ಉಡುಪಿ | ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ನಿಂದ ಕಡಲ ಭದ್ರತೆ ಬಗ್ಗೆ ಜಾಗೃತಿ: ಸಂದೀಪ್ ಚಕ್ರವರ್ತಿ

Date:

“ಸುರಕ್ಷಿತ ತಟ್, ಸಮೃದ್ಧ ಭಾರತ್” (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ವಿಷಯದ ಮೇಲೆ ಕೇಂದ್ರಿತ ಸಿಐಎಸ್‌ಎಫ್-ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ 2026 ಅನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು ಆಯೋಜಿಸಿದ್ದು ಇದು ಬೃಹತ್ ರಾಷ್ಟ್ರೀಯ ಜಾಗೃತಿ ಅಭಿಯಾನವಾಗಿದೆ. ಅಭಿಯಾನ ಜನವರಿ 28 ರಂದು ಪ್ರಾರಂಭವಾಗಿ ಫೆಬ್ರವರಿ 22 ರವರೆಗೆ ನಡೆಯಲಿದ್ದು 6,553 ಕಿ.ಮೀ.ಗೂ ಹೆಚ್ಚು ದೂರದ ಈ ಸೈಕಲ್ ಯಾತ್ರೆ, ಕರಾವಳಿ ತೀರದ ಭದ್ರತೆ, ದೇಶಭಕ್ತಿ ಮತ್ತು “ವಂದೇ ಮಾತರಂ” ಗೀತೆಯ 150 ನೇ ವರ್ಷವನ್ನು ಆಚರಿಸಲು ಗುಜರಾತ್‌ನ ಲಖ್‌ಪತ್‌ನಿಂದ ಪಶ್ಚಿಮ ಬಂಗಾಳದ ಬಕ್ಖಾಲಿಯವರೆಗೆ ಸಾಗಲಿದೆ ಎಂದು ಸಿಐಎಸ್‌ಎಫ್ ಉಪ ಕಮಾಂಡೆAಟ್ ಸಂದೀಪ್ ಚಕ್ರವರ್ತಿ ಹೇಳಿದರು.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಬ್ರಹ್ಮಾವರದ ಆಶ್ರಯ ಹೋಟೆಲ್‌ನ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
1009654832

25 ದಿನಗಳ ಸೈಕ್ಲೋಥಾನ್‌ನಲ್ಲಿ ಒಟ್ಟು 130 ಸೈಕ್ಲಿಸ್ಟ್ಗಳು ಭಾಗವಹಿಸಿದ್ದು ಇದರಲ್ಲಿ 65 ಜನ ಮಹಿಳೆಯರು ಭಾಗವಹಿಸಿ ಕರಾವಳಿ ತೀರಗಳ ರಕ್ಷಣೆಯ ಜೊತೆಗೆ ಮಹಿಳಾ ಸಶಕ್ತೀಕರಣದ ಸಂದೇಶವನ್ನು ನೀಡುತ್ತಿದ್ದಾರೆ. ಮುಖ್ಯವಾಗಿ ದೇಶದ ಕರಾವಳಿ ತೀರದ ಜನರ ಜೊತೆ ಬೆರೆತು ಅವರ ಆಚಾರ ವಿಚಾರಗಳನ್ನು ಅರಿಯುವ ಜೊತೆಗೆ ಅವರಿಗೆ ಕಡಲ ಭದ್ರತೆಯ ಬಗ್ಗೆ ಮಾಹಿತಿ ನೀಡಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಇದುವರೆಗೆ ಭೇಟಿ ನೀಡಿದ ಕಡೆಗಳಲ್ಲಿ ಜನರಿಂದ ಅತ್ಯುತ್ತಮ ಸ್ಪಂದನೆ ದೊರೆತಿದ್ದು ಜಾಗೃತಿ ಕಾರ್ಯವು ಯಶಸ್ಸನ್ನು ಕಾಣುತ್ತಿದೆ. ಕಾರ್ಯಕ್ರಮವು ಕೇರಳದ ಕೊಚ್ಚಿಯಲ್ಲಿ ಸಂಪನ್ನವಾಗಲಿದೆ ಎಂದರು.

ರ‍್ಯಾಲಿಯು ಇಂದು ಬೆಳಗ್ಗೆ ತ್ರಾಸಿ ಪ್ರವೇಶಿಸಿದ್ದು, ಸ್ಥಳೀಯ ಸಂಪ್ರದಾಯದೊಂದಗೆ ಸ್ವಾಗತಿಸಲಾಯಿತು. ಅಲ್ಲಿನ ವಿದ್ಯಾರ್ಥಿ ಹಾಗೂ ಸಮುದಾಯದ ಜನರೊಂದಿಗೆ ಸಂವಾದ ನಡೆಸಿ, ಕುಂದಾಪುರ ಮೂಲಕ ಬ್ರಹ್ಮಾವರ ತಲುಪಿತು. ಆ ಬಳಿಕ ಉಡುಪಿ ಮಾರ್ಗವಾಗಿ ಕಾಪುವಿನ ಸರಕಾರಿ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ ನಡೆಸಿ ಹೆಜಮಾಡಿ ಮೂಲಕ ಮಂಗಳೂರಿಗೆ ತಲುಪಿತು.

1009655782

ಕಾರ್ಯಕ್ರಮದಲ್ಲಿ ಸಿಐಎಸ್‌ಎಫ್ ಸಹಾಯಕ ಕಮಾಂಡೆAಟ್ ದುರ್ಗೇಶ್ ಕಲಾಲ್, ಸಿಎಂಓ ಭುವನೇಶ್ ಜಾಧವ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಬಿಜು ನಾಯ್ಕ, ಉಪಾಧ್ಯಕ್ಷ ಸುದೇಶ್ ಹೆಗ್ಡೆ, ಕಾರ್ಯದರ್ಶಿ ಗ್ರೆಗೋರಿ ಡಿಸೋಜ, ಉದ್ಯಮಿ ರಾಜಾರಾಮ್ ಶೆಟ್ಟಿ ಉಪಸ್ಥಿತರಿದ್ದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...