ಮಂಗಳೂರು | ಬಂಟ್ವಾಳದಲ್ಲಿ ನೀರಿನ ಸಮಸ್ಯೆ: ಪುರಸಭೆಗೆ ಮುತ್ತಿಗೆ, ಮಹಿಳೆಯರ ವಿಶಿಷ್ಟ ಪ್ರತಿಭಟನೆ

Date:

ಕಳೆದ ಹಲವು ಸಮಯಗಳಿಂದ ಪುರಸಭೆಯಿಂದ ನೀರು ಸರಬರಾಜು ಆಗದೇ ಸಂಕಷ್ಟಕ್ಕೆ ಸಿಲುಕಿದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೌಡೇಲ್ – ರೆಂಗೇಲ್ ನಾಗರಿಕರು ಸಮಸ್ಯೆಯ ವಿರುದ್ಧ ಸೋಮವಾರ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

- Advertisement -

ಮಹಿಳೆಯರು ತನ್ನ ಮನೆಯ ಬಟ್ಟೆಗಳನ್ನು ತಂದು ಪುರಸಭಾ ಕಛೇರಿ ಮುಂಭಾಗದಲ್ಲಿ ತೊಳೆದು ಒಣಗಲು ನೇತಾಡಿಸಿ, ಕೊಡ ಬಕೆಟ್ ಗಳನ್ನಿಟ್ಟು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರತಿಭಟನೆಯನ್ನುದ್ದೇಶಿಸಿ ಕಬೀರ್ ಅಹ್ಮದ್ ಮಾತನಾಡಿ, ನೀರಿನ ಸಮಸ್ಯೆಯ ಬಗ್ಗೆ ಹಲವು ಬಾರಿ ಪುರಸಭಾ ಸದಸ್ಯರು, ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ರೀತಿಯ ಸ್ಪಂದನೆ ದೊರಕಿಲ್ಲ. ಸಮಸ್ಯೆ ಬಗೆಹರಿಯುವ ತನಕ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದರು.

Screenshot 2026 04 13 183352

ಈ ಸಂದರ್ಭದಲ್ಲಿ ಪುರಸಭಾ ಇಂಜಿನಿಯರ್ ಡೊಮೇನಿಕ್ ಡಿಮೆಲ್ಲೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪುರಸಭೆಯ ಎಲ್ಲಾ ಸಮಸ್ಯೆಗಳಿಗೂ ಇಂಜಿನಿಯರ್ ಅವರೇ ಮೂಲ ಕಾರಣವಾಗಿದ್ದು, ಇಂತವರು ಕರ್ತವ್ಯದಲ್ಲಿ ಇರುವುದು ಪುರಸಭೆಗೆ ಕಳಂಕ ಎಂದು ಆರೋಪಿಸಿದರು.

ಕುಡಿಯುವ ನೀರು ತೋಟಕ್ಕೆ ಬಳಸುವ ಮೂಲಕ ದುರ್ಬಳಕೆ ಮಾಡುತ್ತಿರುವ ಬಗ್ಗೆ ಅಧಿಕಾರಿಯ ಗಮನಕ್ಕೆ ತರಲಾಯಿತು, ಅಂತವರನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಾಧಿಕಾರಿ ತಿಳಿಸಿದರು.

ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಶಬೀರ್, ನವಾಝ್, ಖಾಲಿದ್, ಕಬೀರ್ ಅಕ್ಕರಂಗಡಿ, ಅಶ್ರಫ್ ತಲಪಾಡಿ ಹಿರಿಯರಾದ ಕುಞಿಮೋನಾಕ, ಹಮೀದ್, ರಝಾಕ್ ಮೊದಲಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...