ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

Date:

Advertisements

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ ರಕ್ಷಕ ಸೇರಿದಂತೆ ವಿವಿಧ ರಕ್ಷಣಾ ಇಲಾಖೆಯಲ್ಲಿನ ಸಿಬ್ಬಂದಿಗಳು ತಾವು ಧರಿಸುವ ಸಮವಸ್ತ್ರಗಳಿಗೆ ಸಮಾಜದಲ್ಲಿ ಗೌರವ ತರುವ ಬದ್ಧತೆಯನ್ನು ಇರಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ ಅರುಣ ಕೆ ಹೇಳಿದರು.

ಉಡುಪಿ ಜಿಲ್ಲಾ ಗೃಹ ರಕ್ಷಕ ದಳ ಕಚೇರಿಯಲ್ಲಿ ಶುಕ್ರವಾರ ನಡೆದ ವಾರ್ಷಿಕ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ತರಬೇತಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಗೃಹ ರಕ್ಷಕ ದಳ ಸಮಾದೇಷ್ಟರಾದ ಎಸ್ ಟಿ ಸಿದ್ದಲಿಂಗಪ್ಪ ಅವರು ಮಾತನಾಡಿ, “ಇಲಾಖೆಯಲ್ಲಿ ನೀಡುವ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅಗತ್ಯ ತರಬೇತಿ ಪಡೆದುಕೊಳ್ಳಲು ಗೃಹ ರಕ್ಷಕರು ಹಾಗೂ ಗೃಹ ರಕ್ಷಕಿಯರು ಉತ್ಸುಕರಾಗಬೇಕು. ಜಿಲ್ಲಾ ಕಚೇರಿ ಹಾಗೂ ಜಿಲ್ಲೆಯಲ್ಲಿ ಗೃಹ ರಕ್ಷಕ ಇಲಾಖೆಗೆ ಕಾಯಕಲ್ಪ ನೀಡುವ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ರಾಜ್ಯದ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳಲ್ಲಿ ಓರ್ವರಾಗಿರುವ ಎಸ್ ಪಿ ಡಾ ಅರುಣ ಕೆ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿರುವುದು ಶಾಶ್ವತವಾಗಿ ತರಬೇತಿಗಳ ನೆನಪಿನಲ್ಲಿ ಉಳಿಯುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

ಜಿಲ್ಲಾ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ ಸಿ ಹಾಗೂ ಜಿಲ್ಲಾ ಸಿವಿಲ್ ಡಿಫೆನ್ಸ್ ಇಲಾಖೆಯ ಕಮಾಂಡಿಂಗ್ ಅಧಿಕಾರಿ ಡಾ ವಿಜೇಂದ್ರ ರಾವ್ ಮಾತನಾಡಿದರು.

ಜಿಲ್ಲಾ ತರಬೇತು ಅಧಿಕಾರಿ ಚಂದ್ರಕಾಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ರಹ್ಮಾವರ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ನಿರೂಪಿಸಿದರು, ಬೈಂದೂರು ಘಟಕಾಧಿಕಾರಿ ರಾಘವೇಂದ್ರ ಎನ್ ವಂದಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X