ಉಡುಪಿ | ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಜಿಲ್ಲೆಯಲ್ಲಿ ಶೇ.14.36ರಷ್ಟು ಸಮೀಕ್ಷೆ ಪೂರ್ಣ, ನಿರ್ಲಕ್ಷ್ಯ ತೋರಿದ್ದಲ್ಲಿ ಶಿಸ್ತು ಕ್ರಮ

Date:

ಸರ್ವರ್ ಮತ್ತು ನೆಟ್‌ವರ್ಕ್ ಸಮಸ್ಯೆ, ಸರಿಯಾಗಿ ಕಾರ್ಯ ನಿರ್ವಹಿಸದ ಆ್ಯಪ್ ಸೇರಿದಂತೆ ವಿವಿಧ ಕಾರಣಗಳಿಂದ ಮೊದಲ ಐದು ದಿನಗಳ ಕಾಲ ಮಂದಗತಿಯಲ್ಲಿ ಸಾಗಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಿನ್ನೆ ಮತ್ತು ಇಂದು ವೇಗವನ್ನು ಪಡೆದುಕೊಂಡಿದೆ. ಇಂದು ಸಂಜೆಯವರೆಗೆ ಉಡುಪಿ ಜಿಲ್ಲೆಯಲ್ಲಿ ಇರುವ ಒಟ್ಟು 3,55,771 ಮನೆಗಳ ಗಣತಿ ಪೈಕಿ 51,110 ಮನೆಗಳ ಸರ್ವೆ ಕಾರ್ಯವನ್ನು ಗಣತಿದಾರರು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಶೇ.14.36 ರಷ್ಟು ಗಣತಿ ಕಾರ್ಯ ನಡೆದಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ತಿಳಿಸಿದ್ದಾರೆ.

- Advertisement -

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ನಿರ್ಲಕ್ಷ್ಯ ತೋರಿದ್ದಲ್ಲಿ ಶಿಸ್ತು ಕ್ರಮ – ಜಿಲ್ಲಾಧಿಕಾರಿ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಸದರಿ ಸಮೀಕ್ಷೆಗೆ ನಿಯೋಜನೆಗೊಂಡ ಗಣತಿದಾರರು ತಮಗೆ ನಿಯೋಜಿಸಲಾಗಿರುವ ಸಮೀಕ್ಷಾ ಬ್ಲಾಕ್ ಗಳಲ್ಲಿ ಸಮೀಕ್ಷೆಯನ್ನು ನಿರ್ವಹಿಲು ಆದೇಶಿಸಲಾಗಿರುತ್ತದೆ. ಯಾವುದೇ ಗಣತಿದಾರರು ಸಮೀಕ್ಷೆಯಲ್ಲಿ ನಿಷ್ಕಾಳಜಿ ತೋರುವಂತಿಲ್ಲ. ಗಣತಿದಾರರು ಸಮೀಕ್ಷೆಯಲ್ಲಿ ನಿರಾಸಕ್ತಿ ಅಥವಾ ಅಸಡ್ಡೆ, ತೋರಿದ್ದಲ್ಲಿ, ಅನಗತ್ಯ ನೆಪಗಳನ್ನು ಹೇಳಿ ಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ ಸರ್ಕಾರದ ಕೆಲಸದಲ್ಲಿ ನಿಷ್ಕಾಳಜಿ ತೋರಿದ್ದಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ
ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸಹಾಯವಾಣಿ ಸ್ಥಾಪನೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಸದರಿ ಸಮೀಕ್ಷೆಗೆ ಸಂಬಧಿಸಿದಂತೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಸಹಾಯವಾಣಿ ಸಂಖ್ಯೆ : 8050770004, ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗ ಸಹಾಯವಾಣಿ ಸಂಖ್ಯೆ :080-69146723 ಹಾಗೂ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಧಿಕಾರಿ ಕಚೇರಿ ಉಡುಪಿ ಇಲ್ಲಿ ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ: 0820- 2573596 ಅನ್ನು ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಸದರಿ ಸಹಾಯವಾಣಿಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...