ಉಡುಪಿ | ಯುವತಿಗೆ ಕಿರುಕುಳ ನೀಡಿದವನಿಗೆ ಚಪ್ಪಲಿ ಏಟು

Date:

ತನ್ನನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಯುವತಿಯೊಬ್ಬಳು ಯುವಕನಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಜಿಲ್ಲೆಯ ಕುಂದಾಪುರದ ಒಕ್ವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಯನ್ನು 35 ವರ್ಷದ ನಜೀರ್ ಎಂದು ಗುರುತಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗಿದೆ.

ವಿಡಿಯೋದಲ್ಲಿ, ಯುವತಿಯೊಬ್ಬಳು ಆ ವ್ಯಕ್ತಿಗೆ ಚಪ್ಪಲಿಯಿಂದ ಹಲವು ಬಾರಿ ಥಳಿಸಿರುವುದು ಸೆರೆಯಾಗಿದೆ. ಅಲ್ಲದೆ, ಹಳದಿ ಟೀ ಶರ್ಟ್‌ನ ಇನ್ನೊಬ್ಬ ವ್ಯಕ್ತಿ ನಜೀರ್‌ನ ಕಾಲರ್‌ ಹಿಡಿದುಕೊಂಡಿದ್ದಾರೆ. ನಜೀರ್‌ಗೆ ಯುವತಿ ಚಪ್ಪಲಿಯಿಂದ ಹೊಡೆದಿದ್ದಾಳೆ. ತನ್ನನ್ನು ಬಿಡುವಂತೆ ನಜೀರ್ ತನ್ನ ಸುತ್ತ ನೆರೆದಿದ್ದ ಸ್ಥಳೀಯರಲ್ಲಿ ಮನವಿ ಮಾಡಿಕೊಂಡಿರುವುದು ಸೆರೆಯಾಗಿದೆ.

ವರದಿಯ ಪ್ರಕಾರ, ಹಾಸ್ಟೆಲ್‌ನಿಂದ ಯುವತಿ ಕಾಲೇಜಿಗೆ ಹೋಗುತ್ತಿದ್ದರು. ಈ ವೇಳೆ, ಆಕೆಯನ್ನು ನಜೀರ್‌ ಹಿಂಬಾಲಿಸಿಕೊಂಡು ಬಂದಿದ್ದಾನೆ. ಆತನ ಅಸಭ್ಯ ವರ್ತನೆಯಿಂದ ಯುವತಿ ಕಿರಿಕಿರಿಗೊಂಡಿದ್ದಾರೆ. ಸ್ಥಳೀಯರು ಜಮಾಯಿಸಿ ಆತನನ್ನು ಹಿಡಿದಿದ್ದಾರೆ. ಬಳಿಕ, ಆತನಿಗೆ ಯುವತಿ ಚಪ್ಪಲಿಯಿಂದ ಬಾರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...