ಉಡುಪಿ | ಭಾರತ ಜ್ಞಾನ-ವಿಜ್ಞಾನ ಸಮಿತಿಯಿಂದ ಅ.18,19ರಂದು ‘ಟೀಚರ್ ಶೈಕ್ಷಣಿಕ ಹಬ್ಬ’

Date:

ಭಾರತೀಯ ಜ್ಞಾನ, ವಿಜ್ಞಾನ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಟೀಚರ್ ಶೈಕ್ಷಣಿಕ ಹಬ್ಬವನ್ನು ಅ.18 ಮತ್ತು 19ರಂದು ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಭಾರತ ಜ್ಞಾನ – ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪಿ.ವಿ ಭಂಡಾರಿ ಹೇಳಿದರು.

- Advertisement -

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಬಿಕ್ಕಟ್ಟುಗಳೊಡನೆ ವರ್ತಮಾನದ ಮುಖಾಮುಖಿ ಎಂಬ ಹೆಸರಿನಲ್ಲಿ ನಡೆಯುವ ವಿವಿಧ ಗೋಷ್ಠಿಗಳಲ್ಲಿ ಶೈಕ್ಷಣಿಕ ನೀತಿಗಳು, ಅವುಗಳ ಅನುಷ್ಠಾನದಲ್ಲಿ ಎದುರಾಗಿರುವ ಸವಾಲುಗ ಳ ಕುರಿತು ಚರ್ಚೆ, ಉಪನ್ಯಾಸ, ಸಂವಾದಗಳು ನಡೆಯಲಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಹಬ್ಬದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳ 250ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅ.18 ರಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ಹೈದರಾಬಾದಿನ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪೊ.ರಾಮಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಮಿತಿ ಕೋಶಾಧಿಕಾರಿ ಪ್ರೊ. ಕಮಲ್ ಲೊಡಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಬಿ ಕಾವೇರಿ, ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ಪಾಲ್ಗೊಳ್ಳಲಿದ್ದಾರೆ. ಅ.19 ರಂದು ಮಧ್ಯಾಹ್ನ 2.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಗದಗ | ಒಂದೇ ಗೋದಾಮಿನಲ್ಲಿ ಪಡಿತರ ಅಕ್ಕಿ, ರಸಗೊಬ್ಬರ, ಕ್ರಿಮಿನಾಶಕ, ಸಿಮೆಂಟ್ ದಾಸ್ತಾನು: ಆತಂಕದಲ್ಲಿ ಗ್ರಾಮಸ್ಥರು

ಅ.18 ರಂದು ಸಂಜೆ 6.30 ಕ್ಕೆ ಯತೀಶ್ ಕೊಳ್ಳೆಗಾಲ ನಿರ್ದೇಶನದ ಅರಿವು ರಂಗಪಯಣ ತಂಡದಿಂದ ನಾಟಕ ಪ್ರದರ್ಶನ ನಡೆಯಲಿದೆ. ಕೋವಿಡ್ ನಂತರ ಮೊದಲ ಬಾರಿಗೆ ಟೀಚರ್ ಶೈಕ್ಷಣಿಕ ಹಬ್ಬ ನಡೆಯುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉದಯ್ ಗಾಂವಕರ್, ಸಂತೋಷ್ ನಾಯಕ್ ಪಟ್ಲ, ಶುಭಂಕರ್ ಚಕ್ರವರ್ತಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...