ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಪೈಲೆಟ್ ಅಭಿಷೇಕ್ ಪೂಜಾರಿ ಮೃತ್ಯು

Date:

ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಶ್ರೀ ಅಭಿಷೇಕ್ ಪೂಜಾರಿ ಅವರು ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಮೃತಪಟ್ಟಿರುವ ಘಟನೆ ವರದಿಯಾಗಿದೆ.

- Advertisement -

ದಿನಾಂಕ ಆ.27ರಂದು ಅಭಿಷೇಕ್ ಪೂಜಾರಿ ಅವರು ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡ ಪರಿಣಾಮ ಮೃತಪಟ್ಟಿರುವ ಕುರಿತು ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಲಭ್ಯವಾದ ಮಾಹಿತಿಯಂತೆ, ಅಭಿಷೇಕ್ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಭಿಷೇಕ್ ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಆಗಾಗ್ಗೆ ಕುಟುಂಬದೊಂದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಆಗಮಿಸುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮುಂದಿನ ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ಕಾನೂನು ಕ್ರಮಗಳು ಮುಂದುವರಿದಿವೆ ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...