ಉಡುಪಿ ಜಿಲ್ಲೆಗೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ : ವಿವೇಕಾನಂದ ಸಾಲಿನ್ಸ್

Date:

ಉಡುಪಿ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದ್ದು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರೂ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳ ನಡುವೆ ಸಮನ್ವಯದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ಕರ್ನಾಟಕದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಆರೋಪಿಸಿದ್ದಾರೆ.

- Advertisement -

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಉಡುಪಿ ಜಿಲ್ಲೆಗೆ ಅಗತ್ಯವಿರುವ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಮತ್ತೊಂದೆಡೆ, ಬಿಜೆಪಿ ಶಾಸಕರು ಜಿಲ್ಲೆಯ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ತಮ್ಮ ರಾಜಕೀಯ ಮತಬ್ಯಾಂಕ್‌ಗಾಗಿ ಹಿಂದುತ್ವದ ಅಜೆಂಡಾವನ್ನು ಮುಂದಿಟ್ಟುಕೊಂಡು ಕೋಮು ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜಿಲ್ಲೆಯಲ್ಲಿ ತಕ್ಷಣ ಪರಿಹರಿಸಬೇಕಾದ ಹಲವು ಪ್ರಮುಖ ಸಮಸ್ಯೆಗಳಿವೆ. ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವುದು, ನದಿಗಳ ಹೂಳೆತ್ತುವುದು, ಬಂದರುಗಳ ಆಧುನೀಕರಣ, ಮೀನುಗಾರ ಸಮುದಾಯಕ್ಕೆ ಸೂಕ್ತ ಬೆಂಬಲ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಪ್ರಮಾಣದ ಅನುದಾನ ಒದಗಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ವಿಧಾನಸಭೆಯಲ್ಲಿ ಜಿಲ್ಲೆಯ ನೈಜ ಸಮಸ್ಯೆಗಳ ಕುರಿತು ಪರಿಣಾಮಕಾರಿಯಾಗಿ ಧ್ವನಿ ಎತ್ತಬೇಕಾದ ಸ್ಥಳೀಯ ಬಿಜೆಪಿ ಶಾಸಕರು ಕೋಮು ವಿಚಾರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ವಿವೇಕಾನಂದ ಸಾಲಿನ್ಸ್ ಆರೋಪಿಸಿದ್ದಾರೆ.

ವಾರಾಹಿ ಯೋಜನೆ ಕಾಮಗಾರಿ ವೇಗಗೊಳಿಸಲು ಆಗ್ರಹ

ವಾರಾಹಿ ನೀರಾವರಿ ಯೋಜನೆಯ ಕಾಮಗಾರಿ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಯೋಜನೆಯ ಉದ್ದೇಶವೇ ವಿಳಂಬವಾಗುತ್ತಿದೆ. ಮತ್ತೊಂದೆಡೆ, ಮರಗಳ ಕಡಿತ ಸೇರಿದಂತೆ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ ಕಾಮಗಾರಿಗಳು ಯದ್ವಾತದ್ವಾ ನಡೆಯುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಬ್ರಹ್ಮಾವರ–ಹೆಬ್ರಿ ಹಾಗೂ ಉಡುಪಿ–ಬ್ರಹ್ಮಾವರ ನಡುವಿನ ರಸ್ತೆ ಅಗಲೀಕರಣ ಸೇರಿದಂತೆ ಕೆಲವು ಯೋಜನೆಗಳನ್ನು ವೈಜ್ಞಾನಿಕ ಅಧ್ಯಯನ ಮತ್ತು ಪರಿಸರದ ಪರಿಣಾಮಗಳನ್ನು ಸಮರ್ಪಕವಾಗಿ ಪರಿಗಣಿಸದೆ ಜಾರಿಗೊಳಿಸಲಾಗುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿಯಾಗುವ ಯೋಜನೆಗಳನ್ನು ಹೇರಬಾರದು ಎಂದು ಅವರು ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲೆಗೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ತಕ್ಷಣವೇ ಪರಿಸರ ಸ್ನೇಹಿ, ವೈಜ್ಞಾನಿಕ ಹಾಗೂ ಸಮಗ್ರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಬೇಕು. ಜಿಲ್ಲೆಯ ಮೂಲಭೂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಸ್ಥಳೀಯ ಬಿಜೆಪಿ ಶಾಸಕರು ಕೂಡ ಕೋಮು ಪ್ರಚೋದನಾತ್ಮಕ ಹೇಳಿಕೆಗಳಿಗೆ ಆದ್ಯತೆ ನೀಡುವ ಬದಲು ಸಂವಿಧಾನಾತ್ಮಕ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಜಿಲ್ಲೆಯ ಜನರ ಸಮಸ್ಯೆಗಳಿಗೆ ವಿಧಾನಸಭೆಯಲ್ಲಿ ಧ್ವನಿಯಾಗಬೇಕು ಎಂದು ವಿವೇಕಾನಂದ ಸಾಲಿನ್ಸ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...