ಉಡುಪಿ | ಯುವ ಜನತೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್

Date:

Advertisements

ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್‌ಎಸ್‌ಎಸ್‌ನಂತಹ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು.

ಅವರು ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ವತಿಯಿಂದ ಆಯೋಜಿಸಿದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳು ಪಠ್ಯದ ಚಟುವಟಿಕೆಗಳ ಜೊತೆಗೆ ಇತರೆ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರೊಂದಿಗೆ ಸಮುದಾಯದ ಸಮಸ್ಯೆಗಳನ್ನು ಅರಿತು ಸಹಾಯ ಮಾಡಲು ಮುಂದಾಗಬೇಕು. ಸಮಸ್ಯೆಗಳನ್ನು ಪರಿಹರಿಸುವುದರಿಂದ ಕೌಶಲ್ಯ ಹಾಗೂ ಜ್ಞಾನ ಬೆಳೆಯುತ್ತದೆ ಎಂದರು.

Advertisements

ಯುವಜನರು ಸ್ವಯಂ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂಬುದು ಮಹಾತ್ಮಾ ಗಾಂಧೀಜಿಯವರ ಆಶಯವಾಗಿತ್ತು. ಸರಕಾರ ಶಿಕ್ಷಣದೊಂದಿಗೆ ಸೇವಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಎನ್‌ಎಸ್‌ಎಸ್‌ ಶಿಬಿರಗಳನ್ನು ಆಯೋಜಿಸಿದೆ. ಇದು ವಿದ್ಯಾರ್ಥಿಗಳ ಜೀವನದಲ್ಲಿ ನಾಯಕತ್ವ, ಶಿಸ್ತಿನ ಜತೆಗೆ ಸಾರ್ವತ್ರಿಕ ಪ್ರಜ್ಞೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಮಾತನಾಡಿ, ಶಿಬಿರಗಳು ಅವಕಾಶಗಳ ವೇದಿಕೆಯಾಗಿದೆ. ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡ ವಿದ್ಯಾರ್ಥಿಗಳು ಸಮಾಜ ಸೇವಕರಾಗಿ ಪರಿವರ್ತನೆಗೊಂಡು ಉತ್ತಮ ಕಾರ್ಯಗಳನ್ನು ಮಾಡುವುದರೊಂದಿಗೆ ಸಮಾಜದ ಏಳಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಎಂದರು.

ಯುವ ಶಕ್ತಿ ಸಾಮರ್ಥ್ಯವನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳುವ ಮೂಲಕ ಯುವಜನರಲ್ಲಿ ಸಮುದಾಯ ಸೇವೆಯ ಉತ್ಸಾಹವನ್ನು ಮೂಡಿಸುವುದರೊಂದಿಗೆ ಅರ್ಥಪೂರ್ಣವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ಸೇವೆಯಲ್ಲಿ ಸ್ವಾರ್ಥವಿರಬಾರದು. ಸಮಯಪ್ರಜ್ಞೆಯನ್ನು ಮೈಗೂಡಿಸಿಕೊಂಡಾಗ ಯಶಸ್ಸು ನಮ್ಮದಾಗುತ್ತದೆ ಎಂದರು.

ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಮುಖ್ಯೋಪಾಧ್ಯಾಯಿನಿ ಸಂಧ್ಯಾ ಮಾತನಾಡಿ, ಎನ್.ಎಸ್.ಎಸ್ ಶಿಬಿರದಲ್ಲಿ ವಿದ್ಯಾರ್ಥಿನಿಯರು ಪಡೆದ ಅನುಭವಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಶಿಬಿರಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಹಾಗೂ ಉತ್ತಮವಾಗಿ ಶಿಬಿರದಲ್ಲಿ ಭಾಗವಹಿಸಿದವರಿಗೆ ಬಹುಮಾನವನ್ನು ನೀಡಲಾಯಿತು.

ಇದನ್ನು ಓದಿದ್ದೀರಾ? ದಾವಣಗೆರೆ | ವಿಚಿತ್ರ ಪ್ರಕರಣ: ತಾನೇ ಕಳವು ಮಾಡಿ ದೂರು ನೀಡಿದ್ದ ಯುವತಿ ಈಗ ಪೊಲೀಸರ ಅತಿಥಿ!

ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಖಜಾಂಜಿ ಶೇಖರ್ ಕೋಟ್ಯಾನ್, ಮಲ್ಪೆಯ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯ ಸದಾನಂದ ಸಾಲ್ಯಾನ್, ಖಜಾಂಜಿ ಚಂದ್ರಶೇಖರ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಯಾನಂದ, ಶಿಕ್ಷಣ ತಜ್ಞ ವಿಶ್ವನಾಥ ಬಾಯರಿ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವರ್ಗೀಸ್ ಪಿ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ) ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ, ಉಪನ್ಯಾಸಕರುಗಳು, ಶಿಬಿರದ ನಾಯಕಿ ಸಹನಾ ಶಿಬಿರಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಪನ್ಯಾಸಕಿ ಶುಭಗೀತಾ ಸ್ವಾಗತಿಸಿ, ಪ್ರಕಾಶ್ ಶೆಟ್ಟಿ ನಿರೂಪಿಸಿದರೆ, ಉಪನ್ಯಾಸಕಿ ಭವ್ಯಾ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X