ಉಡುಪಿ | ಹಾವಂಜೆಯಲ್ಲಿ “ಬಾಲ ಲೀಲಾ” ಚಿಣ್ಣರ ಬೇಸಿಗೆ ಶಿಬಿರ

Date:

ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದ ಸಹಯೋಗದಲ್ಲಿ ಆಯೋಜಿಸಿರುವ “ಬಾಲ ಲೀಲಾ” ಚಿಣ್ಣರ ಬೇಸಿಗೆ ಶಿಬಿರವು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು.

- Advertisement -

ಮೂಡಂಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಪಕ್ಷಿತಜ್ಞ ಅರವಿಂದ ಕುಡ್ಲ ಶಿಬಿರ ಉದ್ಘಾಟಿಸಿ ಮಾತನಾಡಿ, ಇಂತಹ ಬೇಸಿಗೆ ಶಿಬಿರಗಳು ಇಂದಿನ ಆಧುನಿಕ ಜೀವನಶೈಲಿಯ ನಡುವೆ ಮಕ್ಕಳಲ್ಲಿ ಸಾಂಪ್ರದಾಯಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಸಂವಹನ ಕೌಶಲ್ಯ ವೃದ್ಧಿಗೂ ಸಹಕಾರಿಯಾಗುತ್ತವೆ ಎಂದರು. ಕಲೆ, ಅಭಿನಯ ಹಾಗೂ ಸಂಗೀತವನ್ನು ಒಟ್ಟುಗೂಡಿಸಿ ಮಕ್ಕಳ ಸೃಜನಶೀಲತೆಯನ್ನು ಬೆಳೆಸುವ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕಾರ್ಯಕ್ರಮದಲ್ಲಿ ಎಂ.ಐ.ಟಿ. ಆರ್ಕಿಟೆಕ್ಚರ್ ವಿಭಾಗದ ಉಪನ್ಯಾಸಕ ಗಣೇಶ್ ಉರಾಳ, ಭಾವನಾ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಯಕ್ಷಗುರು ಹಾವಂಜೆ ಮಂಜುನಾಥ ರಾವ್, ಶಿಬಿರ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ, ವಿಶು ರಾವ್ ಹಾವಂಜೆ ಹಾಗೂ ವಿದುಷಿ ಅಕ್ಷತಾ ವಿಶು ರಾವ್ ಉಪಸ್ಥಿತರಿದ್ದರು.

ನಾಲ್ಕು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ಮಕ್ಕಳ ಸೃಜನಶೀಲತೆ ವೃದ್ಧಿಸುವ ಹಾಗೂ “ಕಸವನ್ನು ರಸವಾಗಿಸುವ” ಉದ್ದೇಶದಿಂದ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಅಭಿನಯ, ಆವೆಮಣ್ಣಿನ ಶಿಲ್ಪಕಲೆ, ಕಾವಿ ಕಲೆ, ಪಕ್ಷಿ ವೀಕ್ಷಣೆ, ಮನೆಮದ್ದು, ಗ್ರಾಮೀಣ ಆಟಗಳು, ಸಂಗೀತ ಹಾಗೂ ಬಟ್ಟೆಯ ಮೇಲೆ ಮುದ್ರಣ ಕಲೆ ಸೇರಿದಂತೆ ಹಲವು ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ.

ಶಿಬಿರದ ಸಮಾರೋಪ ಸಮಾರಂಭವು ಮೇ 17ರಂದು ಸಂಜೆ 2.30ಕ್ಕೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ “ವಿಶ್ವ ಕಲಾ ಸಿಂಧು” ಪುರಸ್ಕಾರವನ್ನು ಹಿರಿಯ ಕಲಾವಿದ ವೆಂಕಟರಮಣ ಭಟ್ ಅವರಿಗೆ ಹಾಗೂ “ಭಾವನಾ ಪುರಸ್ಕಾರ”ವನ್ನು ಪಾಕಶಾಸ್ತ್ರ ಪ್ರವೀಣ ವಿನೋದ್‌ರಾಜ್ ಭಟ್ ಅವರಿಗೆ ಪ್ರದಾನ ಮಾಡಲಾಗುವುದು.

ಕಾರ್ಯಕ್ರಮಕ್ಕೆ ಕರ್ನಾಟಕ ಬ್ಯಾಂಕ್ ಉಡುಪಿ ವಿಭಾಗದ ಎಜಿಎಂ ರಮೇಶ್ ವೈದ್ಯ, ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಮುಕ್ತಾ ಬಾಯಿ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಹೇಶ್ ಬಿ. ಶೆಟ್ಟಿ, ಬಾಳೆಬೈಲು ಸರಕಾರಿ ಪ್ರಾಥಮಿಕ ಶಾಲೆಯ ಉಪನ್ಯಾಸಕಿ ಶಾರದಾ ನಾಯಕ್ ಹಾಗೂ ಪ್ರತಿಷ್ಠಾನದ ಅಧ್ಯಕ್ಷ ಹಾವಂಜೆ ಮಂಜುನಾಥಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...