ಉಡುಪಿ | ಆಸ್ತಿ ತೆರಿಗೆ ಹಣ ದುರ್ಬಳಕೆ, ನಕಲಿ ಬ್ಯಾಂಕ್ ಸೀಲ್ ಬಳಸಿ ವಂಚನೆ; ಇಬ್ಬರ ಬಂಧನ

Date:

ಉಡುಪಿ ನಗರಸಭೆಯಲ್ಲಿ ಆಸ್ತಿ ತೆರಿಗೆ ಪಾವತಿಯಲ್ಲಿ ಗಂಭೀರ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಯೂನಿಯನ್ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ಹಣ ವಂಚಿಸಿದ ಆರೋಪದಲ್ಲಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಉಡುಪಿ ನಗರಸಭೆಯ ಪೌರಾಯುಕ್ತ ಮಹಾಂತೇಶ್ ಅವರು ಫೆ.12 ರಂದು ಉಡುಪಿ ನಗರ ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರು ಆಧರಿಸಿ ಪ್ರಕರಣ ದಾಖಲಾಗಿದೆ. ನಗರಸಭೆ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಇ-ಸ್ವೀಕೃತಿ ಮೂಲಕ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್‌ನ ನಗರಸಭೆ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಫೆ.3 ರಂದು ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಗಳ ತುಲನೆಯಲ್ಲಿ, ಜ.28ರಂದು ಪಾವತಿಯಾದಂತೆ ಯೂನಿಯನ್ ಬ್ಯಾಂಕ್ ಸೀಲ್ ಹೊಂದಿದ್ದ ಚಲನ್ ಇದ್ದರೂ, ಬ್ಯಾಂಕ್ ದಾಖಲೆಗಳಲ್ಲಿ ಅದರ ನಮೂದು ಇಲ್ಲದಿರುವುದು ಪತ್ತೆಯಾಯಿತು. ಬಳಿಕ ಫೆ.4 ರಂದು ಮರು ಪರಿಶೀಲನೆ ನಡೆಸಿದಾಗ, ಫೆ.4ರ ದಿನಾಂಕದ ಸೀಲ್ ಹೊಂದಿದ್ದ ಚಲನ್‌ಗಳಲ್ಲಿ ಈಗಾಗಲೇ ಜ.28ರಂದು ಜನರೇಟ್ ಆಗಿದ್ದ ಒಂದೇ ಚಲನ್ ಸಂಖ್ಯೆಗಳು ಕಂಡುಬಂದವು.

ಒಂದೇ ಚಲನ್ ಸಂಖ್ಯೆಗೆ ಎರಡು ವಿಭಿನ್ನ ದಿನಾಂಕಗಳಲ್ಲಿ ಯೂನಿಯನ್ ಬ್ಯಾಂಕ್ ಸೀಲ್ ಇರುವ ಚಲನ್‌ಗಳು ಪತ್ತೆಯಾಗಿದ್ದು, ಬ್ಯಾಂಕ್ ಸೀಲ್ ನಕಲಿ ಮಾಡಿ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿರುವ ಶಂಕೆ ವ್ಯಕ್ತವಾಯಿತು. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ತನಿಖೆಯ ವೇಳೆ ಆರೋಪಿಗಳಾದ ಸುಪೇಶ್ (25) ಹಾಗೂ ಶಾಂತಾ (43) ಇವರನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ.

ಆರೋಪಿಗಳು ಪ್ರಕರಣದಲ್ಲಿ ಬಳಸಿದ ನಕಲಿ ಸೀಲ್ ಹಾಗೂ ಸಂಬಂಧಿತ ದಾಖಲೆಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣ ಪತ್ತೆ ಕಾರ್ಯವನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಐಪಿಎಸ್ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ ಹಾಗೂ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪ್ರಭಾರ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಅವರ ನೇತೃತ್ವದಲ್ಲಿ ನಡೆಸಲಾಯಿತು. ಪಿಎಸ್‌ಐ ಗಂಗಪ್ಪ ಎಸ್., ಸುರೇಂದ್ರ ಡಿ., ಸಂತೋಷ್ ರಾಥೋಡ್, ನೇತ್ರಾವತಿ, ಪವಿತ್ರ, ಸ್ಪೂರ್ತಿ ಹಾಗೂ ಠಾಣಾ ಸಿಬ್ಬಂದಿ ಸಹಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...