ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನ.13ರಂದು ಪ್ರಧಾನಿ ಮೋದಿ ಚಾಲನೆ

Date:

ಕರ್ನಾಟಕದ ರಾಜಧಾನಿ ಬೆಂಗಳೂರನ್ನು ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ಗೆ ಸಂಪರ್ಕಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಶುಕ್ರವಾರ ಅಪರಾಹ್ನ 2 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಇದೇ ವೇಳೆ ಮಂಗಳೂರು ಜಂಕ್ಷನ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕರಾವಳಿ ಭಾಗದ ಸಂಸದರು ಭಾಗವಹಿಸಿ, ಬೆಂಗಳೂರು ಕಡೆಗೆ ತೆರಳುವ ವಂದೇ ಭಾರತ್ ರೈಲಿನ ಸಾಂಕೇತಿಕ ಉದ್ಘಾಟನೆ ನೆರವೇರಿಸಲಿದ್ದಾರೆ.

ನವೆಂಬರ್ 13ರಂದು ಉದ್ಘಾಟನೆಗೊಂಡ ಬಳಿಕ ನವೆಂಬರ್ 15ರಿಂದ ಬೆಂಗಳೂರು ಮತ್ತು ಮಡಗಾಂವ್ ನಡುವೆ ಎರಡೂ ದಿಕ್ಕಿನಿಂದ ರೈಲಿನ ನಿಯಮಿತ ಸಂಚಾರ ಆರಂಭವಾಗಲಿದೆ.

ಆಧುನಿಕ ಭಾರತದ ಆಧುನಿಕ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಂದೇ ಭಾರತ್ ಎಕ್ಸ್‌ಪ್ರೆಸ್, ಇನ್ನು ಮುಂದೆ ಬೆಂಗಳೂರು ಮತ್ತು ಕರ್ನಾಟಕ ಕರಾವಳಿಯನ್ನು ನೇರವಾಗಿ ಸಂಪರ್ಕಿಸಲಿದೆ. ಕಳೆದ ಒಂದು ವರ್ಷದಿಂದ ಮಂಗಳೂರು–ಮಡಗಾಂವ್ ನಡುವೆ ಸಂಚರಿಸುತ್ತಿದ್ದ ರೈಲು ಸೇವೆ ಇದೀಗ ಬೆಂಗಳೂರಿನವರೆಗೆ ವಿಸ್ತರಣೆಯಾಗುತ್ತಿದೆ.

ವಿದ್ಯುದ್ದೀಕರಣದಿಂದ ನನಸಾದ ಕನಸು

2019ರಲ್ಲಿ ಅಂದಿನ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಬೆಂಗಳೂರಿಗೆ ವಂದೇ ಭಾರತ್ ರೈಲು ಆರಂಭಿಸುವ ಕನಸು ವ್ಯಕ್ತಪಡಿಸಿದ್ದರು. ಆದರೆ ಸಕಲೇಶಪುರ–ಸುಬ್ರಹ್ಮಣ್ಯ ಘಾಟ್ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಯೋಜನೆ ಕಾರ್ಯರೂಪಕ್ಕೆ ಬಂದಿರಲಿಲ್ಲ.

ನಂತರ ಭಾರತೀಯ ರೈಲ್ವೆಯ ಸಂಪೂರ್ಣ ವಿದ್ಯುದೀಕರಣ ಯೋಜನೆಯಡಿ ಕಾರವಾರ–ಮಂಗಳೂರು–ಬೆಂಗಳೂರು ಮಾರ್ಗದ ವಿದ್ಯುದ್ದೀಕರಣ ಪೂರ್ಣಗೊಂಡಿದ್ದು, ವಂದೇ ಭಾರತ್ ರೈಲು ಸಂಚಾರಕ್ಕೆ ಹಾದಿ ಸುಗಮವಾಯಿತು.

ಕಳೆದ ವರ್ಷ ಬೆಂಗಳೂರಿಗೆ ಭೇಟಿ ನೀಡಿದ್ದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು–ಮಂಗಳೂರು ಮಾರ್ಗವಾಗಿ ಮಡಗಾಂವ್‌ವರೆಗೆ ವಂದೇ ಭಾರತ್ ರೈಲು ಓಡಿಸುವ ನಿರ್ಧಾರ ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು–ಮಂಗಳೂರು ನಡುವೆ ಹಲವು ಬಾರಿ ರೈಲಿನ ಪರೀಕ್ಷಾರ್ಥ ಸಂಚಾರವೂ ನಡೆದಿತ್ತು.

ಇದೀಗ ಬೆಂಗಳೂರು, ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ವರೆಗೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗುತ್ತಿರುವುದು ಕರಾವಳಿ ಭಾಗದ ಜನರ ಬಹುದಿನಗಳ ನಿರೀಕ್ಷೆಯನ್ನು ಸಾಕಾರಗೊಳಿಸಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಪೊಲೀಸರ ಮೇಲೆಯೇ ಪಟಾಕಿ ಎಸೆದು ಬೆದರಿಕೆ: ಪ್ರಕರಣ ದಾಖಲು

ತಡರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ...

ಕಾರವಾರ | ಕಸದಲ್ಲಿ ಸಿಕ್ಕ ಚಿನ್ನದ ಓಲೆ, ವಾರಸುದಾರರಿಗೆ ಹಿಂದಿರುಗಿಸಿದ ಪೌರಕಾರ್ಮಿಕರು

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯದಲ್ಲಿ ಸಿಕ್ಕ ಚಿನ್ನದ ಕಿವಿಯೋಲೆಯನ್ನು...

ಸುರತ್ಕಲ್ | ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ಆಹಾರ ಸುರಕ್ಷತಾ ತಂಡಗಳಿಂದ ದಿಢೀರ್ ದಾಳಿ

ರಾಜ್ಯ ಆರೋಗ್ಯ ಸಚಿವ ಯು.ಟಿ ಖಾದರ್ ಅವರ ಸೂಚನೆಯಂತೆ ಮಂಗಳೂರಿನ ಮುಕ್ಕ...

ಉಪ್ಪಿನಂಗಡಿ | ಕಾರು ಡಿಕ್ಕಿ: ಹೆದ್ದಾರಿಯಲ್ಲಿ ಹೊತ್ತುರಿದ ಬೈಕ್

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಮಗುಚಿ...