ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಸಂಬಂಧ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಜಿರೆಯಿಂದ ವಶಕ್ಕೆ ಪಡೆದು ಉಡುಪಿ ಜಿಲ್ಲೆಗೆ ಕರೆದುಕೊಂಡು ಹೋಗುತ್ತಿರುವಾಗ ಉಡುಪಿ ಎಡಿಷನ್ ಎಸ್ಪಿಯ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಿದ್ದಾರೆ.
ಇದನ್ನು ಓದಿದ್ದೀರಾ? ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೊಸ್ಮಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದುಕೊಂಡು ಹೋಗುತ್ತಿರುವ ವೇಳೆಗೆ ಆ.21 ರಂದು ಉಡುಪಿ ಜಿಲ್ಲೆಯ ಎಡಿಷನ್ ಎಸ್ಪಿ ಸುಧಾಕರ್ ಹೆಗ್ಡೆ ಕಾರನ್ನು ಬೆನ್ನಟ್ಟಿಕೊಂಡು ಬಂದು ಅಪಘಾತ ಮಾಡಿ ಕರ್ತವ್ಯಕ್ಕೆ ಅಡಿಪಡಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎಡಿಷನ್ ಎಸ್ಪಿ ಗನ್ ಮ್ಯಾನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಸೃಜನ್, ಹಿತೇಶ್, ಸುಹಾನ್ ಎಂಬವರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
