ಉಡುಪಿ | ‘ಕಂಚಿನಡ್ಕ’ ಟೋಲ್‌ಗೇಟ್‌ಗೆ ಸರ್ಕಾರದಿಂದ ತಾತ್ಕಾಲಿಕ ತಡೆ : ಸಚಿವ ಜಾರಕಿಹೊಳಿ ಆದೇಶ

Date:

ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರಕ್ಕೆ ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ, ಅಲ್ಲದೇ, ಈ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಧಿಕೃತ ಆದೇಶ ಕೂಡ ಹೊರಡಿಸಿದ್ದಾರೆ.

- Advertisement -

ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಟೋಲ್ ಸಂಗ್ರಹ ಕೇಂದ್ರವನ್ನು ರದ್ದುಪಡಿಸುವ ನಿಟ್ಟಿನಲ್ಲಿ ಲೋಕೋಪಯೊಗಿ ಸಚಿವರಾದ ಸತೀಶ್ ಜಾರಕಿಹೊಳಿಯವರಿಗೆ ಕಾಪು ಕಾಂಗ್ರೆಸ್ ಪಕ್ಷದ ನಾಯಕರ ನಿಯೋಗವು ತೆರಳಿ ಮನವಿ ಸಲ್ಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ನಡುವೆ ಗುರುವಾರ ಉಡುಪಿಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಟೋಲ್ ಗೇಟ್ ಹೋರಾಟ ಸಮಿತಿಯ ಮುಖಂಡರು, ಆಗಸ್ಟ್ 24ರ ಶನಿವಾರ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದರು. ಈ ನಡುವೆಯೇ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಧಿಕೃತ ಆದೇಶ ಕೂಡ ಹೊರಡಿಸಿದ್ದು, ಕಾರ್ಯಾದೇಶ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಿಳಿಸಿದ್ದಾರೆ.

ಆದೇಶ 7

ಆದೇಶದಲ್ಲಿ, “ಟೋಲ್ ಗೇಟ್ ವಿಷಯವು ಸಾರ್ವಜನಿಕ ಹಿತದೃಷ್ಟಿಯಿಂದಾಗಿ ಸೂಕ್ಷ್ಮತೆಯಿಂದ ಕೂಡಿರುವುದರಿಂದ, ಚಿನಡ್ಕ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲು ಉದ್ದೇಶಿಸಿರುವ ಸುಂಕ ವಸೂಲಾತಿ ಕೇಂದ್ರದ ಬಗ್ಗೆ ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲಿಸಿ, ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವರೆಗೆ ಈಗಾಗಲೇ ಕಾಮಗಾರಿ ನೀಡಲಾಗಿರುವ ಸಂಸ್ಥೆಗೆ ನೀಡಲಾಗಿರುವ ಕಾರ್ಯಾದೇಶ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು, ಕಂಚಿನಡ್ಕ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆಯನ್ನು ಯಥಾಸ್ಥಿತಿಯಲ್ಲಿ ಮುಂದುವರೆಸುವ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದು ಲೋಕೋಪಯೋಗಿ ಸಚಿವರು ಉಲ್ಲೇಖಿಸಿದ್ದಾರೆ.

ಸರ್ವಜ್ಞ ತಂತ್ರಿ ಬೆಳ್ಮಣ್, ಟೋಲ್ ಗೇಟ್ ಹೋರಾಟ ಸಮಿತಿ

ಶನಿವಾರದ ಪ್ರತಿಭಟನೆ ನಡೆಯಲಿದೆ: ಟೋಲ್‌ಗೇಟ್‌ ಹೋರಾಟ ಸಮಿತಿ

“ಸರ್ಕಾರದ ತಾತ್ಕಾಲಿಕ ತಡೆದ ಆದೇಶದ ಹೊರತಾಗಿಯೂ ಕಂಚಿನಡ್ಕ ಟೋಲ್ ವಿರೋಧಿಸಿ ಆಗಸ್ಟ್ 24ರ ಶನಿವಾರ ಪಡುಬಿದ್ರೆ ಸಮೀಪ ಕಂಚಿನಡ್ಕದಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬೃಹತ್ ಪ್ರತಿಭಟನೆ ನಡೆಯಲಿದೆ” ಎಂದು ಟೋಲ್ ಗೇಟ್ ಹೋರಾಟ ಸಮಿತಿಯ ಮುಖಂಡರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಕಾರ್ಕಳ – ಪಡುಬಿದ್ರೆ ಟೋಲ್ ಗೇಟ್‌ಗೆ ವಿರೋಧ: ಆ. 24ರಂದು ಬೃಹತ್ ಪ್ರತಿಭಟನೆ

“ರಾಜ್ಯ ಸರ್ಕಾರವು ತಾತ್ಕಾಲಿಕ ಆದೇಶ ನೀಡಿದೆಯಷ್ಟೇ. ಸುಂಕ ವಸೂಲಾತಿ ಕೇಂದ್ರದ ಪ್ರಸ್ತಾವನೆಯಿಂದ ಸರಕಾರ ಸಂಪೂರ್ಣವಾಗಿ ಹಿಂದೆ ಸರಿಯಬೇಕು. ಈ ರಸ್ತೆಯಲ್ಲಿ ಜನ ಸಾಮಾನ್ಯರಿಗೆ ಹೊರೆಯಾಗುವ ಟೋಲ್ ಗೇಟ್ ಪ್ರಸ್ತಾವನೆ ಶಾಶ್ವತವಾಗಿ ರದ್ದಾಗಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಇರಲಿದೆ. ನಾಳೆಯ ಪ್ರತಿಭಟನೆ ರದ್ದು ಮಾಡುವುದಿಲ್ಲ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಶಾಂತಿಯುತವಾಗಿ ನಡೆಯಲಿರುವ ಶನಿವಾರದ ಪ್ರತಿಭಟನೆಯಲ್ಲಿ ಭಾಗವಹಿಸಬೇಕು” ಎಂದು ಟೋಲ್ ಗೇಟ್ ಹೋರಾಟ ಸಮಿತಿಯ ಹೋರಾಟಗಾರ ಸರ್ವಜ್ಞ ತಂತ್ರಿ ಬೆಳ್ಮಣ್ ತಿಳಿಸಿದ್ದಾರೆ.

ಸುಹಾಸ್ ಹೆಗ್ಡೆ ನಂದಳಿಕೆ, ಕಂಚಿನಡ್ಕ ಟೋಲ್ ಗೇಟ್ ಹೋರಾಟ ಸಮಿತಿ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...