ಉಡುಪಿ | 260ನೇ ದಿನಕ್ಕೆ ಕಾಲಿರಿಸಿದ ಧರಣಿ: ಬೈಂದೂರು ಆಡಳಿತ ಸೌಧಕ್ಕೆ ರೈತರಿಂದ ಮುತ್ತಿಗೆ

Date:

ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ಆಡಳಿತ ಸೌಧದ ಎದರು ನಡೆಯುತ್ತಿರುವ ಅನಿರ್ಧಿ ಷ್ಟಾವಧಿ ಧರಣಿ 260ನೇ ದಿನಕ್ಕೆ ಕಾಲಿರಿಸಿದ್ದು, ಬುಧವಾರ ಸಮಾಲೋಚನಾ ಸಭೆ ಹಾಗೂ ಮುಂದಿನ ಹೋರಾಟ ಕುರಿತು ಪೂರ್ವಭಾವಿ ಸಭೆ ನಡೆಸಿದ ರೈತರು ನೇರವಾಗಿ ಬೈಂದೂರು ತಾಲೂಕು ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ ಮಾತನಾಡಿ, ಹೋರಾಟಕ್ಕೆ ಒಂದು ವರ್ಷ ಸಮೀಪಿಸಿ ದರು ಕೂಡ ಸರಕಾರ ಇಲಾಖೆ ಜನಪ್ರತಿನಿಧಿಗಳು ರೈತರಿಗೆ ನ್ಯಾಯ ಕೊಟ್ಟಿಲ್ಲ. ರೈತರ ನೋವಿಗೆ ಬೆಲೆ ಇಲ್ಲದಂತೆ ವರ್ತಿಸುತಿದ್ದಾರೆ. ನಮ್ಮ ಹೋರಾಟ ನ್ಯಾಯ ಸಿಗುವವರಗೆ ಮುಂದುವರಿಯುತ್ತದೆ. ಒಂದು ತಿಂಗಳ ಒಳಗೆ ಗ್ರಾಮೀಣ ಭಾಗದ ಸಾವಿರಾರು ಜನರು ವಿಷದ ಬಾಟಲಿ ಹಿಡಿದು ಬರುತ್ತೇವೆ. ನ್ಯಾಯ ಪಡೆಯಲು ಪ್ರಾಣ ತ್ಯಾಗಕ್ಕೂ ಸಿದ್ದ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಹೋರಾಟದಲ್ಲಿ ರೈತರು ಆಕ್ರೋಶಭರಿತರಾಗಿ ಘೋಷಣೆ ಕೂಗಿದರು. ಬಳಿಕ ರೈತರು ವಿಕಾಸ ಸೌಧಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದರು. ಈ ಸಂದರ್ಭ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ದೀಪಕ್ ಕುಮಾರ ಶೆಟ್ಟಿ, ಎದೆನೋವು ಬಂದು ಅಸ್ವಸ್ಥರಾದರು. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಆತಂಕದ ಪರಿಸ್ಥಿತಿ ಉಂಟಾಯಿತು. ಬಳಿಕ ಆರೋಗ್ಯ ಇಲಾಖೆ ಸಿಬಂಧಿಗಳು ಸ್ಥಳಕ್ಕಾಗಮಿಸಿ ಚಿಕಿತ್ಸೆ ನೀಡಿದರು.

ವಾರದೊಳಗೆ ಮಾಹಿತಿ: ರೈತರ ಬೇಡಿಕೆ ಆಲಿಸಿದ ತಹಶೀಲ್ದಾರ ಡಿ.ಜಿ.ಮಹಾತ್ ಮಾತನಾಡಿ, ರೈತರ ಹೋರಾ ಟದ ಗಂಭೀರತೆಯ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಸರಕಾರದ ಗಮನಕ್ಕೆ ತಂದು ಒಂದು ವಾರದೊಳಗೆ ರೈತರಿಗೆ ಮಾಹಿತಿ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬೈಂದೂರು ರೈತ ಸಂಘದ ಕಛೇರಿಯಿಂದ ತಾಲೂಕು ಆಡಳಿತ ಸೌಧದ ಕಛೇರಿಯವರೆಗೆ ಜಾಥಾ ನಡೆಸಿ ಬಳಿಕ ತಹಶೀಲ್ದಾರ್‌ಗೆ ಮನವಿ ಮಾಡಲಾಯಿತು. ಹಿರಿಯರಾದ ಕೃಷ್ಣ ದೇವಾಡಿಗ, ದೇವಪ್ಪ ಮರಾಠಿ, ರೈತ ಹೋರಾಟಗಾರರಾದ ಅರುಣ್ ಕುಮಾರ್ ಶಿರೂರು, ಪದ್ಮಾಕ್ಷ ಗೋಳಿಬೇರು, ಥೋಮಸ್ ಮಾರ್ಸ್ಟ, ಬೈಂದೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ ಪೂಜಾರಿ, ಸುಧಾಕರ ಶೆಟ್ಟಿ ನೆಲ್ಯಾಡಿ, ಪೌಲೂಸ್ ಹಾಗೂ ನೂರಾರು ರೈತರು ಹಾಜರಿದ್ದರು.

ರೈತ ಮುಖಂಡ ವೀರಭದ್ರ ಗಾಣಿಗ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸುಭಾಷ್ ಗಂಗನಾಡು ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...

ವಿಜಯಪುರ | ಜನನ–ಮರಣ ನೋಂದಣಿಯಲ್ಲಿ ಲೋಪಕ್ಕೆ ಅವಕಾಶ ಬೇಡ: ಡಿಸಿ ಆನಂದ ಕೆ. ಸೂಚನೆ

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಘಟನೆ...

ಬಾಗಲಕೋಟೆ | ಕಲಾದಗಿಯಲ್ಲಿ 12 ಕ್ವಿಂಟಲ್ ಅಕ್ರಮ ಪಡಿತರ ಅಕ್ಕಿ ಜಪ್ತಿಗೆ ಸೂಚನೆ

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಕಲಾದಗಿ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ...

ಬಾಗಲಕೋಟೆ | ಭ್ರಷ್ಟಾಚಾರ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು: ನ್ಯಾಯಾಧೀಶ ಆರ್.ಕೆ.ಜಿ.ಎಂ. ಮಹಾಸ್ವಾಮೀಜಿ

ಭ್ರಷ್ಟಾಚಾರ ನಿರ್ಮೂಲನೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಸಮಾಜದ ಪ್ರತಿಯೊಬ್ಬರೂ ಭ್ರಷ್ಟಾಚಾರದ...