ಉಡುಪಿ | ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ: ಇಬ್ಬರ ಬಂಧನ

Date:

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷವುಣಿಸಿದ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಅಜೆಕಾರು ಮರ್ಣೆ ಗ್ರಾಮದ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಕೊಲೆಗೀಡಾದವರನ್ನು ಬಾಲಕೃಷ್ಣ(44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ಹಿರ್ಗಾನದ ದಿಲೀಪ್ ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಡೆದಿದ್ದೇನು?

ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಾರ್ಕಳ ರೋಟರಿ, ಮಣಿಪಾಲ ಕೆಎಂಸಿ, ಮಂಗಳೂರಿನ ವೆನ್ಲಾಕ್, ಬೆಂಗಳೂರಿನ ನಿಮ್ಹಾನ್ಸ್, ವಿಕ್ಟೋರಿಯಾ ಹಾಗೂ ಮಂಗಳೂರಿನ ಬೇರೆ ಬೇರೆ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗಿತ್ತು. ಆದರೆ, ಅ.20 ರಂದು ಬಾಲಕೃಷ್ಣ ಮನೆಯಲ್ಲಿ ಸಾವನ್ನಪ್ಪಿದ್ದರು.

WhatsApp Image 2024 10 25 at 12.44.33 PM
ಪತಿ ಬಾಲಕೃಷ್ಣ ಜೊತೆಗೆ ಆರೋಪಿ ಪತ್ನಿ ಪ್ರತಿಮಾ

ಸಾವಿನ ಬಗ್ಗೆ ಪ್ರತಿಮಾಳ ಸಹೋದರ ಸಂದೀಪ್ ಸಂಶಯ ವ್ಯಕ್ತಪಡಿಸಿದ್ದರು. ಆ ಬಳಿಕ ಮೃತಪಟ್ಟ ಬಾಲಕೃಷ್ಣ ಅವರ ಅಣ್ಣ ರಾಮಕೃಷ್ಣ (42) ಅವರಿಗೆ ಮಾಹಿತಿ ನೀಡಿ, ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್‌ ಮೇಲೆ ಸಂಶಯ ವ್ಯಕ್ತವಾಗಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಇದನ್ನು ಓದಿದ್ದೀರಾ? ಕೊಪ್ಪಳ | ಮರಕುಂಬಿ ಪ್ರಕರಣ; ಜೀವಾವಧಿ ಶಿಕ್ಷೆ ಪ್ರಕಟಗೊಂಡ ಬೆನ್ನಲ್ಲೇ ಓರ್ವ ಅಪರಾಧಿ ಸಾವು

ಪೊಲೀಸರ ವಿಚಾರಣೆಯ ವೇಳೆ, ಅಕ್ಟೋಬರ್ 20ರಂದು ಬೆಳಗಿನ ಜಾವ 01:30 ಗಂಟೆಗೆ ದಿಲೀಪ್ ನಮ್ಮ ಮನೆಗೆ ಬಂದಿದ್ದು, ನಾವಿಬ್ಬರೂ ಸೇರಿ ಅಲ್ಲಿಯೆ ಇದ್ದ ಬೆಡ್‌ಶೀಟ್‌ ಅನ್ನು ಬಾಲಕೃಷ್ಣರ ಮುಖಕ್ಕೆ ಒತ್ತಿ ಹಿಡಿದು ಅವರನ್ನು ಕೊಲೆ ಮಾಡಿರುತ್ತೇವೆ” ಎಂದು ತಪ್ಪೊಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

IMG 20241025 WA0489
ಆರೋಪಿ ದಿಲೀಪ್

ಊಟದಲ್ಲಿ ವಿಷ ಬೆರೆಸಿದ್ದ ಪತ್ನಿ ಪ್ರತಿಮಾ?

ಬಾಲಕೃಷ್ಣರ ಸಾವಿನ ಬಳಿಕ ಪತ್ನಿ ಪ್ರತಿಮಾಳ ಚಲನವಲನ ಬಗ್ಗೆ ಆಕೆಯ ಸಹೋದರ ಸಂದೀಪ್ ಅನುಮಾನಗೊಂಡಿದ್ದ. ಬಳಿಕ ಬಾಲಕೃಷ್ಣರ ಸಾವಿನ ಬಗ್ಗೆ ಆಕೆಯನ್ನು ಪ್ರಶ್ನಿಸಿದ್ದಾನೆ. ಪ್ರತಿಮಾ ತನ್ನ ಸಹೋದರನ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...