ಉಡುಪಿ | ಕಾರ್ಕಳ ಪ್ರಜಾಸೇವಾ ಆಂದೋಲನ ಸಭೆಯಲ್ಲಿ 116ಕ್ಕೂ ಅಧಿಕ ಅರ್ಜಿ ಸ್ವೀಕಾರ

Date:

ಜನಸಾಮಾನ್ಯರ ಸಮಸ್ಯೆಗಳನ್ನು ಅವರ ಮನೆ ಬಾಗಿಲಿನಲ್ಲಿಯೇ ಆಲಿಸಿ, ನಿಗದಿತ ಕಾಲಮಿತಿಯೊಳಗೆ ತ್ವರಿತವಾಗಿ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

- Advertisement -

ಕಾರ್ಕಳದ ಮಂಜುನಾಥ್ ಪೈ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಜನಸಾಮಾನ್ಯರು ತಮ್ಮ ಸಣ್ಣಪುಟ್ಟ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ ಎಂದರು.

ಸಭೆಗಳಲ್ಲಿ ಸ್ವೀಕೃತವಾಗುವ ಎಲ್ಲ ಅಹವಾಲುಗಳನ್ನು ಐಪಿಜಿಆರ್‌ಎಸ್ ಪೋರ್ಟಲ್‌ನಲ್ಲಿ ದಾಖಲಿಸಲಾಗುತ್ತದೆ. ಇದರಿಂದ ಅರ್ಜಿಗಳ ಸ್ಥಿತಿಗತಿಯನ್ನು ಸುಲಭವಾಗಿ ಪರಿಶೀಲಿಸಲು ಸಾಧ್ಯವಾಗಲಿದೆ. ಸರ್ಕಾರದ ಸಂಪೂರ್ಣ ಆಡಳಿತ ವ್ಯವಸ್ಥೆ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ನಿಗದಿತ ಅವಧಿಯೊಳಗೆ ಪರಿಹಾರ ಒದಗಿಸಲಿದೆ ಎಂದು ತಿಳಿಸಿದರು.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಜನರಿಗೆ 9/11 ದಾಖಲೆ ಪಡೆಯಲು ತೊಂದರೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಕುರಿತು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಸಾಫ್ಟ್‌ವೇರ್ ಇಂಟಿಗ್ರೇಷನ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಕಾರ್ಯ ಪೂರ್ಣಗೊಂಡ ಬಳಿಕ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ಸಚಿವರು ಭರವಸೆ ನೀಡಿದರು.

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಕಳೆದ ಎರಡು ತಿಂಗಳಿನಿಂದ ಪ್ರತಿ ಶನಿವಾರ ಪ್ರಜಾಸೇವಾ ಆಂದೋಲನ ಸಭೆಗಳನ್ನು ನಡೆಸಲಾಗುತ್ತಿದೆ. ಆಡಳಿತ ವ್ಯವಸ್ಥೆ ಜನರ ಬಳಿಗೆ ತೆರಳಬೇಕು ಎಂಬ ಉದ್ದೇಶದಿಂದ ಎಲ್ಲ ಹಂತದ ಅಧಿಕಾರಿಗಳನ್ನು ಒಂದೇ ಕಡೆ ಸೇರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಜಿಲ್ಲೆಯಲ್ಲಿ 9/11 ಸಮಸ್ಯೆ ತೀವ್ರಗೊಂಡಿದ್ದು, ಸರ್ಕಾರದ ಆದೇಶವಿದ್ದರೂ ಸಂಬಂಧಪಟ್ಟ ಸುತ್ತೋಲೆಗಳು ಜಿಲ್ಲೆಗೆ ತಲುಪಿಲ್ಲ. ಆದೇಶಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳು ವಿಳಂಬವಾಗುತ್ತಿವೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು ಎಂದು ಸಚಿವರ ಗಮನ ಸೆಳೆದರು.

ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಕಾರ್ಕಳಕ್ಕೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಬೇಕು. ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿಯೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಅಗತ್ಯವಿದೆ. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸೆಪ್ಟೆಂಬರ್ ತಿಂಗಳಿನಿಂದ ಜಿಲ್ಲೆಯಲ್ಲಿ ನಿರಂತರವಾಗಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿಗೆ ತೆರಳಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಸೆಪ್ಟೆಂಬರ್‌ನಿಂದ ಈವರೆಗೆ ನಡೆದ ಸಭೆಗಳಲ್ಲಿ ಸುಮಾರು 3,308 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 1,898 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸಮಂಜಸ ಪರಿಹಾರ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸುಮಾರು 971 ಅರ್ಜಿಗಳನ್ನು ವಾಪಸ್ ಕಳುಹಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರ ಅಹವಾಲುಗಳಿಗೆ ಗುಣಾತ್ಮಕವಾಗಿ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಪ್ರಜಾಸೇವಾ ಆಂದೋಲನದ ಅಹವಾಲುಗಳನ್ನು ಸಕಾಲ ವ್ಯವಸ್ಥೆಯಡಿ ತರಲಾಗಿದ್ದು, ನಿಗದಿತ ಅವಧಿಯಲ್ಲಿ ಉತ್ತರ ನೀಡದ ಅಧಿಕಾರಿಗಳಿಗೆ ದಂಡ ವಿಧಿಸುವ ಸಾಧ್ಯತೆಯಿದೆ. ಹೀಗಾಗಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಆದ್ಯತೆ ನೀಡಿ ಸಕಾರಾತ್ಮಕವಾಗಿ ಹಾಗೂ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ 116ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಯಿತು.

ಸಭೆಯಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿಎಫ್‌ಒ ರುಥ್ರೇನ್ ಪಿ., ಕುದುರೆಮುಖ ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

ಮುಧೋಳ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಭೇಟಿ; ದಾಖಲೆಗಳ ಪರಿಶೀಲನೆ

​ಸಾರ್ವಜನಿಕರಿಂದ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಧಾರವಾಡದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹಿರೇಮಠ್ ನೇತೃತ್ವದ...