ಉಡುಪಿ | ಕುಂದಾಪುರ ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ; ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

Date:

ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಮತ್ತೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮರು ನಿಯೋಜಿಸಿರುವ ಆದೇಶವನ್ನು ಮರುಪರಿಶೀಲಿಸಿ, ಬೇರೆಡೆಗೆ ವರ್ಗಾ ಯಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಸೋಮವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.

- Advertisement -

ಡಾ.ಮಹೇಂದ್ರ ಕುಮಾರ್ ಶೆಟ್ಟಿ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ವರದಿ ಪ್ರಕಟಿಸಿದ ಕಾರಣಕ್ಕೆ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ತಾಲೂಕು ವರದಿಗಾರ ಹಾಗೂ ಸಂಘದ ಸದಸ್ಯ ಶ್ರೀಕಾಂತ ಹೆಮ್ಮಾಡಿ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಅಲ್ಲದೆ ಆರೋಗ್ಯ ಇಲಾಖೆಯು ವೈದ್ಯರನ್ನು ಅಮಾನತುಗೊಳಿಸಿ, ಲೀನ್ ಅಡಿಯಲ್ಲಿ ಗದಗ ಜಿಲ್ಲೆಗೆ ಶಸ್ತ್ರಚಿಕಿತ್ಸಕರ ಹುದ್ದೆಗೆ ಸ್ಥಳಾಂತರಿಸಿತ್ತು. ಆದರೆ, ಘಟನೆ ನಡೆದು ಕೇವಲ ಎರಡು ತಿಂಗಳ ಅವಧಿಯಲ್ಲೇ, ಹಲ್ಲೆಗೈದ ಅದೇ ವೈದ್ಯರನ್ನು ಮತ್ತೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಶಸ್ತ್ರಚಿಕಿತ್ಸಕರ ಹುದ್ದೆಗೆ ನಿಯೋಜಿಸಿರುವುದು ಖಂಡನೀಯ.

ಆದುದರಿಂದ ಡಾ. ಮಹೇಂದ್ರ ಕುಮಾರ್ ಶೆಟ್ಟಿಯನ್ನು ಮತ್ತೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ನಿಯೋಜಿಸಿರುವ ಆದೇಶವನ್ನು ತಕ್ಷಣ ಮರು ಪರಿಶೀಲಿಸಬೇಕು. ಪ್ರಕರಣದ ನ್ಯಾಯಾಂಗ ಪ್ರಕ್ರಿಯೆ ಹಾಗೂ ಪತ್ರಕರ್ತರ ಸುರಕ್ಷತೆಯ ದೃಷ್ಟಿಯಿಂದ ಅವರನ್ನು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಿಂದ ಬೇರೆ ಜಿಲ್ಲೆ ಅಥವಾ ತಾಲೂಕಿಗೆ ನಿಯೋಜಿಸು ವಂತೆ ಆರೋಗ್ಯ ಇಲಾಖೆಗೆ ಸೂಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿಯನ್ನು ಸ್ವೀಕರಿಸಿದ ಸಚಿವರು, ಸ್ಥಳದಲ್ಲಿದ್ದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ಸಮಿತಿ ಸದಸ್ಯರಾದ ಅಜಿತ್ ಆರಾಡಿ, ಪ್ರಮೋದ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಎಸ್ಪಿ ಕಚೇರಿ ಆವರಣದಲ್ಲಿ ಸಾವಿರ ಸಸಿ ನೆಡುವ ಗುರಿ; ಪರಿಸರ ಸಂರಕ್ಷಣೆಗೆ ಸಚಿವರ ಕರೆ

ಬಸವನಾಡಿನಲ್ಲಿ ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಿಸುವ ಸಂಕಲ್ಪಕ್ಕೆ ಪೊಲೀಸ್...

ಚಿಕ್ಕಮಗಳೂರು | ʼನಮಗೊಂದು ಸೂರು ಕೊಡಿ; ಇಲ್ಲವಾದ್ರೆ ಗುಡಿಸಲಿನಲ್ಲೇ ಪ್ರಾಣ ಬಿಡ್ತೇವೆʼ: ವಸತಿಹೀನರ ಅಳಲು

“ನಾವು ಎಕರೆಗಟ್ಟಲೆ ಭೂಮಿ ಕೇಳುತ್ತಿಲ್ಲ. ತಲೆಮೇಲೊಂದು ಪುಟ್ಟ ಸೂರು ಕೊಡಿ ಸಾಕು....

ಹಾವೇರಿ | ಶಿಕ್ಷಣಕ್ಕೆ ಆದ್ಯತೆ ನೀಡಿ, ಮಕ್ಕಳನ್ನು ಉನ್ನತ ಹುದ್ದೆಗಳಿಗೆ ತಯಾರು ಮಾಡಿ: ಸಚಿವ ರುದ್ರಪ್ಪ ಲಮಾಣಿ

"ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ...