ಉಡುಪಿ | ಅ.11 ರಂದು ‘ಮಹಿಷ ಮಹೋತ್ಸವ’ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ : ಗಣೇಶ್ ನೆರ್ಗಿ

Date:

ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಹಾಗೂ ವಿವಿಧ ಸಹಭಾಗಿ ಸಂಘಟನೆಗಳ ಸಹಯೋಗದಲ್ಲಿ ನಾಲ್ಕನೇ ವರ್ಷದ ‘ಮಹಿಷ ಮಹೋತ್ಸವ–ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ’ ವನ್ನು ಅ.11ರಂದು ಉಡುಪಿಯಲ್ಲಿ ಆಯೋಜಿಸಲಾಗಿದೆ ಎಂದು ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ತಿಳಿಸಿದ್ದಾರೆ.

- Advertisement -

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಷ ಮಹೋತ್ಸವವನ್ನು ಯಾವುದೇ ಧರ್ಮ ಅಥವಾ ಸರ್ಕಾರದ ವಿರುದ್ಧ ಆಚರಿಸುತ್ತಿಲ್ಲ. ಪುರಾಣ, ಮೌಢ್ಯ ಹಾಗೂ ಅವೈಜ್ಞಾನಿಕ ಸಂಪ್ರದಾಯಗಳ ವಿರುದ್ಧ ನಾಡಿನ ಮೂಲ ನಿವಾಸಿಗಳು ಆಚರಿಸುತ್ತಿರುವ ಸಾಂಸ್ಕೃತಿಕ ಹಬ್ಬ ಇದಾಗಿದೆ. ಭಾರತದ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಆಶಯದಂತೆ ಉಡುಪಿಯಲ್ಲಿ ಮಹಿಷ ಮಹೋತ್ಸವ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಮಹಿಷನ ಕುರಿತು ಸ್ಥಾಪಿತ ಹಿತಾಸಕ್ತಿಗಳು ಹಲವು ಮಿಥ್ಯೆಗಳನ್ನು ಸೃಷ್ಟಿಸಿ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿವೆ. ಮಹಿಷ ಇತಿಹಾಸ ಪುರುಷನಾಗಿದ್ದು, ಅವರನ್ನು ಚಾಮುಂಡಿ ಮಿಥ್ಯೆಯೊಂದಿಗೆ ಬಿಂಬಿಸುವ ಪ್ರಯತ್ನಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ಅ.11ರಂದು ಬೆಳಗ್ಗೆ 10.30ಕ್ಕೆ ಮಹೋತ್ಸವ ನಡೆಯಲಿದೆ. ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಗಣೇಶ್ ನೆರ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ, ಬೆಂಗಳೂರಿನ ರೈತ ಕೂಲಿ ಸಂಗ್ರಾಮ ಸಮಿತಿ (ಆರ್‌ಸಿಎಸ್‌ಎಸ್) ರಾಜ್ಯಾಧ್ಯಕ್ಷ ಎಂ. ಶಿವಣ್ಣ ಕಂದೆಗಾಲ, ಬಹುಜನ ಚಿಂತಕ ನಾರಾಯಣ ಮಣೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದಸಂಸ ರಾಜ್ಯ ಸಂಚಾಲಕ ಡಾ. ಉದಯಕುಮಾರ್ ತಲ್ಲೂರು, ರಾಜ್ಯ ಸಂಘಟನಾ ಸಂಚಾಲಕ ಶೇಖರ ಹಾವಂಜೆ, ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಸತೀಶ್ ಕಂಚುಗೋಡು, ದಸಂಸ ಜಿಲ್ಲಾ ಸಂಚಾಲಕ ವಾಸುದೇವ ಮದ್ದೂರು, ಉಡುಪಿ ಜಿಲ್ಲಾ ಬೋವಿ ವಡ್ಡರ್ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಶಿವಕುಮಾರ್ ಪರ್ಕಳ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ದಲಿತ ದೌರ್ಜನ್ಯ ಜಾಗೃತಿ ಸಮಿತಿಯ ನಿರ್ದೇಶಕ ಯು. ಪರಮೇಶ್ವರ ಹಾಗೂ ಜಿಲ್ಲಾ ಕಾಂಗ್ರೆಸ್‌ನ ನೂತನ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲು ಅವರನ್ನು ಸನ್ಮಾನಿಸಲಾಗುವುದು ಎಂದು ಗಣೇಶ್ ನೆರ್ಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಸಿ-ಎಸ್‌ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಯು. ಪರಮೇಶ್ವರ, ಚಿಂತಕ ಜಯನ್ ಮಲ್ಪೆ, ಬೋವಿ ವಡ್ಡರ್ ಸಂಘದ ಶಿವಕುಮಾರ್ ಪರ್ಕಳ, ಅಂಬೇಡ್ಕರ್ ಯುವಸೇನೆಯ ವಸಂತ ಪಾದೆಬೆಟ್ಟು, ರವಿರಾಜ್ ಲಕ್ಷ್ಮೀನಗರ, ಹರೀಶ್ ಸಾಲ್ಯಾನ್ ಹಾಗೂ ಸತೀಶ್ ಮಂಚಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...