ಉಡುಪಿ | ರಾ.ಹೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

Date:

ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮಲ್ಪೆ ಭಾಗದ ಕಿ.ಮೀ. 85.200 ರಿಂದ 85.580 ರ ವರೆಗಿನ (ಆದಿ ಉಡುಪಿ ಭಾಗದ) ಚತುಷ್ಪಥದ ರಸ್ತೆಯ ಎರಡೂ ಬದಿಯಲ್ಲಿ ಏಕಕಾಲದಲ್ಲಿ ಕಾಂಕ್ರೀಟಿಕರಣ ಕಾಮಗಾರಿ
ಕೈಗೊಳ್ಳಲಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ರಸ್ತೆಯ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) & (5) ರನ್ವಯ ನವೆಂಬರ್ 10 ರಿಂದ 30 ರ ವರೆಗೆ ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಮಲ್ಪೆ ಭಾಗದ ಕಿ.ಮೀ. 85.200 ರಿಂದ 85.580 ರ ವರೆಗಿನ (ಆದಿ ಉಡುಪಿ ಭಾಗದ) ಚತುಷ್ಪಥ ರಸ್ತೆಯ ಎರಡೂ ಬದಿಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಿ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡಂತೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

- Advertisement -

ಮಲ್ಪೆಯಿಂದ ಮಂಗಳೂರು ಮತ್ತು ಕುಂದಾಪುರ ಕಡೆಗೆ ಹೋಗಲು ಭಾರೀ ವಾಹನಗಳು ಮಲ್ಪೆ-ಬಲರಾಮ ಸರ್ಕಲ್-ತೊಟ್ಟಂ-ಗುಜ್ಜರಬೆಟ್ಟು- ಹೂಡೆ-ನೇಜಾರ್-ಕಲ್ಯಾಣಪುರ ಮಾರ್ಗವಾಗಿ ಸಂತೆಕಟ್ಟೆ ತಲುಪಿ, ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಬೇಕು. ಮಲ್ಪೆಗೆ ಬರುವ ಭಾರಿ ವಾಹನಗಳು ಆಶೀರ್ವಾದ್ ಸರ್ಕಲ್-ಲಕ್ಷ್ಮೀ ನಗರ-ಕೊಡವೂರು ಮೂಲಕ ಮಲ್ಪೆ ಕಡೆಗೆ ಸಂಚರಿಸಬೇಕು. ಮಲ್ಪೆ ಕಡೆಗೆ ಹೋಗುವ ಮತ್ತು ಬರುವ ಲಘು ವಾಹನಗಳು ಕಲ್ಮಾಡಿ ಸರ್ಕಲ್‌ನಿಂದ ಅಂಬಲಪಾಡಿ ತಲುಪಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಂಚರಿಸಬೇಕು. ಕಲ್ಮಾಡಿಯಿಂದ-ಕಿದಿಯೂರು-ಕಡೇಕಾರು-ಕನ್ನರ್‌ಪಾಡಿ ರಾಷ್ಟ್ರೀಯ ಹೆದ್ದಾರಿ ಮೂಲಕ ಅಥವಾ ಉಡುಪಿ ಕಡೆಗೆ ಸಂಚರಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...


ಮಲ್ಪೆಯಿಂದ ಮಂಗಳೂರು ಕಡೆಗೆ ಹೋಗುವ ಲಘು ವಾಹನಗಳು ಪಡುಕೆರೆ ತೊಟ್ಟಂ ಮುಖಾಂತರ ಬಲಾಯಿಪಾದೆಗೆ ಬಂದು ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...