ಉಡುಪಿ | ವಲಯ ಮಟ್ಟದ ವಿಶ್ವ ವಿಶೇಷ ಚೇತನರ ದಿನಾಚರಣೆ

Date:

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ವಲಯ ಮಟ್ಟದ ವಿಶ್ವ ವಿಶೇಷ ಚೇತನದ ದಿನಾಚರಣೆಯನ್ನು ಸಮನ್ವಯ ಶಿಕ್ಷಣದ ಅಂಗವಾದ ಎಸ್ ಆರ್ ಪಿ ಕೇಂದ್ರದಲ್ಲಿ ನಡೆಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಯವರಾದ ಡಾ. ಎಲ್ಲಮ್ಮ ರವರು ವಿಶ್ವ ವಿಶೇಷ ಚೇ ತನರ ದಿನಾಚರಣೆಯ ಅಂಗವಾಗಿ ವಿಶೇಷ ಚೇತನರಲ್ಲಿ ಸ್ವಾವಲಂಬನೆ ಮತ್ತು ಯೋಗ ಕ್ಷೇಮ ಹೆಚ್ಚಿಸಿ ಅವರನ್ನು ಶೈಕ್ಷಣಿಕ, ಸಾಮಾಜಿಕ,ಆರ್ಥಿಕ,ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರದ ಮುಖ್ಯ ವಾಹಿನಿಗಳಲ್ಲಿ ತರುವುದು ಹಾಗೂ ಸಮಾಜದ ಇತರ ವ್ಯಕ್ತಿಗಳಂತೆ ಇವರಿಗೆ ಸಮಾನವಾದ ಅವಕಾಶಗಳನ್ನು ಹಾಗೂ ಅವರ ಸಾಧನೆಗಳನ್ನು ಜಾಗತಿಕವಾಗಿ ಆಚರಿಸಬೇಕೆಂಬುದರ ಬಗ್ಗೆ ಹಾಗೂ ಈ ದಿನಾಚರಣೆಯ ಉದ್ದೇಶ ಮಹತ್ವ ದ ಬಗ್ಗೆ ಉತ್ತಮ ಅರಿವು ಮೂಡಿಸಿದರು.

- Advertisement -

ಈ ಕಾರ್ಯಕ್ರಮದಲ್ಲಿ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಶ್ರೀ ರಾಜೇಶ್ ಕರ್ಕೆರ,ರೋಟರಿ ಕ್ಲಬ್ ಅಂಬಲಪಾಡಿ, ಗಂಗೆ ಶಾನ್ ಬಾಗ್, ಶ್ರೀ ನಾಗರಾಜ್, ಜಯಶೀಲ ಬಿ ರೋಟೆ ಹಾಗು ಬಿಐಇಆರ್ ಟಿಯವರಾದ ಆಶಾ, ಗೀತಾ ಎಸ್ ಹೆಗಡೆ ಹಾಗೂ ದೀಕ್ಷಿತ ಫಿಜಿಯೋಥೆರಪಿಸ್ಟ್ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...
ದ್ಗಯಸಯ

ಈ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ವಿಶೇಷ ಚೇತನರ ಕ್ರೀಡಾಕೂಟಕ್ಕೆ ಆಯ್ಕೆಯಾದ ನಾಲ್ಕು ವಿಶೇಷ ಚೇತನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗು ವಿಶೇಷ ಚೇತನ ಮಕ್ಕಳು ಹಾಗೂ ಪೋಷಕರಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಹಾಗೂ ಪೋಷಕರಿಗೆ ಬಹುಮಾನದ ವ್ಯವಸ್ಥೆ ಹಾಗೂ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ನೀಡುವುದರ ಮೂಲಕ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, One good step ತಂಡ ಹಾಗೂ ರೋಟರಿ ಕ್ಲಬ್ ಅಂಬಲಪಾಡಿ,ಹಾಗೂ ಗಂಗೆ ಶಾನ್ ಬಾಗ್, ಚಂದ್ರಿಕಾರವರ ಅಮೂಲ್ಯ ಬೆಂಬಲ ಹಾಗೂ ಸಹಕಾರ ಕಾರ್ಯಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನೆರವೇರಲು ಸಹಕಾರಿಯಾಯಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...