ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂಬ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿದೆ. ಪ್ರಕರಣದ ತನಿಖೆ ಆರಂಭಿಸಿರುವ ಸಿಐಡಿ ಪೊಲೀಸರು ಮಂಗಳವಾರ ಉಡುಪಿಗೆ ತೆರಳಿದ್ದಾರೆ.
ಸಿಐಡಿ ವಿಭಾಗದ ಡಿವೈಎಸ್‌ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ ಉಡುಪಿಗೆ ತೆರಳಿದೆ. ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿದ್ದು, ಎಸ್‌ಪಿ ಅಕ್ಷಯ್ ಹಾಕೇ ಮತ್ತು ಪ್ರಕರಣದ ಹಿಂದಿನ ತನಿಖಾಧಿಕಾರಿ ಬೆಳ್ಳಿಯಪ್ಪ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿ ಮತ್ತು ದಾಖಲೆಗಳನ್ನು ಸಿಐಡಿ ಪೊಲೀಸರು ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.