ಉಡುಪಿ | ಯುವಪತ್ರಕರ್ತ ಸಂದೀಪ್ ಪೂಜಾರಿ ನಿಧನ

Date:

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಏಪ್ರಿಲ್‌ 20ರಂದು ಬೆಳಿಗ್ಗೆ ನಿಧನರಾದರು.

- Advertisement -

ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾರ್ಚ್‌ 29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿ(ಸ್ಪೈನಲ್ ಕಾಡ್)ಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾಪು ತಾಲೂಕಿನ ಶಿರ್ವ ನಿವಾಸಿಯಾಗಿರುವ ಇವರು, ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಬ್ಲಿಕ್ ಟಿವಿ, ಸ್ಪಂದನಾ ಸುದ್ದಿ ವಾಹಿನಿಯಲ್ಲಿ ಕ್ಯಾಮೆರಾಮ್ಯಾನ್, ಬಿ ಟಿವಿಯ ಕ್ಯಾಮೆರಾಮ್ಯಾನ್ ಹಾಗೂ ವರದಿಗಾರರಾಗಿ ಇವರು ಸೇವೆ ಸಲ್ಲಿಸಿದ್ದು, ಪ್ರಸ್ತುತ ಈಟಿವಿ ಭಾರತ್ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಲೈವ್ ವಾಹಿನಿಗಳಾದ ಸಿ4ಯು, ಪ್ರೈಮ್ ಕಾರ್ಲದಲ್ಲಿ ತಂತ್ರಜ್ಞರಾಗಿ ಇವರು ಕಾರ್ಯನಿರ್ವಹಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ನ್ಯಾಯಾಂಗ ನಿಂದನೆ; ಜಪ್ತಿಗೆ ಬಂದವರಿಗೆ ಕಾರು ಕೀ ಕೊಡದೆ ಸತಾಯಿಸಿದ ಡಿಸಿ ನಳೀನ್ ಅತುಲ್

ಇವರು ತಂದೆ ತಾಯಿ ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...