ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಸತತ 20ನೇ ಜಿಲ್ಲಾ ಪ್ರಶಸ್ತಿ; ₹15.09 ಕೋಟಿ ನಿವ್ವಳ ಲಾಭ

Date:

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.13ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಅವರು ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು.

- Advertisement -

2025-26ನೇ ಸಾಲಿನ ಅಂತ್ಯಕ್ಕೆ ಸಂಘವು 22,869 ಸದಸ್ಯರು, ರೂ.4.89 ಕೋಟಿ ಪಾಲು ಬಂಡವಾಳ ಹಾಗೂ ರೂ.658.80 ಕೋಟಿ ಠೇವಣಿ ಹೊಂದಿದೆ. ಸಂಘದ ಹೊರಬಾಕಿ ಸಾಲದ ಮೊತ್ತ ರೂ.533.96 ಕೋಟಿಯಷ್ಟಿದ್ದು, ವರದಿ ಸಾಲಿನಲ್ಲಿ ಸುಮಾರು ರೂ.4,089 ಕೋಟಿ ವಾರ್ಷಿಕ ವಹಿವಾಟು ನಡೆಸಿದೆ. ಸದಸ್ಯರ ಸಹಕಾರದಿಂದ ಸಂಘವು ರೂ.15.09 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಸತತ ಎರಡು ಬಾರಿ ರಾಷ್ಟ್ರಮಟ್ಟದ ಪ್ರಶಸ್ತಿ ಹಾಗೂ ಒಂಬತ್ತು ಬಾರಿ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದಿರುವ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 2025-26ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಸಂಘವು ಸತತ 20ನೇ ಜಿಲ್ಲಾ ಪ್ರಶಸ್ತಿಗೆ ಪಾತ್ರವಾಗಿದೆ.

ಇದೇ ವೇಳೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಸಂಘಕ್ಕೆ ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯೊಂದಿಗೆ ನಗದು ಬಹುಮಾನ ಹಾಗೂ 5 ಗ್ರಾಂ ಬಂಗಾರದ ಪದಕವನ್ನು ಸಂಘ ಪಡೆದುಕೊಂಡಿದೆ. ಉಡುಪಿ ಜಿಲ್ಲೆಯ ಮೊದಲ ಕ್ರೆಡಿಟ್ ಸಹಕಾರ ಸಂಘವಾಗಿ ಈ ಪ್ರಶಸ್ತಿಗೆ ಪಾತ್ರವಾಗಿರುವುದು ಸಂಘದ ಮತ್ತೊಂದು ಹೆಗ್ಗಳಿಕೆಯಾಗಿದೆ.

ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಐವರು ಸಾಧಕರನ್ನು ಸನ್ಮಾನಿಸಲಾಯಿತು.

ಫ್ಯಾಷನ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಬಾಲಪ್ರತಿಭೆ ಸಚಿತ ರಾವ್, ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯ ರಾಷ್ಟ್ರೀಯ ವೇದಿಕೆಯಲ್ಲಿ ಉಡುಪಿಯನ್ನು ಪ್ರತಿನಿಧಿಸಿದ ಮೊದಲ ಯುವತಿ ಸ್ಫೂರ್ತಿ ಡಿ. ಶೆಟ್ಟಿ, ಸತತ 25 ಗಂಟೆಗಳ ಕಾಲ 200ಕ್ಕೂ ಅಧಿಕ ದಾಸರ ಪದಗಳನ್ನು ಪ್ರಸ್ತುತಪಡಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ವಿಶ್ವದಾಖಲೆ ಮಾಡಿದ ವಿದುಷಿ ಸಂಗೀತ ಬಾಲಚಂದ್ರ, ಸ್ವಾವಲಂಬನೆಯ ಮೂಲಕ ಆಹಾರ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಸುಗುಣಾ ಪೈ ಟಿ., ಹಾಗೂ ಪವರ್‌ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್‌ನಲ್ಲಿ ಜಿಲ್ಲಾ, ರಾಜ್ಯ, ವಿಶ್ವವಿದ್ಯಾಲಯ ಹಾಗೂ ದಕ್ಷಿಣ ಭಾರತ ಮಟ್ಟದಲ್ಲಿ ಸಾಧನೆ ಮಾಡಿರುವ ಆ್ಯನ್ನಿ ಲಿಸಾ ಅಮ್ಮನ್ನ ಅವರನ್ನು ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಸಂಘದ ಮಲ್ಪೆ ಶಾಖೆಯಲ್ಲಿ ಸುಮಾರು 11 ವರ್ಷಗಳ ಕಾಲ ದೈನಿಕ ಠೇವಣಿ ಸಂಗ್ರಾಹಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗೋವಿಂದಾಸ್ ಕೆ. ಸುವರ್ಣ ಹಾಗೂ ಅಂಬಾಗಿಲು ಶಾಖೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ವೆಂಕಟರಮಣ ಭಟ್ ಅವರನ್ನು ಬೀಳ್ಕೊಡಲಾಯಿತು.

WhatsApp Image 2026 09 13 at 11.04.50 PM

ಸಂಘವು ಡಿಜಿಟಲೀಕರಣಕ್ಕೆ ವಿಶೇಷ ಆದ್ಯತೆ ನೀಡುತ್ತಿದ್ದು, ಸುರಕ್ಷಿತ ಮೊಬೈಲ್ ಬ್ಯಾಂಕಿಂಗ್ ಸೇವೆ ಒದಗಿಸುವ ಉದ್ದೇಶದಿಂದ ಅಗತ್ಯ ಭದ್ರತಾ ಕ್ರಮಗಳೊಂದಿಗೆ ‘ಚೇತನಾ’ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಯಿತು. ದೈನಿಕ ಠೇವಣಿ ಸಂಗ್ರಹಣೆಯನ್ನೂ ಪಿಗ್ಮಿ ಮೊಬೈಲ್ ಆ್ಯಪ್ ಮೂಲಕ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಸಂಘವು ಕೇವಲ ಬ್ಯಾಂಕಿಂಗ್ ವ್ಯವಹಾರಕ್ಕೆ ಸೀಮಿತವಾಗದೆ ಸಮಾಜಮುಖಿ ಕಾರ್ಯಗಳಿಗೂ ಆದ್ಯತೆ ನೀಡುತ್ತಿದ್ದು, ವಾರ್ಷಿಕವಾಗಿ ಸುಮಾರು ರೂ.30 ಲಕ್ಷವನ್ನು ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸುತ್ತಿದೆ ಎಂದು ತಿಳಿಸಲಾಯಿತು.

ಸದಸ್ಯರ ಅನುಕೂಲಕ್ಕಾಗಿ QR ಕೋಡ್ ಸೌಲಭ್ಯ, ಉಚಿತ ಮಿಸ್ಡ್ ಕಾಲ್ ಸೇವೆ, ಉಚಿತ ಎಸ್‌ಎಂಎಸ್ ಸೇವೆ, ಸೇಫ್ ಲಾಕರ್, ಇ-ಸ್ಟಾಂಪಿಂಗ್, ಪಾನ್ ಕಾರ್ಡ್, ವೆಸ್ಟರ್ನ್ ಯೂನಿಯನ್ ಮನಿ ಟ್ರಾನ್ಸ್‌ಫರ್, ಲಂಬಾರ್ಡ್ ಆರೋಗ್ಯ ಕಾರ್ಡ್, ಮಣಿಪಾಲ ಆರೋಗ್ಯ ಕಾರ್ಡ್ ಸೇರಿದಂತೆ ವಿವಿಧ ಬ್ಯಾಂಕಿಂಗ್ ಹಾಗೂ ವಿಮಾ ಸೌಲಭ್ಯಗಳನ್ನು ಸಂಘ ಒದಗಿಸುತ್ತಿದೆ.

ಸಭೆಯಲ್ಲಿ ಸಂಘದ ಆಡಳಿತ ಮಂಡಳಿ ಸದಸ್ಯರಾದ ಸಂಜೀವ ಕಾಂಚನ್, ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ. ನಾಯಕ್, ಸದಾಶಿವ ನಾಯ್ಕ್, ಮನೋಹರ್ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ ಹಾಗೂ ಗಾಯತ್ರಿ ಎಸ್. ಭಟ್ ಉಪಸ್ಥಿತರಿದ್ದರು.

ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಸನ್ಮಾನ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...