ಉಡುಪಿ | ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ

Date:

Advertisements

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ಮೂರ್ತಿಯ ಉಳಿದ ಭಾಗವನ್ನು ರಾತ್ರೋ ರಾತ್ರಿ ತೆರವುಗೊಳಿಸುವ ಕಾರ್ಯ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ತಿಳಿಸಿದರು.

ಉಡುಪಿ ಜಿಲ್ಲೆ ಕಾರ್ಕಳದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು, “ಕಂಚಿನ ನಕಲಿ ಮೂರ್ತಿಯ ಅರ್ಧ ಭಾಗವನ್ನು ಈ ಹಿಂದೆ ತೆರವುಗೊಳಿಸಿ ಪ್ಲಾಸ್ಟಿಕ್ ಹೊದಿಕೆಯಿಂದ ಮುಚ್ಚಲಾಗಿತ್ತು. ಮೂರ್ತಿಯ ಬಗೆಗಿನ ವಿವಾದದಿಂದಾಗಿ ರಾಜ್ಯ ಸರ್ಕಾರ ಸಿಒಡಿ ತನಿಖೆಗೆ ಆದೇಶಿಸಿತ್ತು. ತನಿಖೆಯ ಸಂದರ್ಭದಲ್ಲಿ ಮೂರ್ತಿಯನ್ನು ತೆರವುಗೊಳಿಸುವ ಮೂಲಕ ಉಳಿದ ಸಾಕ್ಷಿಯನ್ನು ಕೂಡಾ ನಾಶಪಡಿಸುವ ಹುನ್ನಾರವಾಗಿದೆ. ನಿರ್ಮಿತಿ ಕೇಂದ್ರದ ಮೂಲಕ ನ್ಯಾಯಾಲಯದ ನಿರ್ದೇಶನ ಇದೆ ಎಂಬ ಸುಳ್ಳು ಮಾಹಿತಿ ನೀಡಿ ಮೂರ್ತಿಯ ತೆರವು ಕಾರ್ಯಾಚರಣೆ ನಡೆಯುತ್ತಿದೆ” ಎಂದರು.

“ಜನವರಿ 9ರಂದು ಕ್ರಿಶ್ ವರ್ಲ್ಡ್‌ನ ಕಷ್ಣ ನಾಯಕ್ ರವರು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಪರಶುರಾಮ ಮೂರ್ತಿಯನ್ನು ತೆಗೆದುಕೊಂಡು ಹೋಗಲು ಪತ್ರವನ್ನು ಬರೆದಿರುತ್ತಾರೆ. ನಿರ್ಮಿತಿ ಕೇಂದ್ರದ ಅಧಿಕಾರಿಗಳು ಪರಶುರಾಮ ಮೂರ್ತಿಯನ್ನು ತೆಗೆದುಕೊಂಡು ಹೋಗಲು ನಮ್ಮ ಆಕ್ಷೆಪಣೆ ಇಲ್ಲವೆಂದು ಹೇಳಿರುತ್ತಾರೆ. ನಾಲ್ಕು ತಿಂಗಳ ಒಳಗಡೆ ಮೂರ್ತಿಯನ್ನು ಸ್ಥಾಪನೆ ಮಾಡದಿದ್ದರೆ ಕೃಷ್ಣ ನಾಯಕ್ ಅವರು ಹಣವನ್ನು ನಿರ್ಮಿತಿ ಕೇಂದ್ರಕ್ಕೆ ವಾಪಸ್‌ ನೀಡಬೇಕೆಂದು ಹೇಳಿರುತ್ತಾರೆ.
ಉಚ್ಛ ನ್ಯಾಯಾಲಯಕ್ಕೆ ಏಪ್ರಿಲ್ 10ರಂದು ರಿಟ್ ಪಿಟಿಷನ್ 11690 ಹಾಕಿ ಮೂರ್ತಿಯನ್ನು ತೆಗೆದುಕೊಂಡು ಹೋಗಲು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ದಾವೆ ಹಾಕಿರುತ್ತಾರೆ” ಎಂದರು.

Advertisements

“ಈ ಹಿಂದೆ ಉಡುಪಿ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ 2022 ಅಕ್ಟೋಬರ್ 9ರಂದು ಪರಶುರಾಮ ಮೂರ್ತಿಯ ಅರ್ಧ ಭಾಗವನ್ನು ತೆಗೆದುಕೊಂಡು ಹೋಗಿದ್ದು, ಈ ಬಾರಿ ಜಿಲ್ಲಾಧಿಕಾರಿಯವರನ್ನು ಹೊರತುಪಡಿಸಿ ನೇರವಾಗಿ ಉಚ್ಛ ನ್ಯಾಯಾಲಯಕ್ಕೆ ದುರುದ್ದೇಶದಿಂದ ಹೋಗಿರುತ್ತಾರೆ” ಎಂದು ಆರೋಪಿಸಿದರು.

“ಉಚ್ಛ ನ್ಯಾಯಾಲಯವು ನಿರ್ಮಿತಿ ಕೇಂದ್ರಕ್ಕೆ ಕೃಷ್ಣ ನಾಯಕ ಅವರ ಅರ್ಜಿಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಹೇಳಿತ್ತಾರೆಯೇ ಹೊರತು ಪರಶುರಾಮ ಮೂರ್ತಿಯನ್ನು ತೆಗೆದುಕೊಂಡು ಹೋಗಲು ನಿರ್ದೇಶನ ನೀಡಿರುವುದಿಲ್ಲ. ಕೃಷ್ಣ ನಾಯಕ್ ಅವರ ರಿಟ್ ಪಿಟಿಷನ್‌ಗೆ ಮೆಮೊ 2024ರ ಏಪ್ರಿಲ್‌ 24ರಂದು ಹಾಕಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ನನ್ನ ಅರ್ಜಿಯನ್ನು ಪರಿಗಣಿಸಿದ ಕಾರಣ ನನ್ನ ದಾವೆಯನ್ನು ವಿಲೇ ಮಾಡಬೇಕೆಂದು ಹೇಳಿರುತ್ತಾರೆ” ಎಂದು ಅವರು ತಿಳಿಸಿದರು.

“ಉಡುಪಿ ಜಿಲ್ಲಾಧಿಕಾರಿ ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಯವರು ಈ ಪ್ರಸ್ತಾವವನ್ನು ತಿರಸ್ಕರಿಸಿದ್ದರೂ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಅನುಮತಿ ನೀಡಿದ್ದು ಮಾತ್ರವಲ್ಲದೆ‌, ನಿರ್ಮಿತಿ ಕೇಂದ್ರಕ್ಕೆ ವಹಿಸಿಕೊಟ್ಟಿತು. ಈಗ ಮತ್ತೆ ಜಿಲ್ಲಾಧಿಕಾರಿಯವರು ಸಿಒಡಿ ತನಿಖೆ ನಡೆಯುತ್ತಿರುವ ಸಂದರ್ಭ ಮೂರ್ತಿ ತೆರವು ಕಾರ್ಯಾಚರಣೆ ಮತ್ತೆ ಸಾರ್ವಜನಿಕರಲ್ಲಿ ಸಂಶಯ ಮೂಡಿಸಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ : ಮಲ್ಲಿಕಾರ್ಜುನ ಖರ್ಗೆ

“ಪರಶುರಾಮ ನಕಲಿ ಮೂರ್ತಿಯ ಸತ್ಯಾಸತ್ಯತೆ ಪತ್ತೆಹಚ್ಚಿ ಪರಶುರಾಮ ಮೂರ್ತಿಯ ಹೆಸರಿನಲ್ಲಿ ಜನರನ್ನು ವಂಚಿಸಿದ ತಪ್ಪಿತಸ್ತರ ಮೇಲೆ ಕ್ರಮಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಹಾಗೂ ಉಸ್ತುವಾರಿ ಸಚಿವರು ಪೂರ್ಣ ಸಹಕಾರ ನೀಡಲಿದ್ದಾರೆ. ಅಲ್ಲದೆ ಅಸಲಿ ಮೂರ್ತಿ ಪ್ರತಿಷ್ಠಾಪನೆಗೆ ಜವಾಬ್ದಾರಿಯುತವಾಗಿ ಕ್ರಮಕೈಗೊಳ್ಳಲಿದೆ ಎಂದ ಅವರು ಜನರ ಮುಂದೆ ಭಿಕ್ಷೆ ಬೇಡಿಯಾದರೂ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸುತ್ತೇನೆ ಎನ್ನುವ ಶಾಸಕರು ಆ ಕಾರ್ಯವನ್ನು ನಡೆಸಲಿ ಅದಕ್ಕೂ ನಮ್ಮ ಪೂರ್ಣ ಸಹಕಾರ ನೀಡುತ್ತೇವೆ” ಎಂದರು.

ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಜಾರ್ಜ್ ಕ್ಯಾಸ್ಟೆಲಿನೊ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X