ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

Date:

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ ನೌಕರರನ್ನು ಕೆಲಸದಿಂದ ವಜಾಗೊಳಿಸುವ ಅಪಾಯ ತಂದೊಡ್ಡಿರುವ ರಾಜ್ಯ ಸರಕಾರದ ಕ್ಲಸ್ಟರ್ ಕಿಚನ್ ನಿರ್ಧಾರವನ್ನು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ಸಿಐಟಿಯು) ತೀವ್ರವಾಗಿ ಖಂಡಿಸಿದೆ.

- Advertisement -

ಸರ್ಕಾರದ ಈ ಜನವಿರೋಧಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿ ನ.25ರಿಂದ ರಾಜ್ಯಾದ್ಯಂತ ಬಿಸಿಯೂಟ ಬಂದ್ ಮಾಡಿ, ಬೆಂಗಳೂರಿನಲ್ಲಿ ನಡೆಯಲಿರುವ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ವಿಧಾನಸೌಧ ಚಲೋ ಹೋರಾಟ ದಲ್ಲಿ ಭಾಗವಹಿಸಲು ಸಂಘಟನೆ ನಿರ್ಧರಿಸಿದೆ. ಈ ಕುರಿತು ಉಡುಪಿಯಲ್ಲಿ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಅಶೋಕ್ ಕಾಮತ್ ಮತ್ತು ಜಿಲ್ಲಾ ಅಕ್ಷರ ದಾಸೋಹ ನಿರ್ದೇಶಕ ಗಣಪತಿ ಮತ್ತು ಕಾರ್ಕಳದಲ್ಲಿ ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ ರಾವ್ ಇಮತ್ತು ಕಾರ್ಕಳದ ಬ್ಲಾಕ್ ಶಿಕ್ಷಣಾಧಿಕಾರಿ ಎಚ್.ಗಿರಿಜಮ್ಮ ಅವರಿಗೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ರಾಜ್ಯದಲ್ಲಿ ಶಿಕ್ಷಣದ ಖಾಸಗೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಸರ್ಕಾರದ ಧೋರಣೆಯಿಂದ ಬಡ ಕುಟುಂಬ ಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಶಿಕ್ಷಣವು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದ್ದು, ಅದನ್ನು ಖಾಸಗಿಯವರ ನಿಯಂತ್ರಣಕ್ಕೆ ಒಪ್ಪಿಸುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು.

ಆದ್ದರಿಂದ ಕ್ಲಸ್ಟರ್ ಕಿಚನ್ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು. ಅಕ್ಷರ ದಾಸೋಹ ನೌಕರರ ಉದ್ಯೋಗವನ್ನು ರಕ್ಷಿಸಬೇಕು ಹಾಗೂ ಯೋಜನೆಯ ಜವಾಬ್ದಾರಿಯನ್ನು ಮುಖ್ಯ ಅಡುಗೆಯವರಿಗೆ ಮತ್ತು ಎಸ್‌ಡಿಎಂಸಿಗಳಿಗೆ ವಹಿಸಬೇಕು ಎಂದು ಸಂಘಟನೆ ಮನವಿಯಲ್ಲಿ ಆಗ್ರಹಿಸಿದೆ.

ಅನಿರ್ದಿಷ್ಟಾವಧಿ ಮುಷ್ಕರದ ಭಾಗವಾಗಿ ಉಡುಪಿ ಜಿಲ್ಲೆಯಲ್ಲಿಯೂ ಬಿಸಿಯೂಟ ಬಂದ್ ನಡೆಸಿ, ಜಿಲ್ಲೆಯ ನೂರಾರು ಅಕ್ಷರ ದಾಸೋಹ ನೌಕರರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಂದಾ, ಕುಂದಾಪುರ ತಾಲೂಕು ಅಧ್ಯಕ್ಷೆ ಉಷಾ, ಉಡುಪಿ ತಾಲೂಕು ಅಧ್ಯಕ್ಷೆ ರತ್ನಾ ಹಾಗೂ ಕಾರ್ಕಳ ತಾಲೂಕು ಅಧ್ಯಕ್ಷೆ ಜಯಶ್ರೀ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಶಿಲ್ಪಿ ಉಳ್ಳಾಲ ಶ್ರೀನಿವಾಸ ಮಲ್ಯ ಜನ್ಮ ದಿನಾಚರಣೆ

ಆಧುನಿಕ ಮಂಗಳೂರಿನ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶಿಲ್ಪಿ ದಿವಂಗತ ಉಳ್ಳಾಲ...

ಮಂಗಳೂರು | ಕನ್ನಡ-ಬ್ಯಾರಿ ನಿಘಂಟು: ಮುದ್ರಣ ಪೂರ್ವ ಪ್ರತಿ ಹಸ್ತಾಂತರ

ಕಳೆದ ಒಂದು ವರ್ಷದಿಂದ ಬ್ಯಾರಿ ಸಮುದಾಯದ ಸುಮಾರು 20ಕ್ಕೂ ಹೆಚ್ಚು ಬರಹಗಾರರ...

ಕನ್ನಡ ಭಾಷೆ, ಸಂಸ್ಕೃತಿ ಉಳಿಸುವುದು ಎಲ್ಲರ ಹೊಣೆ: ಎ.ಎಸ್. ಪೊನ್ನಣ್ಣ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ...

SIR | ಜ. 20ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ; ಆಕ್ಷೇಪಣಾ ಅರ್ಜಿ ಸಲ್ಲಿಕೆಗೆ ಡಿ. 31 ಕೊನೆಯ ದಿನ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2027ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ...