ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

Date:

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಉಡುಪಿ ಸುಹಾಸಂ ಸಹಕಾರದೊಂದಿಗೆ ಜೀವಮಾನ ಸಾಧನೆಗಾಗಿ ನಾಡಿನ ಹಿರಿಯ ಸಾಧಕರಿಗೆ ನೀಡುವ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ರವಿವಾರ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

- Advertisement -

ಹಿರಿಯ ಲೇಖಕ ಡಾ.ಎನ್.ಟಿ.ಭಟ್, ಸಂಸ್ಕೃತ ಪ್ರಾಧ್ಯಾಪಕ, ವಿದ್ವಾಂಸ ಡಾ.ಎನ್.ಲಕ್ಷ್ಮೀನಾರಾಯಣ ಭಟ್ಟ ಹಾಗೂ ವಿಮರ್ಶಕ ಡಾ.ಅಜಕ್ಕಳ ಗಿರೀಶ ಭಟ್ಟ ಅವರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಎನ್.ಟಿ.ಭಟ್ ಬದಲು ಅವರ ಪುತ್ರ ಪ್ರಶಸ್ತಿಯನ್ನು ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಬಳಿಕ ಡಾ.ಎನ್.ಲಕ್ಷ್ಮೀನಾರಾಯಣ ಭಟ್ಟ ಮಾತನಾಡಿ, ಸಂಸ್ಕೃತ ಅಷ್ಟು ಸುಲಭದ ಭಾಷೆಯಲ್ಲ. ಕನ್ನಡದ ಮೂಲ ಪದಗಳಲ್ಲಿ ದೇಶ, ಕಾಲಕ್ಕೆ ಅನುಗುಣವಾಗಿ ವಿಕೃತಿ/ಬದಲಾವಣೆ ಆಗುತ್ತದೆ. ಆದರೆ ಸಂಸ್ಕೃತಕ್ಕೆ ವಿಕೃತಿ ಇಲ್ಲ. ಈ ಭಾಷೆಯಲ್ಲಿ ಒಂದು ತಪ್ಪು ಮಾಡಬಾರದು. ಸಂಸ್ಕೃತದಲ್ಲಿ ಒಂದು ಶಬ್ದವೂ ವಿಕಾರ ಹೊಂದಬಾರದು. ಸಂಸ್ಕೃತ ಯಾವ ದೇಶ, ಕಾಲದಲ್ಲಿ ಬದಲಾವಣೆ ಆಗುವುದಿಲ್ಲ ಎಂದರು.

ಅಧ್ಯಕ್ಷತೆಯನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಯು.ವಿಶ್ವನಾಥ ಶೆಣೈ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ, ಯಕ್ಷಗಾನ ಕಲಾರಂಗದ ಮುರಳಿ ಕಡೆಕಾರ್, ಸುರತ್ಕಲ್ ಎನ್‌ಐಟಿಕೆ ಮಾಜಿ ನಿರ್ದೇಶಕ ಡಾ.ಎಚ್. ಸುಧಾಕರ ನಾಯಕ್ ಮಾತನಾಡಿದರು. ವಿಶ್ರಾಂತ ಪ್ರಿನ್ಸಿಪಾಲ್ ಪ್ರೊ.ಎಂ.ಎಲ್. ಸಾಮಗ ಅಭಿನಂದನಾ ನುಡಿಗಳನ್ನಾಡಿದರು. ಉಡುಪಿ ತಾಲೂಕು ಸಾಹಿತ್ಯ ಪರಿಷತ್‌ನ ಅಧ್ಯಕ್ಷ ರವಿರಾಜ ಎಚ್.ಪಿ. ಉಪಸ್ಥಿತರಿದ್ದರು.

ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನದ ಪ್ರೊ.ಎ.ವಿ.ನಾವಡ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪೂರ್ಣಿಮಾ ಜರ್ನಾದನ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮನಗರ | ಡಾ. ಬಂಜಗೆರೆ ಜಯಪ್ರಕಾಶ್‌ ಅವರಿಗೆ ಪ್ರಶಸ್ತಿ ಗೌರವ: ‘ಜನಮುಖಿ ಜೆಪಿ’ ಕಾರ್ಯಕ್ರಮ ಸಫಲ

ಹಿರಿಯ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ (ಜೆ.ಪಿ) ಅವರಿಗೆ ಕರ್ನಾಟಕ ಸಾಹಿತ್ಯ...

ಚಿಕ್ಕಮಗಳೂರು | ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ ಬೈಕ್...

ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಪ್ರಧಾನ ಕಚೇರಿ ಉದ್ಘಾಟನೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅನೇಕ ಪ್ರತಿಷ್ಠಿತ ಹಣಕಾಸು ಸಂಸ್ಥೆಗಳ ತವರೂರಾಗಿದ್ದು,...

ಕುಡಚಿ–ಬಾಗಲಕೋಟೆ ರೈಲು ಮಾರ್ಗ ಕಾಮಗಾರಿ ವಿಳಂಬ: ಶೀಘ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯಲ್ಲಿ ರೈಲ್ವೆ ಇಲಾಖೆ ವಿಳಂಬ ಮಾಡುತ್ತಿರುವುದು ಹಾಗೂ...