ಉಡುಪಿ | ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

Date:

ಬಾಳೆಬರೇ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿಯ ಇನ್ನುಳಿದ ಭಾಗದ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂ ಕುಸಿತ ಉಂಟಾಗಿ ಕಾಂಕ್ರೀಟ್ ರಸ್ತೆಯ ಮೇಲ್ಮೆöÊನಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡುಬಂದಿದ್ದು, ಸುರಕ್ಷತಾ ದೃಷ್ಟಿಯಿಂದ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್‌ಪಿನ್ ತಿರುವಿನಲ್ಲಿ ಪ್ರಸ್ತುತ ಕೈಗೊಳ್ಳುತ್ತಿರುವ ರಕ್ಷಣಾತ್ಮಕ ಕಾಮಗಾರಿಯ ಪೂರ್ಣಗೊಳ್ಳುವವರೆಗೆ, ಸಾರ್ವಜನಿಕ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮವಾಳಿಗಳು 1989 ರ ನಿಯಮ 221 (ಎ )(2) & (5) ರನ್ವಯ ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ನ ಮೂಲಕ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸದ್ರಿ ರಸ್ತೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಈ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅದೇಶಿಸಿ ಜಿಲ್ಲಾ ದಂಡಾಧಿಕಾರಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅದೇಶಿಸಿರುತ್ತಾರೆ.

- Advertisement -

ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ – 52 ರಸ್ತೆಯ ತೀರ್ಥಹಳ್ಳಿ ಯಿಂದ ಕುಂದಾಪುರ ಕಡೆ ಹೋಗುವ ( ತೀರ್ಥಹಳ್ಳಿ – ರಾವೆ – ಕಾನುಗೋಡು – ಮಾಸ್ತಿಕಟ್ಟೆ – ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರ ರಾ. ಹೆ -52) ವಾಹನಗಳು ತೀರ್ಥಹಳ್ಳಿ – ರಾವೆ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಈ ದಿನ ಕವಿತೆ | ಚರಿತ್ರೆ- ಚೀನಾದ ಕವಿ...

18 ನೇ ಶತಮಾನದಲ್ಲಿದ್ದ ಚೀನಾದ ಮಹತ್ವದ ಕವಿಗಳಲ್ಲಿ ಒಬ್ಬರಾದ ಜ಼ಾವ್ ಯಿ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಅತಿಥಿಯೊಬ್ಬ ದಿಢೀರನೆ ಮನೆಯ ಬಾಗಿಲು ಬಡಿದ.ಬಂದವನೇ...

ನಗರ ಸಿದ್ದಾಪುರ ರಾಜ್ಯ ಹೆದ್ದಾರಿ -278 ರಸ್ತೆಯ ತೀರ್ಥಹಳ್ಳಿ ಯಿಂದ ಯಡೂರು ಹುಲಿಕಲ್ ಕುಂದಾಪುರ ಕಡೆ ಹೋಗುವ ( ತೀರ್ಥಹಳ್ಳಿ – ಯಡೂರು- ಸುಳುಗೋಡು – ಮಾಸ್ತಿಕಟ್ಟೆ – ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ದಾಪುರ ಮೂಲಕ ಕುಂದಾಪುರ ಸೇರುವ ರಸ್ತೆ) ವಾಹನಗಳು ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕು.

ಶಿವಮೊಗ್ಗ / ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ (ಶಿವಮೊಗ್ಗ / ಸಾಗರ ಕಡೆಯಿಂದ ಹೊಸನಗರ – ನಗರ- ಮಾಸ್ತಿಕಟ್ಟೆ – ಹುಲಿಕಲ್ ಘಾಟ್ – ಹೊಸಂಗಡಿ – ಸಿದ್ಧಾಪುರ ಮೂಲಕ ಕುಂದಾಪುರ ಸೇರುವ ರಸ್ತೆ) ವಾಹನಗಳು ಶಿವಮೊಗ್ಗ ಹೊನ್ನಾವರ ರಾಷ್ಟೀಯ ಹೆದ್ದಾರಿ ಮೂಲಕ ಹೊನ್ನಾವರ ಅನಂತರ ಹೊನ್ನಾವರದಿಂದ – ಭಟ್ಕಳ – ಬೈಂದೂರು ಕುಂದಾಪುರ ರಸ್ತೆ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕೃಷ್ಣಾ ನದಿಯಿಂದ ಉಜ್ಜನಿ ಅಣೆಕಟ್ಟಿಗೆ 40 ಟಿಎಂಸಿ ನೀರು: ರೈತ ಸಂಘದ ತೀವ್ರ ವಿರೋಧ

ಕೃಷ್ಣಾ ನದಿಯಿಂದ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಹಾರಾಷ್ಟ್ರದ ಉಜ್ಜನಿ ಅಣೆಕಟ್ಟಿಗೆ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ ಪ್ರಯಾಣಿಕರಿಗಿಲ್ಲ ಮುಕ್ತಿ!

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ...

ಆಲಮಟ್ಟಿ– ಕುಷ್ಟಗಿ ರೈಲು ಮಾರ್ಗಕ್ಕೆ ಭೂಮಿ ಒದಗಿಸಲು ರೈಲ್ವೇ ಹೋರಾಟ ಸಮಿತಿಯ ಮನವಿ

ರಾಜ್ಯದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಹಾಗೂ ಅನುದಾನ...

ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ‘ಅನ್ವೇಷಣಂ-2.0’ ಕಾರ್ಯಕ್ರಮ

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಗಳಿಗೆ ಸೀಮಿತವಾಗದೆ, ಬದುಕಿನ ಸವಾಲುಗಳನ್ನು ಎದುರಿಸುವ ಅವಕಾಶಗಳನ್ನು...