಳ್ಳಬೇಕು: ಚಿಂತಕ ಶಿವಸುಂದರ್

Date:

ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಹೂಡೆ ಮತ್ತು ಎಪಿಸಿಆರ್ ಉಡುಪಿ ಜಿಲ್ಲಾ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಾನೂನು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

- Advertisement -

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅಂಕಣಗಾರ ಹಾಗೂ ಚಿಂತಕ ಶಿವಸುಂದರ್ ಮಾತನಾಡಿ, “ವಿದ್ಯಾರ್ಥಿಗಳು ಪ್ರಶ್ನಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಸಮಾಜದಲ್ಲಿ ಯಾರೇ ಏನು ಮಾತನಾಡಿದರೂ ಅದನ್ನು ಸುಮ್ಮನೇ ನಂಬದೆ, ಅದರ ಕುರಿತು ಪ್ರಶ್ನಿಸಿ ವಿಚಾರಿಸಿ ಅರಿವು ಹೆಚ್ಚಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಇವತ್ತು ಸಮಾಜದಲ್ಲಿ ಬಡವರ ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಿದೆ. ದೇಶದ ದೊಡ್ಡ ಮಟ್ಟದ ಸಂಪನ್ಮೂಲ ಕೆಲವೇ ಕೆಲವು ಉದ್ಯಮಿಗಳ ಮುಷ್ಠಿಯಲ್ಲಿದೆ. ಇದು ಸಮ ಸಮಾಜದ ನಿರ್ಮಾಣಕ್ಕೆ ತೊಡಕಾಗಿದೆ ಎಂದು ಹೇಳಿದರು.

ಪ್ರತಿಭೆಯಿದ್ದರೂ ಸೂಕ್ತ ಶ್ರೈಕ್ಷಣಿಕ ಅವಕಾಶ ಇಲ್ಲದೇ ಇರುವುದರಿಂದ ಹಲವು ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಸಂವಿಧಾನ ಅವಕಾಶ ಕೊಟ್ಟಿದ್ದರೂ ವ್ಯವಸ್ಥೆಯ ಹುಳುಕಿನ ಕಾರಣ ಈ ಸ್ಥಿತಿ ನಿರ್ಮಾಣವಾಗಿದೆ. ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಂಡಾಗ ಈ ಹುಳುಕುಗಳನ್ನು ಸರಿಪಡಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನಂತರ ಮಾತನಾಡಿದ ಹೈಕೋರ್ಟ್‌ ವಕೀಲರಾದ ವಿನಯ ಶ್ರೀವಾಸ್ತವ್, ಸಂವಿಧಾನ ಪೀಠಿಕೆಯ ಕುರಿತು ಅರಿವು ಮೂಡಿಸಿದರು. ಯಾಸೀನ್ ಕೋಡಿಬೆಂಗ್ರೆ ಪ್ರಾಸ್ತಾವಿಕ ಭಾಷಣ ಮಾಡಿದರು. ಝೀಫಾ ನಾಝ್ ಸ್ವಾಗತಿಸಿದರು. ಆಯಿಶಾ ಸೀಮಾಝ್ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಆಯಿಶಾ ಫಾಝಿಯಾ ಧನ್ಯವಾದವಿತ್ತರು.

ಇದನ್ನು ಓದಿದ್ದೀರಾ? ಧಾರವಾಡ | ಮಾನವೀಯ ಮೌಲ್ಯಗಳ ಕುಸಿತವೇ ಅತ್ಯಾಚಾರ, ಕೊಲೆಗೆ ಕಾರಣ: ನಿವೃತ್ತ ನ್ಯಾ. ಸಂತೋಷ್ ಹೆಗಡೆ

ಈ ಸಂದರ್ಭದಲ್ಲಿ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಬೀನಾ, ಎ.ಪಿ.ಸಿ.ಆರ್ ಜಿಲ್ಲಾ ಕಾರ್ಯದರ್ಶಿ ಪ್ರಶಾಂತ್ ಮೋಗವೀರ, ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಇದ್ರಿಸ್ ಹೂಡೆ, ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...