ಉಡುಪಿ | ನಾಳೆ ಡಿ.6, ವಿಶ್ವ ಏಡ್ಸ್ ದಿನ – ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ

Date:

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ವಿದ್ಯಾರತ್ನ ಸ್ಕೂಲ್, ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್, ಗಾರ್ಡ್ ಸಂಸ್ಥೆ, ದೀಪ ಜ್ಯೋತಿ ನೆಟ್‌ವರ್ಕ್, ಆಸರೆ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಕ್ಲಬ್ ಉಡುಪಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಉಡುಪಿ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಪ್ರಗತಿಸೌಧ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ –ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಕಾರ್ಯಕ್ರಮವು ಡಿಸೆಂಬರ್ 6 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬಲಪಾಡಿ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಸಭಾಂಗಣ – ಪ್ರಗತಿಸೌಧ ಇಲ್ಲಿ ನಡೆಯಲಿದೆ.

- Advertisement -

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಜಿ ಹುಬ್ಬಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಎಸ್.ಕೆ.ಆರ್.ಡಿ.ಪಿ ಕರಾವಳಿ ಪ್ರಾದೇಶಿಕ ವಿಭಾಗದ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷö್ಯ ಅಧ್ಯಕ್ಷೆ ತಾರಾ ಆಚಾರ್ಯ, ಉಡುಪಿ ದೀಪಜ್ಯೋತಿ ನೆಟ್‌ವರ್ಕ್ ಅಧ್ಯಕ್ಷ ಸಂತೋಷ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಕಾರ್ಯಕ್ರಮದ ಅಂಗವಾಗಿ ಬೋರ್ಡ್ ಹೈಸ್ಕೂಲ್ ಆವರಣದಿಂದ ಕೆ.ಎಂ.ಮಾರ್ಗವಾಗಿ ಅಂಬಲಪಾಡಿಯ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಸಭಾಂಗಣದವರೆಗೆ ನಡೆಯುವ ಜಾಥಾ ಕಾರ್ಯಕ್ರಮಕ್ಕೆ ಅಂದು ಬೆಳಗ್ಗೆ 9 ಗಂಟೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ ಚಾಲನೆ ನೀಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಾನಪದ ನೃತ್ಯ, ನಾಟಕ ಸ್ಪರ್ಧೆಯಲ್ಲಿ ಯರಗೋಳ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

ತಾಲೂಕು ಮಟ್ಟದ ಜಾನಪದ ನೃತ್ಯ ಮತ್ತು ನಾಟಕ ಸ್ಪರ್ಧೆಗಳಲ್ಲಿ ಯರಗೋಳ ಸರ್ಕಾರಿ...

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....